ಆ್ಯಪ್ನಗರ

ಮುಂದುವರೆದ ಚೇತೆಶ್ವರ್ ಆಕ್ರಮಣ ಆಟ

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಇತ್ತೀಚಿನ ವರದಿಯಂತೆ ಭಾರತ 6 ವಿಕೆಟ್ ನಷ್ಟಕ್ಕೆ 435 ರನ್ ಪೇರಿಸಿದೆ.

ಟೈಮ್ಸ್ ಆಫ್ ಇಂಡಿಯಾ 19 Mar 2017, 12:39 pm
ರಾಂಚಿ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಇತ್ತೀಚಿನ ವರದಿಯಂತೆ ಭಾರತ 6 ವಿಕೆಟ್ ನಷ್ಟಕ್ಕೆ 435 ರನ್ ಪೇರಿಸಿದೆ.
Vijaya Karnataka Web australia vs india live third test day four in ranchi
ಮುಂದುವರೆದ ಚೇತೆಶ್ವರ್ ಆಕ್ರಮಣ ಆಟ


ರಾಂಚಿಯ ಜೆಎಸ್ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಚೇತೆಶ್ವರ್ ಪೂಜಾರ್ (164*) ಹಾಗೂ ಶಾಹ (59*) ರನ್ ಸಿಡಿಸುವ ಮೂಲಕ ತಂಡವನ್ನು ಮುನ್ನಡೆಸಿಕೊಂಡು ಹೋಗಿದ್ದಾರೆ.

ಆಸ್ಟ್ರೇಲಿಯಾ ತಂಡ ನೀಡಿದ 451 ರನ್‌ಗಳ ಸವಾಲಿನ ಮೊತ್ತ ಬೆನ್ನು ಹತ್ತಿದ್ದ ಟೀಂ ಇಂಡಿಯಾ, ಆರಂಭಿಕ ಆಟಗಾರರಾದ ರಾಹುಲ್ (67) ಮತ್ತು ಮುರುಳಿ ವಿಜಯ್ (82) ಅರ್ಧಶತಕಗಳ ನೆರವಿನಿಂದ ಉತ್ತಮ ಆರಂಭ ಕಂಡಿತ್ತು. ಆದರೆ, ವಿರಾಟ್ ಕೊಹ್ಲಿ 6, ಅಜಿಂಕ್ಯ ರಹಾನೆ 14 ಹಾಗೂ ಕರುಣ್ ನಾಯರ್ ಕೇವಲ 23 ರನ್ ಪೇರಿಸುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದರು. ಆದರೆ, ಪೂಜಾರ್ ಹಾಗೂ ಶಾಹ ತಂಡದ ಮೊತ್ತವನ್ನು ಹೆಚ್ಚಿಸುವಲ್ಲಿ ಸಫಲರಾಗಿದ್ದಾರೆ.

ಆಸ್ಟ್ರೇಲಿಯಾ ಪರ ಪ್ಯಾಟ್ ಕಮಿನ್ಸ್ 4, ಜೋಶ್ ಹ್ಯಾಝಲ್ವುಡ್ ಹಾಗೂ ಸ್ಟೀವ್ ಓ ಕೀಫ್ ತಲಾ 1 ವಿಕೆಟ್ ಪಡೆದಿದ್ದಾರೆ.

ಲೈವ್ ಸ್ಕೋರ್‌ಗಾಗಿ ಇಲ್ಲಿ ಕ್ಲಿಕ್ಕಿಸಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌