ಆ್ಯಪ್ನಗರ

ವಿರಾಟ್ ಕೊಹ್ಲಿಯೇ ನಂ.1, ಟಾಪ್ 10 ಪಟ್ಟಿಗೆ ಲಗ್ಗೆಯಿಟ್ಟ ಜಸ್ಪ್ರೀತ್ ಬುಮ್ರಾ

ಐಸಿಸಿ ಬಿಡುಗಡೆ ಮಾಡಿರುವ ತಾಜಾ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ. ಅತ್ತ ಬೌಲಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಜಸ್ಪ್ರೀತ್ ಬುಮ್ರಾ ಅಗ್ರ 10ರೊಳಗೆ ಪ್ರವೇಶಿಸಿದ್ದಾರೆ.

Vijaya Karnataka Web 28 Aug 2019, 10:19 am
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮಂಗಳವಾರ ಬಿಡುಗಡೆ ಮಾಡಿರುವ ತಾಜಾ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಅಗ್ರಸ್ಥಾನವನ್ನು ಕಾಪಾಡಿಕೊಂಡಿದ್ದಾರೆ.
Vijaya Karnataka Web jasprit-bumrah-02


ಆಸ್ಪ್ರೇಲಿಯಾದ ಮಾಜಿ ನಾಯಕ ಸ್ಟೀವ್‌ ಸ್ಮಿತ್‌ಗಿಂತ ಆರು ಪಾಯಿಂಟ್‌ಗಳ ಮುನ್ನಡೆಯೊಂದಿಗೆ ಕೊಹ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ ಮುಂದಿನ ಪಂದ್ಯಗಳಲ್ಲಿ ನಿಕಟ ಪೈಪೋಟಿ ಎದುರಾಗುವ ನಿರೀಕ್ಷೆಯಿದೆ.

ಇದೇ ವೇಳೆ ಬೌಲಿಂಗ್ ವಿಭಾಗದಲ್ಲಿ ಬಲಗೈ ವೇಗಿ ಜಸ್ಪ್ರೀತ್ ಬುಮ್ರಾ ಮೊದಲ ಬಾರಿಗೆ ಅಗ್ರ 10ರೊಳಗೆ ಪ್ರವೇಶ ಪಡೆದಿದ್ದಾರೆ. ಭಾರತದ ಪರ ಅತಿ ವೇಗದಲ್ಲಿ 50 ಟೆಸ್ಟ್‌ ವಿಕೆಟ್‌ ಪಡೆದ ವೇಗದ ಬೌಲರ್‌ ಎಂದೆನಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ 7ನೇ ಸ್ಥಾನಕ್ಕೆ ನೆಗೆತ ಕಂಡಿದ್ದಾರೆ.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕೇವಲ 7 ರನ್ ಅಂತರದಲ್ಲಿ ಬುಮ್ರಾ ಐದು ವಿಕೆಟುಗಳನ್ನು ಕಬಳಿಸಿದ್ದರು.

ಬ್ಯಾಟಿಂಗ್ ವಿಭಾಗದಲ್ಲಿ ನ್ಯೂಜಿಲೆಂಡ್‌ ತಂಡದ ನಾಯಕ ಕೇನ್‌ ವಿಲಿಯಮ್ಸನ್‌ ಹಾಗೂ ಭಾರತದ ಚೇತೇಶ್ವರ ಪೂಜಾರ ಕ್ರಮವಾಗಿ 3 ಹಾಗೂ 4ನೇ ಸ್ಥಾನ ಅಲಂಕರಿಸಿದ್ದಾರೆ. ಅಜಿಂಕ್ಯ ರಹಾನೆ 10 ಸ್ಥಾನಗಳ ಜಿಗಿತದೊಂದಿಗೆ 11ನೇ ಸ್ಥಾನದಲ್ಲಿದ್ದಾರೆ.

ಆ್ಯಶಸ್‌ ಸರಣಿಯ 3ನೇ ಟೆಸ್ಟ್‌ನಲ್ಲಿ ಅದ್ವಿತೀಯ ಪ್ರದರ್ಶನ ನೀಡಿದ್ದ ಇಂಗ್ಲೆಂಡ್‌ ತಂಡದ ಬೆನ್‌ ಸ್ಟೋಕ್ಸ್‌, ಆಲ್‌ರೌಂಡರ್‌ ವಿಭಾಗದಲ್ಲಿ ಭಾರಿ ಬಡ್ತಿಯೊಂದಿಗೆ 2ನೇ ಸ್ಥಾನದಲ್ಲಿ ವಿರಾಜಮಾನರಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌