ಆ್ಯಪ್ನಗರ

ಎಲ್ಲ ಪ್ರಕಾರದ ಕ್ರಿಕೆಟ್‌ನಿಂದಲೂ ಅವಕಾಶ ವಂಚಿತರಾದ ಕನ್ನಡಿಗ ಕೆಎಲ್ ರಾಹುಲ್

ಕರ್ನಾಟಕದ ಭರವಸೆಯ ಆಟಗಾರ ಕೆಎಲ್ ರಾಹುಲ್‌ ಪದೇ ಪದೇ ವೈಫಲ್ಯದಿಂದಾಗಿ ಟೀಮ್ ಇಂಡಿಯಾದಲ್ಲಿ ಅವಕಾಶ ವಂಚಿತವಾಗಿದ್ದಾರೆ. ಟೆಸ್ಟ್, ಏಕದಿನ ಹಾಗೂ ಟ್ವೆಂಟಿ-20 ಪ್ರಕಾರದಲ್ಲಿ ಅವಕಾಶಕ್ಕಾಗಿ ಹಾತೊರೆಯುವಂತಾಗಿದೆ.

Vijaya Karnataka Web 24 Sep 2019, 12:54 pm
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಯುವ ಭರವಸೆಯ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್, ಸತತ ವೈಫಲ್ಯದಿಂದಾಗಿ ಟೀಮ್ ಇಂಡಿಯಾದಿಂದ ಅವಕಾಶ ವಂಚಿತವಾಗಿದ್ದಾರೆ.
Vijaya Karnataka Web kl-rahul-03


ಎಲ್ಲ ಪ್ರಕಾರದ ಕ್ರಿಕೆಟ್‌ನಲ್ಲೂ ಟೀಮ್ ಇಂಡಿಯಾದ ಅವಿಭಾಜ್ಯ ಅಂಗವಾಗಿದ್ದರೂ ಇದೀಗ ಯಾಕೋ ರಾಹುಲ್ ಅದೃಷ್ಟ ನೆಟ್ಟಗಿಲ್ಲ. ಪದೇ ಪದೇ ವೈಫಲ್ಯದಿಂದಾಗಿ ಟೆಸ್ಟ್ ತಂಡದಿಂದ ಹೊರದಬ್ಬಲ್ಪಟ್ಟಿದ್ದಾರೆ. ಇದೀಗ ಏಕದಿನ ಹಾಗೂ ಟ್ವೆಂಟಿ-20ನಲ್ಲೂ ಅವಕಾಶ ವಂಚಿತವಾಗಿದ್ದಾರೆ.

ಟಿ20 ಸರಣಿ ಸಮಬಲ; ಟೆಸ್ಟ್‌ನತ್ತ ಚಿತ್ತ ಹಾಯಿಸಿದ ವಿರಾಟ್ ಕೊಹ್ಲಿ ಬಳಗ

ವೆಸ್ಟ್‌ಇಂಡೀಸ್ ಸರಣಿಯಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಆರಂಭಿಕ ಜೋಡಿಯಾಗಿ ಕಣಕ್ಕಿಳಿದಿದ್ದರು. ಆದರೆ ಉತ್ತಮ ಆರಂಭವನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸಲು ವಿಫಲರಾದ ಹಿನ್ನಲೆಯಲ್ಲಿ ರಾಹುಲ್‌ಗೆ ಗೇಟ್ ಪಾಸ್ ನೀಡಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ಸ್ಥಾನಕ್ಕೆ ಆಯ್ಕೆಯಾಗಿರುವ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇದರಿಂದಾಗಿ ಮಗದೊಮ್ಮೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಕ್ಷೀಣವೆನಿಸಿದೆ.

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಆಡಲು ಭಾರತ ರೆಡಿಯಂತೆ?

ಇನ್ನೊಂದೆಡೆ ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಕೆಎಲ್ ರಾಹುಲ್‌ಗೆ ಅವಕಾಶ ಸೀಮಿತವಾಗಿದೆ. ಏಕದಿನ ವಿಶ್ವಕಪ್‌ನಲ್ಲಿ ಆರಂಭದಲ್ಲಿ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ರಾಹುಲ್ ಬಳಿಕ ಆರಂಭಿಕನಾಗಿ ಬಡ್ತಿ ಹೊಂದಿದ್ದರು. ಇದೀಗ ಗಾಯಮುಕ್ತಗೊಂಡಿರುವ ಶಿಖರ್ ಧವನ್ ತಂಡಕ್ಕೆ ಹಿಂತಿರುಗಿರುವ ಹಿನ್ನಲೆಯಲ್ಲಿ ರಾಹುಲ್‌ಗೆ ಮಗದೊಮ್ಮೆ ಅವಕಾಶ ನಿರಾಕರಿಸಲ್ಪಟ್ಟಿದೆ.

ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ತಮ್ಮ ಸಾಮರ್ಥ್ಯವನ್ನು ಈಗಾಗಲೇ ಸಾಬೀತು ಮಾಡಿರುವ ಹಿನ್ನಲೆಯಲ್ಲಿ ಮಧ್ಯಮ ಕ್ರಮಾಂಕದಲ್ಲೂ ರಾಹುಲ್ ಹಿನ್ನಡೆ ಅನುಭವಿಸಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಟ್ವೆಂಟಿ-20 ಸರಣಿಯಲ್ಲೂ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡರೂ ರಾಹುಲ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದರಿಂದಾಗಿ ಟೆಸ್ಟ್, ಏಕದಿನ ಬೆನ್ನಲ್ಲೇ ಟ್ವೆಂಟಿ-20 ಪ್ರಕಾರದಲ್ಲೂ ವೈಫಲ್ಯ ಅನುಭವಿಸಿದ್ದಾರೆ.

ಒಟ್ಟಾರೆಯಾಗಿ ರಾಹುಲ್ ನಡೆ ಎತ್ತ ಎಂಬುದು ಬಹಳಷ್ಟು ಕುತೂಹಲಕ್ಕೆಡೆ ಮಾಡಿದೆ. ಈ ಎಲ್ಲ ಸವಾಲುಗಳನ್ನು ತಮ್ಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ರಾಹುಲ್ ಹೇಗೆ ಮೆಟ್ಟಿಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌