ಆ್ಯಪ್ನಗರ

ರಾಹುಲ್ ಅಸ್ಥಿರ ಫಾರ್ಮ್; ಟೆಸ್ಟ್‌ನಲ್ಲೂ ರೋಹಿತ್‌ಗೆ ಆರಂಭಿಕ ಸ್ಥಾನ ನೀಡಲು ದಾದಾ ಸಲಹೆ

ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಸಾಮರ್ಥ್ಯದ ಮೇಲೆ ಅತೀವ ನಂಬಿಕೆಯನ್ನಿಟ್ಟಿರುವ ಮಾಜಿ ನಾಯಕ ಸೌರವ್ ಗಂಗೂಲಿ, ಟೆಸ್ಟ್ ಕ್ರಿಕೆಟ್‌ನಲ್ಲೂ ಆರಂಭಿಕನಾಗಿ ಅವಕಾಶ ನೀಡುವಂತೆ ಸಲಹೆ ಮಾಡಿದ್ದಾರೆ.

Vijaya Karnataka Web 5 Sep 2019, 3:54 pm
ಹೊಸದಿಲ್ಲಿ: ಟೆಸ್ಟ್ ಕ್ರಿಕೆಟ್‌ನಲ್ಲಿ ಕರ್ನಾಟಕದ ಕೆಎಲ್ ರಾಹುಲ್ ಕಳಪೆ ಫಾರ್ಮ್‌ನಿಂದ ಬಳಲುತ್ತಿದ್ದಾರೆ. ತಮಗೆ ಸಿಕ್ಕ ಅವಕಾಶಗಳನ್ನು ಸಮರ್ಥವಾಗಿ ಬಳಕೆ ಮಾಡುವಲ್ಲಿ ವಿಫಲವಾಗಿದ್ದಾರೆ.
Vijaya Karnataka Web rahul-rohit


ಇದೀಗಷ್ಟೇ ಅಂತ್ಯಗೊಂಡ ವೆಸ್ಟ್‌ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ರಾಹುಲ್ ಹಿನ್ನಡೆಯನ್ನು ಅನುಭವಿಸಿದ್ದರು. ಇದರಿಂದಾಗಿ ರೋಹಿತ್ ಶರ್ಮಾ ಅವರನ್ನು ಟೆಸ್ಟ್ ಆರಂಭಿಕನಾಗಿ ಕಣಕ್ಕಿಳಿಸುವಂತೆ ಮಾಜಿ ನಾಯಕ ಸೌರವ್ ಗಂಗೂಲಿ ಮಗದೊಮ್ಮೆ ಪುನರುಚ್ಛಿಸಿದ್ದಾರೆ.

ಓಪನಿಂಗ್ ಸಮಸ್ಯೆ ಇನ್ನು ಬಗೆ ಹರಿಸಬೇಕಿದೆ. ಮಯಾಂಕ್ ಅಗರ್ವಾಲ್ ಉತ್ತಮವಾಗಿ ಆಡುತ್ತಿದ್ದು, ಮತ್ತಷ್ಟು ಅವಕಾಶ ನೀಡಬೇಕಿದೆ. ಕೆಎಲ್ ರಾಹುಲ್ ವೈಫಲ್ಯ ಅನುಭವಿಸಿದ್ದು, ಹೀಗಾಗಿ ಹೊಸ ಹೊಂದಾಣಿಕೆಯನ್ನು ಪರೀಕ್ಷೆ ಮಾಡಬೇಕಿದೆ ಎಂದರು.

ವಿಂಡೀಸ್ ಸರಣಿಗೂ ಮೊದಲೇ ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್‌ಗೆ ಆರಂಭಿಕ ಸ್ಥಾನ ನೀಡುವಂತೆ ಸಲಹೆ ಮಾಡಿದ್ದೆ. ನಾನೀಗಲೂ ಅದೇ ನಂಬಿಕೆಯನ್ನು ಹೊಂದಿದ್ದೇನೆ ಎಂದರು.

ವಿಶ್ವಕಪ್ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲೂ ಆರಂಭಿಕನಾಗಿ ರೋಹಿತ್ ಶರ್ಮಾ ಅವಕಾಶಕ್ಕಾಗಿ ಹಾತೊರೆಯುತ್ತಿದ್ದಾರೆ. ಇದು ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಹಾಗೂ ಹನುಮ ವಿಹಾರಿಗೆ ನೆಲೆಗೊಳ್ಳಲು ಸಹಕಾರಿಯಾಗಲಿದೆ ಎಂದು ನುಡಿದರು.

ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ಐದು ಶತಕಗಳನ್ನು ಸೇರಿದಂತೆ 648 ರನ್ ಗಳಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌