ಆ್ಯಪ್ನಗರ

ದಾಖಲೆ ಮುರಿದ ಧೋನಿಗೆ ಗಿಲ್ಲಿ ವಿಶೇಷ ಸಂದೇಶ

ವೆಸ್ಟ್‌ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಜೇಯ 78 ರನ್ ಬಾರಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಆಸ್ಟ್ರೇಲಿಯಾದ ವಿಕೆಟ್ ಕೀಪಿಂಗ್ ದಂತಕಥೆ ಆ್ಯಡಂ ಗಿಲ್‌ಕ್ರಿಸ್ಟ್ ದಾಖಲೆಯನ್ನು ಹಿಮ್ಮೆಟ್ಟಿಸಿದ್ದರು.

ಏಜೆನ್ಸೀಸ್ 4 Jul 2017, 4:23 pm
ಹೊಸದಿಲ್ಲಿ: ವೆಸ್ಟ್‌ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಜೇಯ 78 ರನ್ ಬಾರಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾಗಿದ್ದ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ಆಸ್ಟ್ರೇಲಿಯಾದ ವಿಕೆಟ್ ಕೀಪಿಂಗ್ ದಂತಕಥೆ ಆ್ಯಡಂ ಗಿಲ್‌ಕ್ರಿಸ್ಟ್ ದಾಖಲೆಯನ್ನು ಹಿಮ್ಮೆಟ್ಟಿಸಿದ್ದರು.
Vijaya Karnataka Web adam gilchrists special message for ms dhoni
ದಾಖಲೆ ಮುರಿದ ಧೋನಿಗೆ ಗಿಲ್ಲಿ ವಿಶೇಷ ಸಂದೇಶ


ಏಕದಿನ ಕ್ರಿಕೆಟ್‌ನಲ್ಲಿ ಮಾಜಿ ಎಡಗೈ ಬ್ಯಾಟ್ಸ್‌ಮನ್ ಆ್ಯಡಂ ಗಿಲ್‌ಕ್ರಿಸ್ಟ್ 9410 ರನ್ ಗಳಿಸಿದ್ದರೆ ಧೋನಿ ಈಗ ನಾಲ್ಕನೇ ಏಕದಿನದಲ್ಲೂ ಅರ್ಧಶತಕ ಬಾರಿಸುವ ಮೂಲಕ ತಮ್ಮ ರನ್‌ ಗಳಿಕೆಯನ್ನು 9496ಕ್ಕೆ ಏರಿಸಿದ್ದಾರೆ.

  Congrats on passing me young fella. Was always a matter of time. #msd #2ndhighest #keepers A post shared by Adam Gilchrist (@gilly381) on Jul 2, 2017 at 5:53am PDT
ಸದ್ಯ 10,000 ಸನಿಹದಲ್ಲಿರುವ ಧೋನಿ ಏಕದಿನ ಅತಿ ಹೆಚ್ಚು ರನ್ ಗಳಿಸಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅಗ್ರಸ್ಥಾನದಲ್ಲಿರುವ ಶ್ರೀಲಂಕಾದ ಕುಮಾರ್ ಸಂಗಕ್ಕರ 14,234 ಏಕದಿನ ರನ್‌ಗಳನ್ನು ಬಾರಿಸಿದ್ದಾರೆ.

ಗಿಲ್ಲಿ ಈಗ ತಮ್ಮ ವಿಶೇಷ ಸಂದೇಶದಲ್ಲಿ ಧೋನಿ ಅವರನ್ನು ಅಭಿನಂದಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುತ್ತಿರುವ ಮಾಜಿ ಆಸೀಸ್ ಆರಂಭಿಕ ಬ್ಯಾಟ್ಸ್‌ಮನ್ ವಿಶ್ವದ ಸರ್ವಕಾಲಿಕ ಶ್ರೇಷ್ಠ ವಿಕೆಟ್ ಕೀಪರ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌