ಆ್ಯಪ್ನಗರ

ಆಸೀಸ್ ಕೋಚ್ ಸ್ಥಾನಕ್ಕೆ ಲೆಹ್ಮನ್ ರಾಜೀನಾಮೆ

ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಕೋಚ್ ಡ್ಯಾರೆನ್ ಲೆಹ್ಮನ್‌ಗೆ ಕ್ಲೀನ್ ಚಿಟ್ ನೀಡಲಾಗಿತ್ತು. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

TIMESOFINDIA.COM 29 Mar 2018, 6:11 pm
Vijaya Karnataka Web darren-lehman-02
ಹೊಸದಿಲ್ಲಿ: ಬಾಲ್ ಟ್ಯಾಂಪರಿಂಗ್ ಪ್ರಕರಣದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಕೋಚ್ ಡ್ಯಾರೆನ್ ಲೆಹ್ಮನ್‌ಗೆ ಕ್ಲೀನ್ ಚಿಟ್ ನೀಡಲಾಗಿತ್ತು. ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಇದರ ಮುಂದುವರಿದ ಬೆಳವಣಿಯೆಂಬಂತೆ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಬಳಿಕ ಆಸ್ಟ್ರೇಲಿಯಾ ಕೋಚ್ ಸ್ಥಾನದಿಂದ ಕೆಳಗಿಳಿಯಲು ಡ್ಯಾರೆನ್ ಲೆಹ್ಮನ್ ನಿರ್ಧರಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಕ್ರಿಕೆಟಿಗ ಕ್ಯಾಮರಾನ್ ಬೆನ್‌ಕ್ರಾಫ್ಟ್ ಚೆಂಡನ್ನು ವಿರೂಪಗೊಳಿಸಿದ್ದರು. ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ನಾಯಕ ಸ್ಟೀವ್ ಸ್ಮಿತ್ ತಪ್ಪೊಪ್ಪಿಕೊಂಡಿದ್ದರು.

ಇದಾದ ಬಳಿಕ ವ್ಯವಸ್ಥಿತ ಷಡ್ಯಂತ್ರದ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಕ್ರಿಕೆಟ್ ಆಸ್ಟ್ರೇಲಿಯಾ, ನಾಯಕ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಮೇಲೆ ಒಂದು ವರ್ಷ ಹಾಗೂ ಬೆನ್‌ಕ್ರಾಫ್ಟ್‌ಗೆ ಒಂಬತ್ತು ತಿಂಗಳುಗಳ ನಿಷೇಧವನ್ನು ವಿಧಿಸಿದೆ.

ಆದರೆ ಕೋಚ್‌ಗೆ ಮೋಸದಾಟದ ಬಗ್ಗೆ ಅರಿವೇ ಇರಲಿಲ್ಲ ಎಂದು ಹೇಳಿ ಕ್ಲೀನ್ ಚಿಟ್ ನೀಡಲಾಗಿತ್ತು. ಆದರೆ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಲು ಲೆಹ್ಮನ್ ನಿರ್ಧರಿಸಿದ್ದಾರೆ.

ಕುಟುಂಬ ಹಾಗೂ ಪ್ರೀತಿ ಪಾತ್ರರೊಂದಿಗೆ ಚರ್ಚಿಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಲೆಹ್ಮನ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌