ಆ್ಯಪ್ನಗರ

ಗಂಭೀರ್‌ಗೆ ಪದ್ಮ ಪ್ರಶಸ್ತಿ ಗೌರವ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಪದ್ಮ ಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಶನಿವಾರದಂದು ರಾಷ್ಟ್ರಪತಿ ಭವನದಲ್ಲಿ ಭವ್ಯ ಸಮಾರಂಭ ನಡೆದಿತ್ತು.

TOI.in 16 Mar 2019, 6:35 pm
ಹೊಸದಿಲ್ಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಗೌತಮ್ ಗಂಭೀರ್ ಪದ್ಮ ಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
Vijaya Karnataka Web gautam-gambhir-padma-shri


ಶನಿವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು. ಗಂಭೀರ್ ಜತೆಗೆ ನಾಲ್ಕು ಮಂದಿ ಕ್ರೀಡಾಪಟುಗಳಿಗೆ ಪದ್ಮ ಪ್ರಶಸ್ತಿಗಳನ್ನು ನೀಡಲಾಗಿದೆ. ಇದರಲ್ಲಿ ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ ಸೇರಿದ್ದಾರೆ.

ದೇಶದ ನಾಲ್ಕನೇ ಅತ್ಯುನ್ನತ್ತ ನಾಗರಿಕ ಪ್ರಶಶ್ತಿ ಪದ್ಮ ಶ್ರೀ ಸ್ವೀಕರಿಸಿದ ಬಳಿಕ ಟ್ವೀಟ್ ಮಾಡಿರುವ ಗಂಭೀರ್, ಭಾರತೀಯ ಕ್ರಿಕೆಟ್ ಬೆಂಬಲಿಗರು ಹಾಗೂ ನನ್ನ ವಿಮರ್ಶಕರಿಗಿರುವ ಉತ್ತರವಿದು. ನನ್ನ ಪಯಣದಲ್ಲಿ ಇವೆಲ್ಲರು ಭಾಗಿಯಾಗಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇತ್ತೀಚೆಗಷ್ಟೇ ಪುಲ್ವಾಮಾ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಗಂಭೀರ್, ಪಾಕಿಸ್ತಾನ ವಿರುದ್ಧ ಯುದ್ಧ ಭೂಮಿಯಲ್ಲೇ ಮಾತನಾಡುವಂತೆ ಕರೆ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌