ಆ್ಯಪ್ನಗರ

ಲಂಕಾ ಏಕದಿನ ಸರಣಿ; ಅಶ್ವಿನ್, ಜಡೇಜಾಗೆ ವಿಶ್ರಾಂತಿ ಸಾಧ್ಯತೆ

ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಭಾರಿ ಕೆಲಸದೊತ್ತಡವನ್ನು ತಪ್ಪಿಸುವ ನಿಟ್ಟಿನಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಿಂದ ಭಾರತ ಕ್ರಿಕೆಟ್ ತಂಡದ ಅಗ್ರ ಸ್ಪಿನ್ ಅಸ್ತ್ರಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವಿಚಂದ್ರನ್ ಅಶ್ವಿನ್ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.

ಟೈಮ್ಸ್ ಆಫ್ ಇಂಡಿಯಾ 10 Aug 2017, 10:26 pm
ಕ್ಯಾಂಡಿ: ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಭಾರಿ ಕೆಲಸದೊತ್ತಡವನ್ನು ತಪ್ಪಿಸುವ ನಿಟ್ಟಿನಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಿಂದ ಭಾರತ ಕ್ರಿಕೆಟ್ ತಂಡದ ಅಗ್ರ ಸ್ಪಿನ್ ಅಸ್ತ್ರಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವಿಚಂದ್ರನ್ ಅಶ್ವಿನ್ ಅವರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
Vijaya Karnataka Web ashwin jadeja likely to be rested for limited overs series against sri lanka
ಲಂಕಾ ಏಕದಿನ ಸರಣಿ; ಅಶ್ವಿನ್, ಜಡೇಜಾಗೆ ವಿಶ್ರಾಂತಿ ಸಾಧ್ಯತೆ


ಮೂರನೇ ಟೆಸ್ಟ್ ಪಂದ್ಯದ ಬಳಿಕ ಲಂಕಾ ವಿರುದ್ಧದ ಏಕದಿನ ಸರಣಿಯು ಆಗಸ್ಟ್ 20ರಿಂದ ಆರಂಭವಾಗಲಿದೆ. ಆಗಲೇ ಅಶಿಸ್ತಿನ ವರ್ತನೆಯಿಂದಾಗಿ ಒಂದು ಪಂದ್ಯದ ನಿಷೇಧಕ್ಕೊಳಗಾಗಿರುವ ಜಡೇಜಾ ಪಲ್ಲೀಕಲ್‌ನಲ್ಲಿ ಸಾಗಲಿರುವ ಕೊನೆಯ ಟೆಸ್ಟ್ ಪಂದ್ಯಕ್ಕೆ ಅಲಭ್ಯವಾಗಲಿದ್ದಾರೆ.

ಮೊದಲೆರಡು ಪಂದ್ಯಗಳನ್ನು ಅಧಿಕಾರಯುತವಾಗಿ ಜಯಿಸಿರುವ ವಿರಾಟ್ ಕೋಹ್ಲಿ ಪಡೆ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಇದೀಗ ಅಂತಿಮ ಪಂದ್ಯದಲ್ಲೂ ಗೆಲುವು ದಾಖಲಿಸುವ ಮೂಲಕ ಸರಣಿ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ.

ಲಂಕಾ ವಿರುದ್ಧ ಸರಣಿಯಲ್ಲಿ ಅನುಕ್ರಮವಾಗಿ 108.2 ಮತ್ತು 108.3 ಓವರ್‌ಗಳನ್ನು ಎಸೆದಿರುವ ಜಡೇಜಾ ಮತ್ತು ಅಶ್ವಿನ್ ತಲಾ 13 ಮತ್ತು 11 ವಿಕೆಟ್‌ಗಳನ್ನು ಹಂಚಿಕೊಂಡಿದ್ದಾರೆ.

ಅತ್ತ ಲಂಕಾ ಏಕದಿನ ಸರಣಿಯಿಂದ ಬಲಗೈ ವೇಗಿ ಮೊಹಮ್ಮದ್ ಶಮಿ ಅವರಿಗೂ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.

ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ನೇತೃತ್ವದಲ್ಲಿ ಆಗಸ್ಟ್ 13ರಂದು ಭಾರತೀಯ ತಂಡವನ್ನು ಘೋಷಿಸಲಾಗುವುದು. ಭಾರತ ಎ ತಂಡದ ಪರ ಅಮೋಘ ಪ್ರದರ್ಶನ ನೀಡಿರುವ ಆಟಗಾರರಿಗೂ ಬುಲಾವ್ ನೀಡುವ ಸಾಧ್ಯತೆಯಿದೆ.

ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಕುೃನಾಲ್ ಪಾಂಡ್ಯ ಜೊತೆಗೆ ನಾಯಕ ಮನೀಶ್ ಪಾಂಡೆ ತಂಡಕ್ಕೆ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಅತ್ತ ಸೀಮಿತ ಓವರ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ ಸಹ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌