ಆ್ಯಪ್ನಗರ

ರಾಹುಲ್ ಕೈಬಿಟ್ಟ ಟೀಮ್ ಇಂಡಿಯಾ; ಕೊಹ್ಲಿ ನಡೆ ಎತ್ತ?

ಇಂಗ್ಲೆಂಡ್ ವಿರುದ್ಧದ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕರ್ನಾಟಕದ ಯುವ ಭರವಸೆಯ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಕೈಬಿಡಲಾಗಿದೆ.

Vijaya Karnataka Web 17 Jul 2018, 5:07 pm
ಲೀಡ್ಸ್: ಇಂಗ್ಲೆಂಡ್ ವಿರುದ್ಧದ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕರ್ನಾಟಕದ ಯುವ ಭರವಸೆಯ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಕೈಬಿಡಲಾಗಿದೆ.
Vijaya Karnataka Web kl-rahul-14


ಕೇವಲ ಒಂದು ಕೆಟ್ಟ ಪ್ರದರ್ಶನದಿಂದ ರಾಹುಲ್ ಅವರಿಗೆ ಕೊಕ್ ನೀಡಿರುವ ನಾಯಕ ವಿರಾಟ್ ಕೊಹ್ಲಿ ಹಾಗೂ ಟೀಮ್ ಮ್ಯಾನೇಜ್‌ಮೆಂಟ್ ನಿರ್ಧಾರವು ಬಹಳಷ್ಟು ಟೀಕೆಗೆ ಗುರಿಯಾಗುತ್ತಿದೆ.

ಭಾರತ ಬಹಳ ದೀರ್ಘ ಕಾಲದಿಂದ ನಾಲ್ಕನೇ ಕ್ರಮಾಂಕಕ್ಕೆ ಸೂಕ್ತ ಆಟಗಾರನ ಹುಡುಕಾಟ ನಡೆಸುತ್ತಿದೆ. ಇತ್ತೀಚಿಗಿನ ದಿನಗಳಲ್ಲಿ ಅಮೋಘ ಪ್ರದರ್ಶನ ನೀಡಿರುವ ಕೆಎಲ್ ರಾಹುಲ್ ಸರಿಯಾದ ಆಯ್ಕೆ ಎಂಬುದನ್ನು ಮಾಜಿ ಕ್ರಿಕೆಟ್ ಪಂಡಿತರು ಸಹ ಅಭಿಪ್ರಾಯಪಟ್ಟಿದ್ದರು.

ಆದರೆ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಏಕದಿನ ಪಂದ್ಯದಲ್ಲಿ ರಾಹುಲ್ ಕೈಬಿಟ್ಟಿರುವುದು ಮತ್ತೆ ಆಘಾತವನ್ನುಂಟು ಮಾಡಿದೆ.

ಇದರಿಂದ ಕನ್ನಡಿಗನ ಮನೋಬಲಕ್ಕೆ ಮಾನಸಿಕ ಹಿನ್ನಡೆಯುಂಟಾಗುವ ಭೀತಿ ಕಾಡಿದೆ. ಮುಂಬರುವ ಟೆಸ್ಟ್ ಸರಣಿಯಲ್ಲೂ ಟೀಮ್ ಇಂಡಿಯಾ ಪಾಲಿಗೆ ರಾಹುಲ್ ಫಾರ್ಮ್ ನಿರ್ಣಾಯಕವೆನಿಸಲಿದೆ.

ಇಂಗ್ಲೆಂಡ್ ವಿರುದ್ದದ ದ್ವಿತೀಯ ಏಕದಿನ ಪಂದ್ಯದಲ್ಲಿ ರಾಹುಲ್ ಶೂನ್ಯಕ್ಕೆ ಔಟಾಗಿದ್ದರು. ಇದೀಗ ರಾಹುಲ್ ಸ್ಥಾನಕ್ಕೆ ತಮಿಳುನಾಡಿನ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಆಯ್ಕೆ ಮಾಡಲಾಗಿದೆ.

ಏಕದಿನ ಸರಣಿಗೂ ಮುನ್ನ ನಡೆದ ಮೊದಲ ಟ್ವೆಂಟಿ-20 ರಾಹುಲ್ ಬಿರುಸಿನ ಶತಕ ಬಾರಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಸರಣಿ ಗೆಲುವಿನಲ್ಲೂ ನಿರ್ಣಾಯಕ ಪಾತ್ರ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌