ಆ್ಯಪ್ನಗರ

ಆರ್‌ಟಿಐ ವ್ಯಾಪ್ತಿಗೆ ಬರಲಿ ಬಿಸಿಸಿಐ: ಕಾನೂನು ಆಯೋಗ ಶಿಫಾರಸು

ವಿಶ್ವದ ಅತ್ಯಂತ ಶ್ರೀಮಂತ ಕ್ರೀಡಾಸಂಸ್ಥೆ

Vijaya Karnataka Web 18 Apr 2018, 6:10 pm
ಹೊಸದಿಲ್ಲಿ: ಜಗತ್ತಿನ ಅತ್ಯಂತ ಶ್ರೀಮಂತ ಕ್ರೀಡಾಸಂಸ್ಥೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು ಮಾಹಿತಿ ಹಕ್ಕು ಕಾಯಿದೆ ವ್ಯಾಪ್ತಿಗೆ ತರಬೇಕು ಎಂದು ಭಾರತೀಯ ಕಾನೂನು ಆಯೋಗ ಶಿಫಾರಸು ಮಾಡಿದೆ.
Vijaya Karnataka Web bcci should come under rti act recommends law commission
ಆರ್‌ಟಿಐ ವ್ಯಾಪ್ತಿಗೆ ಬರಲಿ ಬಿಸಿಸಿಐ: ಕಾನೂನು ಆಯೋಗ ಶಿಫಾರಸು


ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯೇ ಈಗ ನಿಯಂತ್ರಣಕ್ಕೊಳಗಾಗಬೇಕಾದ ಪರಿಸ್ಥಿತಿ ಎದುರಾಗಿದೆ.

ಈ ಶ್ರೀಮಂತ ಕ್ರೀಡಾಸಂಸ್ಥೆಯನ್ನು ಆರ್‌ಟಿಐ ವ್ಯಾಪ್ತಿಗೆ ತರಬೇಕು ಎಂದು ಕಾನೂನು ಆಯೋಗ ಶಿಫಾರಸು ಮಾಡಿದೆ.

ಸಂವಿಧಾನ 12ನೇ ಪರಿಚ್ಛೇದದ ಅನ್ವಯ ಬಿಸಿಸಿಐ ಅನ್ನು ರಾಜ್ಯ ಎಂದು ಪರಿಗಣಿಸಿ ಅದನ್ನು ಆರ್‌ಟಿಐ ವ್ಯಾಪ್ತಿಗೆ ತರಬಹುದು ಎಂದು ಶಿಫಾರಸಿನಲ್ಲಿ ತಿಳಿಸಲಾಗಿದೆ.

ಈಗಾಗಲೇ ದೇಶದ ಹಲವಾರು ಕ್ರೀಡಾಸಂಸ್ಥೆಗಳನ್ನು ಆರ್‌ಟಿಐ ವ್ಯಾಪ್ತಿಗೆ ತರಲಾಗಿದೆ. ಬಿಸಿಸಿಐಗೆ ಮಾತ್ರ ಏಕೆ ವಿನಾಯಿತಿ ಎಂದು ಕಾನೂನು ಆಯೋಗ ಪ್ರಶ್ನಿಸಿದೆ.

ತಮಿಳುನಾಡು ಸೊಸೈಟೀಸ್‌ ರಿಜಿಸ್ಟ್ರೇಷನ್‌ ಕಾಯಿದೆಯನ್ವಯ ಬಿಸಿಸಿಐ ಖಾಸಗಿ ಸಂಸ್ಥೆಯಾಗಿ ನೋಂದಾಯಿಸಿಕೊಂಡಿದೆ.

ಒಂದು ವೇಳೆ ಕೇಂದ್ರ ಸರಕಾರ ಶಿಫಾರಸು ಪುರಸ್ಕರಿಸಿ ಬಿಸಿಸಿಐ ಅನ್ನು ಆರ್‌ಟಿಐ ವ್ಯಾಪ್ತಿಗೆ ತಂದರೆ ಯಾರು ಬೇಕಾದರೂ ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳಬಹುದು.

2016ರಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಬಿಸಿಸಿಐ ಅನ್ನು ಆರ್‌ಟಿಐ ವ್ಯಾಪ್ತಿಗೆ ತರಬಹುದೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಕಾನೂನು ಆಯೋಗಕ್ಕೆ ಸೂಚಿಸಿತ್ತು.

ಅದರಂತೆ ಸಂಪೂರ್ಣ ಪರಾಮರ್ಶೆ ನಡೆಸಿರುವ ಭಾರತೀಯ ಕಾನೂನು ಆಯೋಗ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌