ಆ್ಯಪ್ನಗರ

ನಾಯಕನ ಆಟವಾಡಿದ ಅಯ್ಯರ್‌ಗೆ ಗೆಲುವಿನ ಶ್ರೇಯಸ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಐದು ವಿಕೆಟ್ ಅಂತರದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ 58 ರನ್ ಗಳಿಸಿ ಅಜೇಯರಾಗುಳಿದರು.

Vijaya Karnataka Web 21 Apr 2019, 12:08 am
ಹೊಸದಿಲ್ಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಐದು ವಿಕೆಟ್ ಅಂತರದ ಅರ್ಹ ಗೆಲುವನ್ನು ದಾಖಲಿಸಿದೆ.
Vijaya Karnataka Web Shreyas Iyer


ನಾಯಕ ಆಟವಾಡಿದ ಶ್ರೇಯಸ್ ಅಯ್ಯರ್ ಡೆಲ್ಲಿ ತಂಡಕ್ಕೆ ಅರ್ಹ ಗೆಲುವನ್ನು ಒದಗಿಸಿಕೊಟ್ಟರು. ಅಲ್ಲದೆ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನವಾದರು.

ಮೊದಲು ಬ್ಯಾಟಿಂಗ್ ನಡೆಸಿದ ಪಂಜಾಬ್ ಕ್ರಿಸ್ ಗೇಲ್ ಬಿರುಸಿನ ಅರ್ಧಶತಕದ (69) ಹೊರತಾಗಿಯೂ ಏಳು ವಿಕೆಟ್ ನಷ್ಟಕ್ಕೆ 163 ರನ್ ಗಳಿಸಲಷ್ಟೇ ಶಕ್ತವಾಯಿತು.

ಬಳಿಕ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಎರಡನೇ ವಿಕೆಟ್‌ಗೆ 92 ರನ್‌ಗಳ ಜತೆಯಾಟ ನೀಡಿದ ಶಿಖರ್ ಧವನ್ ಹಾಗೂ ಶ್ರೇಯಸ್ ಅಯ್ಯರ್ ಗೆಲುವಿನ ರೂವಾರಿ ಎನಿಸಿಕೊಂಡರು.

ಧವನ್ ವಿಕೆಟ್ ಪತನವಾದಾಗ ಡೆಲ್ಲಿ ಚಡಪಡಿಸಿಕೊಂಡಿತು. ಆದರೆ ವಿಕೆಟ್‌ನ ಮಗದೊಂದು ತುದಿಯಿಂದ ಕೆಚ್ಚೆದೆಯ ಇನ್ನಿಂಗ್ಸ್ ಕಟ್ಟಿದ ಅಯ್ಯರ್, ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

49 ಎಸೆತಗಳನ್ನು ಎದುರಿಸಿದ ಅಯ್ಯರ್ ಐದು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 58 ರನ್ ಗಳಿಸಿ ಅಜೇಯರಾಗುಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌