ಆ್ಯಪ್ನಗರ

ಟೀಮ್ ಇಂಡಿಯಾ ಕೋಚ್ ಹುದ್ದೆಗೆ 2000ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ?

ಭಾರತೀಯ ಕ್ರಿಕೆಟ್ ತಂಡದ ನೂತನ ಕೋಚ್ ಹುದ್ದೆಗಾಗಿ 2000ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ ಎಂಬುದರ ಬಗ್ಗೆ ಮಾಹಿತಿಗಳು ಬಂದಿದೆ. ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿಯು ನೂತನ ಕೋಚ್ ಆಯ್ಕೆ ಮಾಡಲಿದೆ.

Vijaya Karnataka Web 1 Aug 2019, 2:57 pm
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನೂತನ ಪ್ರಧಾನ ಕೋಚ್‌ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಬಂದ ಮಾಹಿತಿಗಳ ಪ್ರಕಾರ 2000ಕ್ಕೂ ಹೆಚ್ಚು ಅರ್ಜಿಗಳು ಮಂಡಳಿಗೆ ಸಲ್ಲಿಕೆಯಾಗಿದೆಯಂತೆ!
Vijaya Karnataka Web ravi-shastri-01


ಕಪಿಲ್ ದೇವ್ ನೇತೃತ್ವದ ತ್ರಿಸದಸ್ಯ ಕ್ರಿಕೆಟ್ ಸಲಹಾ ಸಮಿತಿಯು ನೂತನ ಕೋಚ್ ಆಯ್ಕೆ ಮಾಡಲಿದೆ. ಮುಂಬರುವ ವೆಸ್ಟ್‌ಇಂಡೀಸ್ ಸರಣಿಯ ವೇಳೆಗೆ ಹೊಸ ಕೋಚ್ ಆಯ್ಕೆ ನಡೆಯಲಿದೆ.

ಏತನ್ಮಧ್ಯೆ ಈಗಿನ ಕೋಚ್ ರವಿಶಾಸ್ತ್ರಿ ಅವರಿಗೆ ಯಾರೇ ಸವಾಲೊಡ್ಡುವ ಸಾಧ್ಯತೆ ಬಹಳಷ್ಟು ಕ್ಷೀಣವಾಗಿದೆ. 2017ರಲ್ಲಿ ಕೋಚ್ ಹುದ್ದೆಗೇರಿರುವ ಶಾಸ್ತ್ರಿ ಉತ್ತಮ ದಾಖಲೆಯನ್ನು ಕಾಪಾಡಿಕೊಂಡಿದ್ದಾರೆ.

ಸದ್ಯ ಶಾಸ್ತ್ರಿ ಹೊರತಾಗಿ ಕೋಚ್ ರೇಸ್‌ನಲ್ಲಿ ಟಾಮ್ ಮೂಡಿ, ಮೈಕ್ ಹೆಸನ್, ರಾಬಿನ್ ಸಿಂಗ್, ಮಹೇಲಾ ಜಯರ್ಧನೆ, ಲಾಲ್‌ಚಂದ್ ರಜಪೂತ್ ಹೆಸರುಗಳು ಕೇಳಿಬಂದಿದೆ.

ಇನ್ನು ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್, ಫೀಲ್ಡಿಂಗ್ ಕೋಚ್ ಹುದ್ದೆಗೆ ಆಸಕ್ತಿಯನ್ನು ತೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌