ಆ್ಯಪ್ನಗರ

ಡಬಲ್ ಆಘಾತ; ಭುವಿ ಔಟ್, ಬುಮ್ರಾ ಡೌಟ್!

ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಡಬಲ್ ಆಘಾತಕ್ಕೊಳಗಾಗಿದೆ. ಗಾಯಕ್ಕೆ ತುತ್ತಾಗಿರುವ ಬಲಗೈ ವೇಗಿ ಭುವನೇಶ್ವರ್ ಕುಮಾರ್ ಮೊದಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಅಲಭ್ಯವಾಗಿದ್ದಾರೆ. ಅತ್ತ ತಂಡದಲ್ಲಿ ಹೆಸರಿಸಿಕೊಂಡರೂ ಇನ್ನಷ್ಟೇ ಚೇತರಿಸಿಕೊಳ್ಳುತ್ತಿರುವ ಜಸ್ಪ್ರೀತ್ ಬುಮ್ರಾ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಆಡುವುದು ಅನುಮಾನವೆನಿಸಿದೆ.

TOI.in 20 Jul 2018, 1:02 pm
ಲಂಡನ್: ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಬಹುನಿರೀಕ್ಷಿತ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 01ರಂದು ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
Vijaya Karnataka Web indian-pacers


ಆದರೆ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಡಬಲ್ ಆಘಾತಕ್ಕೊಳಗಾಗಿದೆ. ಗಾಯಕ್ಕೆ ತುತ್ತಾಗಿರುವ ಬಲಗೈ ವೇಗಿ ಭುವನೇಶ್ವರ್ ಕುಮಾರ್ ಮೊದಲ ಮೂರು ಟೆಸ್ಟ್ ಪಂದ್ಯಗಳಲ್ಲಿ ಅಲಭ್ಯವಾಗಿದ್ದಾರೆ.

ಅತ್ತ ತಂಡದಲ್ಲಿ ಹೆಸರಿಸಿಕೊಂಡರೂ ಇನ್ನಷ್ಟೇ ಚೇತರಿಸಿಕೊಳ್ಳುತ್ತಿರುವ ಜಸ್ಪ್ರೀತ್ ಬುಮ್ರಾ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಆಡುವುದು ಅನುಮಾನವೆನಿಸಿದೆ. ಇದರೊಂದಿಗೆ ಎರಡು ಪ್ರಮುಖ ಬೌಲರ್‌ಗಳ ಅಭಾವ ಭಾರತಕ್ಕೆ ಕಾಡಲಿದೆ.


ಇದರೊಂದಿಗೆ ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ ಹಾಗೂ ಉಮೇಶ್ ಯಾದವ್ ಅವರನ್ನು ಟೀಮ್ ಇಂಡಿಯಾ ನೆಚ್ಚಿಕೊಂಡಿದೆ. ಅಷ್ಟಕ್ಕೂ ಈ ಮೂವರು ವೇಗಿಗಳ ಫಾರ್ಮ್‌ ಚಿಂತೆಗೆ ಕಾರಣವಾಗಿದೆ.

ಹಾರ್ದಿಕ್ ಪಾಂಡ್ಯ ಆಲ್‌ರೌಂಡರ್ ಸ್ಥಾನವನ್ನು ತುಂಬಲಿದ್ದಾರೆ. ಮಗದೊಬ್ಬ ವೇಗಿ ಶಾರ್ದೂಲ್ ಠಾಕೂರ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಅನುಮಾನವೆನಿಸಿದೆ.

ಒಟ್ಟಿನಲ್ಲಿ ಭುವಿ-ಬುಮ್ರಾ ಅನುಪಸ್ಥಿತಿಯಲ್ಲಿ ಎದುರಾಳಿ ತಂಡದ 20 ವಿಕೆಟ್‌ಗಳನ್ನು ಕಿತ್ತು ಐತಿಹಾಸಿಕ ಟೆಸ್ಟ್ ಸರಣಿ ಗೆಲುವು ದಾಖಲಿಸಲು ಟೀಮ್ ಇಂಡಿಯಾಕ್ಕೆ ಸಾಧ್ಯವೇ ಎಂಬುದಕ್ಕೆ ಮುಂಬರುವ ದಿನಗಳಲ್ಲಿ ಉತ್ತರ ಲಭಿಸಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌