ಆ್ಯಪ್ನಗರ

ಕರ್ರನ್ ಹ್ಯಾಟ್ರಿಕ್; ಪ್ರೀತಿ ಜತೆ ಬಾಂಗ್ರಾ ನೃತ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2019ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಹ್ಯಾಟ್ರಿಕ್ ಸಾಧನೆಗೈದ ಗೌರವಕ್ಕೆ ಇಂಗ್ಲಿಂಷ್ ವೇಗಿ ಸ್ಯಾಮ್ ಕರ್ರನ್ ಪಾತ್ರವಾಗಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಕರ್ರನ್ ಪ್ರತಿನಿಧಿಸುತ್ತಿದ್ದಾರೆ.

Vijaya Karnataka Web 2 Apr 2019, 5:25 pm
ಹೊಸದಿಲ್ಲಿ: 20ರ ಹರೆಯದ ಎಡಗೈ ವೇಗಿ ಸ್ಯಾಮ್ ಕರ್ರನ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೊಚ್ಚಲ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.
Vijaya Karnataka Web sam-curran


ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಪ್ರತಿನಿಧಿಸುತ್ತಿರುವ ಈ ಇಂಗ್ಲಿಂಷ್ ವೇಗಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿದರು.

ಇದು ಪ್ರಸಕ್ತ ಸಾಲಿನ ಐಪಿಎಲ್‌ನ ಮೊದಲ ಹ್ಯಾಟ್ರಿಕ್ ಸಾಧನೆಯಾಗಿದೆ. ಈ ಮೂಲಕ ಪಂಜಾಬ್‌ಗೆ ಗೆಲುವು ಒದಗಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಪಂದ್ಯ ಗೆಲುವಿನ ಬಳಿಕ ಪಂಜಾಬ್ ಸಹ ಮಾಲಕಿ ಹಾಗೂ ಬಾಲಿವುಡ್ ನಟಿ ಪ್ರೀತಿ ಜಿಂಟಾ ಜತೆ ಬಾಂಗ್ರಾ ಶೈಲಿಯಲ್ಲಿ ನೃತ್ಯ ಮಾಡುವ ಮೂಲಕ ಕರ್ರನ್ ಗಮನ ಸೆಳೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌