ಆ್ಯಪ್ನಗರ

ಶ್ರೀಶಾಂತ್ ಮೇಲಿನ ಆಜೀವ ನಿಷೇಧ ಹಿಂಪಡೆಯಲು ಬಿಸಿಸಿಐಗೆ ಕೇರಳ ಹೈಕೋರ್ಟ್ ಸೂಚನೆ

ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಕ್ರಿಕೆಟರ್ ಶ್ರೀಶಾಂತ್ ಮೇಲೆ ಹೇರಲಾಗಿದ್ದ ಜೀವಮಾನ ನಿಷೇಧವನ್ನು ಹಿಂಪಡೆಯುವಂತೆ ಕೇರಳದ ಹೈಕೋರ್ಟ್ ಆದೇಶಿಸಿದೆ.

ಟೈಮ್ಸ್ ಆಫ್ ಇಂಡಿಯಾ 7 Aug 2017, 3:18 pm
ಕೊಚ್ಚಿ: ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಕ್ರಿಕೆಟರ್ ಶ್ರೀಶಾಂತ್ ಮೇಲೆ ಹೇರಲಾಗಿದ್ದ ಜೀವಮಾನ ನಿಷೇಧವನ್ನು ಹಿಂಪಡೆಯುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಕೇರಳ ಹೈಕೋರ್ಟ್ ಸೂಚನೆ ನೀಡಿದೆ.
Vijaya Karnataka Web bcci ordered to lift lifetime ban on cricketer sreesanth by kerala hc
ಶ್ರೀಶಾಂತ್ ಮೇಲಿನ ಆಜೀವ ನಿಷೇಧ ಹಿಂಪಡೆಯಲು ಬಿಸಿಸಿಐಗೆ ಕೇರಳ ಹೈಕೋರ್ಟ್ ಸೂಚನೆ


2013ರ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಯಲ್ಲಿ ಸ್ಪಾಟ್ ಫಿಕ್ಸಿಂಗ್‌ನಲ್ಲಿ ತೊಡಗಿದ್ದ ಆರೋಪದ ಮೇಲೆ ರಾಜಸ್ಥಾನ ರಾಯಲ್ಸ್ ತಂಡದ ಮಾಜಿ ಆಟಗಾರ ಶ್ರೀಶಾಂತ್ ಅವರ ಮೇಲೆ ಅಜೀವ ನಿಷೇಧ ಹೇರಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆದೇಶ ಹೊರಡಿಸಿತ್ತು.

ದಿಲ್ಲಿ ಪೊಲೀಸರು ನೀಡಿದ ಮಾಹಿತಿಯ ಆಧಾರದ ಮೇಲೆ ಬಿಸಿಸಿಐ ಅಜೀವ ನಿಷೇಧ ಹೇರಿರುವುದನ್ನು ಪ್ರಶ್ನಿಸಿ ಶ್ರೀಶಾಂತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಕ್ರಿಕೆಟ್ ನಿಂದ ದೂರವುಳಿಯುವಂತೆ ಆಜೀವ ನಿಷೇಧ ಹೇರಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿರುವುದು ಸಂವಿಧಾನಾತ್ಮಕ ಹಕ್ಕುಗಳನ್ನು ಉಲ್ಲಂಘನೆ ಎಂದು ವಾದಿಸಿದ್ದರು.

ಶ್ರೀಶಾಂತ್ ಮೇಲೆ ಹೇರಿರುವ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಅಜೀವ ನಿಷೇಧವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಕೇರಳ ಹೈಕೋರ್ಟ್‌ಗೆ ತಿಳಿಸಿತ್ತು.


KOCHI: The Kerala High Court on Monday ordered Board of Control for Cricket in India (BCCI) to lift the lifetime ban on cricketer S Sreesanth that was imposed on the basis of spot-fixing charges against him.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌