ಆ್ಯಪ್ನಗರ

ಸ್ಮಿತ್ ಶತಕ; ಆಂಗ್ಲರ ಮೇಲೆ ಕಾಂಗರೂ ಸವಾರಿ

ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಬಾರಿಸಿರುವ ಅಜೇಯ ಶತಕದ ನೆರವಿನಿಂದ ಭರ್ಜರಿ ಹಿಡಿತ ಸಾಧಿಸಿದೆ.

ಟೈಮ್ಸ್ ಆಫ್ ಇಂಡಿಯಾ 25 Nov 2017, 5:57 pm
ಬ್ರಿಸ್ಬೇನ್: ಇಂಗ್ಲೆಂಡ್ ವಿರುದ್ಧದ ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ಬಾರಿಸಿರುವ ಅಜೇಯ ಶತಕದ ನೆರವಿನಿಂದ ಭರ್ಜರಿ ಹಿಡಿತ ಸಾಧಿಸಿದೆ.
Vijaya Karnataka Web ashes smiths masterful ton as england crack at the gabba
ಸ್ಮಿತ್ ಶತಕ; ಆಂಗ್ಲರ ಮೇಲೆ ಕಾಂಗರೂ ಸವಾರಿ


ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 302 ರನ್‌ಗಳಿಗೆ ಆಲೌಟಾಗಿತ್ತು. ಇದಕ್ಕುತ್ತರವಾಗಿ ಮೂರನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರಿಸಿದ ಆಸೀಸ್‌ಗೆ ನಾಯಕ ಸ್ಮಿತ್ ಆಸರೆಯಾದರು.

ಈ ಮೂಲಕ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 328 ರನ್ ಪೇರಿಸಿತ್ತು. ಈ ಮೂಲಕ 26 ರನ್‌ಗಳ ಮಹತ್ವದ ಮುನ್ನಡೆ ದಾಖಲಿಸಿತ್ತು.

ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಸ್ಮಿತ್ 326 ಎಸೆತಗಳಲ್ಲಿ 14 ಬೌಂಡರಿಗಳ ನೆರವಿನಿಂದ ಅಜೇಯ 141 ರನ್ ಗಳಿಸಿದ್ದರು. ಇವರಿಗೆ ಉತ್ತಮ ಸಾಧ್ ನೀಡಿದ ಶಾನ್ ಮಾರ್ಷ್ (51) ಹಾಗೂ ಪ್ಯಾಟ್ ಕಮ್ಮಿನ್ಸ್ (42) ತಂಡದ ಮೊತ್ತವನ್ನು 300ರ ಗಡಿ ದಾಟಿಸುವಲ್ಲಿ ನೆರವಾಗಿದ್ದರು.

ಬಳಿಕ ದ್ವಿತೀಯ ಇನ್ನಿಂಗ್ಸ್ ಮುಂದುವರಿಸಿರುವ ಇಂಗ್ಲೆಂಡ್ ಆರಂಭಿಕ ಆಘಾತಕ್ಕೊಳಗಾಗಿದ್ದು, ಮೂರನೇ ದಿನದಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 33 ರನ್ ಗಳಿಸಿದೆ. ಈ ಮೂಲಕ ಏಳು ರನ್ ಮುನ್ನಡೆಯನ್ನು ದಾಖಲಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌