ಆ್ಯಪ್ನಗರ

ಧೋನಿ 'ಆಧಾರ್' ಮಾಹಿತಿ ಸೋರಿಕೆ: ಸಾಕ್ಷಿ ಗರಂ

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ 'ಆಧಾರ್' ಮಾಹಿತಿ ಇಂಟರ್‌ನೆಟ್‌ನಲ್ಲಿ ಬಹಿರಂಗಗೊಂಡಿದೆ.

Vijaya Karnataka Web 29 Mar 2017, 1:06 pm
ರಾಂಚಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ 'ಆಧಾರ್' ಮಾಹಿತಿ ಇಂಟರ್‌ನೆಟ್‌ನಲ್ಲಿ ಬಹಿರಂಗಗೊಂಡಿದ್ದು, ಈ ಬಗ್ಗೆ ಅವರ ಪತ್ನಿ ಸಾಕ್ಷಿ ಧೋನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web govt shares m s dhonis private aadhaar info on twitter makes wife sakshi angry
ಧೋನಿ 'ಆಧಾರ್' ಮಾಹಿತಿ ಸೋರಿಕೆ: ಸಾಕ್ಷಿ ಗರಂ


ಸಿಎಸ್‌ಸಿಇ ಗವರ್ನೆನ್ಸ್ ಸರ್ವಿಸ್ ಧೋನಿ 'ಆಧಾರ್' ಕಾರ್ಡ್‌ಗೆ ಬೆರಳಚ್ಚು ನೀಡುತ್ತಿರುವ ಫೋಟೋ‌ ಹಾಗೂ ಅವರು ಸಲ್ಲಿಸಿದ ಅರ್ಜಿಯ ಫೋಟೋವನ್ನು ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟ್ಯಾಗ್ ಮಾಡಿ ಟ್ವಿಟರ್‌ ಜಾಲತಾಣದಲ್ಲಿ ಪ್ರಕಟಿಸಿದೆ.

VLE of @CSCegov_ delivers #Aadhaar service to @msdhoni. Legendary cricketer's #Digital hook (shot). pic.twitter.com/Xe62Ta63An — Ravi Shankar Prasad (@rsprasad) March 28,     2017 ಸರಕಾರಿ ವ್ಯವಸ್ಥೆಯಲ್ಲಿ ಗೌಪತ್ಯೆ ಎಲ್ಲಿದೆ?. ಆಧಾರ್ ಕಾರ್ಡ್‌ಗಾಗಿ ಸಲ್ಲಿಸಿದ ಅರ್ಜಿ ಸಮೇತ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಲಾಗಿದೆ. ಇದು ನೋವಿನ ಸಂಗತಿ ಎಂದು ಧೋನಿ ಪತ್ನಿ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


ವ್ಯಕ್ತಿಯ ವೈಯಕ್ತಿಕ ಮಾಹಿತಿಗಳನ್ನು ಸೋರಿಕೆ ಮಾಡುವುದು ಅಕ್ಷಮ್ಯ ಅಪರಾಧ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವ ರವಿಶಂಕರ್ ಪ್ರಸಾದ್ ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌