ಆ್ಯಪ್ನಗರ

ನೊ ಟೆನ್ಷನ್; ದ.ಆಫ್ರಿಕಾ ಪಂದ್ಯಕ್ಕೂ ಮುನ್ನ ಕೂಲ್ ಮಹಿ ಮಾಡಿದ್ದೇನು?

ಐಸಿಸಿ ಚಾಂಪಿಯನ್ಸ್ ಟ್ರೋಫಿ 2017 ಏಕದಿನ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಸೆಮಿಫೈನಲ್ ತಲುಪಲು ಭಾರತ ಭಾನುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಏಜೆನ್ಸೀಸ್ 10 Jun 2017, 8:23 pm
ಹೊಸದಿಲ್ಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ 2017 ಏಕದಿನ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಸೆಮಿಫೈನಲ್ ತಲುಪಲು ಭಾರತ ಭಾನುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
Vijaya Karnataka Web before the south africa clash ms dhoni spends time with family
ನೊ ಟೆನ್ಷನ್; ದ.ಆಫ್ರಿಕಾ ಪಂದ್ಯಕ್ಕೂ ಮುನ್ನ ಕೂಲ್ ಮಹಿ ಮಾಡಿದ್ದೇನು?


ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಪಂದ್ಯದ ಬಗ್ಗೆ ಅಭಿಮಾನಿಗಳಲ್ಲೂ ಸಾಕಷ್ಟು ಕುತೂಹಲ ಮನೆ ಮಾಡಿದೆ. ಆದರೆ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮಾತ್ರ ಯಾವುದೇ ಟೆನ್ಷನ್ ಇಲ್ಲದೇ ಕೂಲಾಗಿದ್ದಾರೆ.

ಕೂಲ್ ಕಪ್ತಾನ ಖ್ಯಾತಿಯ ಮಹಿ ಮೈದಾನದ ಒಳಗೂ ಹೊರಗೂ ತಮ್ಮ ಶಾಂತಚಿತ್ತ ನಡವಳಿಕೆಯಿಂದಲೇ ಹೆಸರು ಮಾಡಿದ್ದಾರೆ. ಇದೀಗ ಧೋನಿ ಪತ್ನಿ ಸಾಕ್ಷಿ ಸಿಂಗ್ ರಾವತ್ ಕುಟಂಬ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಿದ್ದಾರೆ.

  Family time ! A post shared by Sakshi (@sakshisingh_r) on Jun 9, 2017 at 9:11am PDT ಧೋನಿ ಹಾಗೂ ಪತ್ನಿ ಸಾಕ್ಷಿ ಜೊತೆಗೆ ಮುದ್ದು ಮಗಳು ಝಿವಾ ಕೂಡಾ ಚಿತ್ರದಲ್ಲಿದ್ದಾರೆ. ಸಾಕ್ಷಿ ಚಿತ್ರ ಕ್ಲಿಕ್ಕಿಸುವ ಸಂದರ್ಭದಲ್ಲಿ ಝಿವಾ ಚಿತ್ರ ಬಿಡುಗಡೆಗೊಳಿಸುವುದಲ್ಲಿ ಬ್ಯೂಸಿಯಾಗಿದ್ದರೆ ಧೋನಿ ಜ್ಯೂಸ್ ಕುಡಿಯುತ್ತಿದ್ದಾರೆ.

ಒಟ್ಟಿನಲ್ಲಿ ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ ತಲುಪಲು ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಗೆಲ್ಲಲೇಬೇಕಾಗಿದೆ. ಇದರೊಂದಿಗೆ ಪ್ರಸ್ತುತ ಪಂದ್ಯ ಕ್ವಾರ್ಟರ್ ಫೈನಲ್ ಮಹತ್ವ ಪಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌