ಆ್ಯಪ್ನಗರ

ವಿಂಡೀಸ್ ವಿರುದ್ಧದ ಏಕದಿನ ಸರಣಿಯಿಂದಲೂ ಶಿಖರ್ ಧವನ್ ಔಟ್?

ಟ್ವೆಂಟಿ-20 ಸರಣಿಯ ಬಳಿಕ ವೆಸ್ಟ್‌ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಸರಣಿಯಿಂದಲೂ ಗಾಯಾಳು ಶಿಖರ್ ಧವನ್ ಅಲಭ್ಯರಾಗುವ ಸಾಧ್ಯತೆಯಿದೆ. ಧವನ್ ಅಲಭ್ಯವಾದರೆ ಯುವ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಯಿದೆ.

Vijaya Karnataka Web 10 Dec 2019, 11:16 am
ಹೊಸದಿಲ್ಲಿ: ಗಾಯದಿಂದ ಇನ್ನಷ್ಟೇ ಚೇತರಿಸಿಕೊಳ್ಳುತ್ತಿರುವ ಎಡಗೈ ಆಕ್ರಮಣಕಾರಿ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್, ವೆಸ್ಟ್‌ಇಂಡೀಸ್ ವಿರುದ್ಧ ತವರಿನಲ್ಲಿ ನಡೆಯಲಿರುವ ಏಕದಿನ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆಯಿದೆ. ಬಲ್ಲ ಮೂಲಗಳ ಪ್ರಕಾರ, ಗಾಯದಿಂದ ಸಂಪೂರ್ಣವಾಗಿ ಗುಣಮುಖರಾಗಲು ಧವನ್‌ಗೆ ಇನ್ನಷ್ಟು ಸಮಯ ವಿಶ್ರಾಂತಿ ಸೂಚಿಸಲಾಗುವುದು. ಈ ಮೂಲಕ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುವ ಗುರಿಯಿರಿಸಲಾಗಿದೆ.
Vijaya Karnataka Web ಶಿಖರ್ ಧವನ್


ಇತ್ತೀಚೆಗಷ್ಟೇ ಮುಕ್ತಾಯಗೊಂಡ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ವೇಳೆಯಲ್ಲಿ ಧವನ್ ಮೊಣಕಾಲಿಗೆ ಗಾಯ ಮಾಡಿದ್ದರು. ಈ ಮಧ್ಯೆ ವಿಂಡೀಸ್ ವಿರುದ್ಧದ ತಲಾ ಮೂರು ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಗೆ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದರು. ಆದರೆ ಗಾಯ ಗುಣಮುಖರಾಗದ ಹಿನ್ನಲೆಯಲ್ಲಿ ಟಿ20 ತಂಡದಲ್ಲಿ ಧವನ್ ಸ್ಥಾನಕ್ಕೆ ಸಂಜು ಸ್ಯಾಮ್ಸನ್‌ರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಮೊದಲೆರಡು ಪಂದ್ಯಗಳಲ್ಲಿ ಅವಕಾಶ ವಂಚಿತವಾಗಿದ್ದಾರೆ.

ಇದೀಗ ಏಕದಿನ ಸರಣಿಯಲ್ಲೂ ಯುವ ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಸಂಜು ಜತೆಗೆ ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್ ಹಾಗೂ ಪೃಥ್ವಿ ಶಾ ಸ್ಪರ್ಧೆಯಲ್ಲಿದ್ದಾರೆ. ಈ ಪೈಕಿ ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಈ ಸಮಸ್ಯೆಗೆ ಉತ್ತರ ಹುಡುಕದಿದ್ದಲ್ಲಿ ಭಾರತ ಟಿ20 ವಿಶ್ವಕಪ್ ಗೆಲ್ಲುವುದೇ ಡೌಟ್!

ಟಿ20 ಪ್ರಕಾರದಂತೆ ಏಕದಿನದಲ್ಲೂ ರೋಹಿತ್ ಶರ್ಮಾ ಜತೆಗೆ ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಿದರೆ ಅಚ್ಚರಿಯಿಲ್ಲ. ಚುಟುಕು ಪ್ರಕಾರದಲ್ಲಿ ಲಯ ಕಂಡುಕೊಂಡಿರುವ ರಾಹುಲ್ ಇದೀಗ ಏಕದಿನದಲ್ಲೂ ಅವಕಾಶಕ್ಕಾಗಿ ಹಾತೊರೆಯುತ್ತಿದ್ದಾರೆ.

ವಿಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯು ಅನುಕ್ರಮವಾಗಿ ಚೆನ್ನೈ (ಡಿ. 15), ವಿಶಾಖಪಟ್ಟಣ (ಡಿ. 18) ಹಾಗೂ ಕಟಕ್ (ಡಿ. 22) ಮೈದಾನಗಳಲ್ಲಿ ನಡೆಯಲಿದೆ.

ಶ್..! ಸುಮ್ಮನಿರು; ವಿರಾಟ್ ವಿಕೆಟ್ ಕಿತ್ತರೂ ಕೆಸ್ರಿಕ್‌ಗೆ ಸಂಭ್ರಮಾಚರಿಸಲು ಭಯ ಕಾಡಿತೇ?

ಭಾರತ ಏಕದಿನ ತಂಡ ಇಂತಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಕೇದರ್ ಜಾಧವ್, ಶಿವಂ ದುಬೆ, ರವೀಂದ್ರ ಜಡೇಜಾ, ಕೆಎಲ್ ರಾಹುಲ್, ರಿಷಬ್ ಪಂತ್, ಯುಜ್ವೇಂದ್ರ ಚಹಲ್, ಕುಲ್‌ದೀಪ್ ಯಾದವ್, ದೀಪಕ್ ಚಹರ್, ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್.

ಶಿಖರ್ ಧವನ್‌ ಅಲಭ್ಯವಾದರೆ ಸ್ಪರ್ಧೆಯಲ್ಲಿರುವ ಆಟಗಾರರ ಪಟ್ಟಿ: ಸಂಜು ಸ್ಯಾಮ್ಸನ್, ಮಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಪೃಥ್ವಿ ಶಾ.

ಬೌಂಡರಿ ಲೈನ್‌ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಕ್ಯಾಚ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌