ಆ್ಯಪ್ನಗರ

ವಿಶ್ವಕಪ್‌ಗೂ ಮುನ್ನ ಸ್ಪಷ್ಟ ಸಂದೇಶ ರವಾನಿಸಿದ ಹಾರ್ದಿಕ್ ಪಾಂಡ್ಯ

ಪವರ್ ಹಿಟ್ಟಿಂಗ್ ಹಾರ್ದಿಕ್ ಪಾಂಡ್ಯ ಬಿರುಸಿನ ಆಟದ ನೆರವಿನಿಂದ (15 ಎಸೆತಗಳಲ್ಲಿ 32 ರನ್) ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 12ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 40 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

Vijaya Karnataka Web 18 Apr 2019, 11:54 pm
ಡೆಲ್ಲಿ: ರಾಹುಲ್ ಚಹರ್ ಸ್ಪಿನ್ ಜಾದೂ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡವು, ಇಂಡಿಯನ್ ಪ್ರೀಮಿಯರ್ ಲೀಗ್ 12ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 40 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
Vijaya Karnataka Web Hardik Pandya


ಇದರೊಂದಿಗೆ ಆಡಿರುವ 9ನೇ ಪಂದ್ಯದಲ್ಲಿ ಆರನೇ ಗೆಲುವು ದಾಖಲಿಸಿರುವ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ. ಇದರೊಂದಿಗೆ ಡೆಲ್ಲಿ ಮೂರನೇ ಸ್ಥಾನಕ್ಕೆ ಇಳಿದಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ಪಾಂಡ್ಯ ಸೋದರರಾದ ಹಾರ್ದಿಕ್ ಪಾಂಡ್ಯ (15 ಎಸೆತ, 32 ರನ್) ಹಾಗೂ ಕೃುಣಾಲ್ ಪಾಂಡ್ಯ (ಅಜೇಯ 37 ರನ್, 26 ಎಸೆತ) ಬಿರುಸಿನ ಆಟದ ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 168 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತ್ತು.

ಬಳಿಕ ಗುರಿ ಬೆನ್ನಟ್ಟಿದ ಡೆಲ್ಲಿ ಒಂದು ಹಂತದಲ್ಲಿ 6.2 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 49 ರನ್ ಗಳಿಸಿತ್ತು. ಬಳಿಕ ರಾಹುಲ್ ಚಹರ್ (19/3) ಹಾಗೂ ಜಸ್ಪ್ರೀತ್ ಬುಮ್ರಾ (18/2) ಸೇರಿದಂತೆ ಮುಂಬೈ ಇಂಡಿಯನ್ಸ್ ನಿಖರ ದಾಳಿಗೆ ಸಿಲುಕಿ ಒಂಬತ್ತು ವಿಕೆಟ್ ನಷ್ಟಕ್ಕೆ 128 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

ಮಗದೊಮ್ಮೆ ಮಿಂಚಿನ ಆಟದ ಪ್ರದರ್ಶನ ನೀಡಿದ ಹಾರ್ದಿಕ್ ಪಾಂಡ್ಯ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಕೊನೆಯ ಹಂತದಲ್ಲಿ ಕೇವಲ 15 ಎಸೆತಗಳಲ್ಲೇ ಎರಡು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 32 ರನ್ ಸಿಡಿಸಿದರು.

ಈ ಮೂಲಕ ವಿಶ್ವಕಪ‌್‌ಗೂ ಮುನ್ನ ಎದುರಾಳಿಗಳಿಗೆ ಸ್ಪಷ್ಟ ಸಂದೇಶವನ್ನು ರವಾನಿಸಿದರು. ಅಲ್ಲದೆ ಭಾರತದ ಪರ ನಿರ್ಣಾಯಕ ಅಸ್ತ್ರವಾಗಲಿದ್ದಾರೆ ಎಂಬುದನ್ನು ಸಾಬೀತು ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌