ಆ್ಯಪ್ನಗರ

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ

ಇಂಗ್ಲೆಂಡ್‌ ವಿರುದ್ಧ ಈ ತಿಂಗಳ ಕೊನೆಯ ವಾರ ಆರಂಭಗೊಳ್ಳಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಮಹಿಳಾ ಕ್ರಿಕೆಟ್‌ ತಂಡವನ್ನು ಶನಿವಾರ ಪ್ರಕಟಿಸಲಾಗಿದೆ. ಸರಣಿ ಮುಂಬಯಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

PTI 10 Feb 2019, 5:00 am
ಹೊಸದಿಲ್ಲಿ : ಇಂಗ್ಲೆಂಡ್‌ ವಿರುದ್ಧ ಈ ತಿಂಗಳ ಕೊನೆಯ ವಾರ ಆರಂಭಗೊಳ್ಳಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಮಹಿಳಾ ಕ್ರಿಕೆಟ್‌ ತಂಡವನ್ನು ಶನಿವಾರ ಪ್ರಕಟಿಸಲಾಗಿದೆ. ಸರಣಿ ಮುಂಬಯಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.
Vijaya Karnataka Web india name womens squad for odi series against england
ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ


ನ್ಯೂಜಿಲೆಂಡ್‌ ಸರಣಿಯಲ್ಲಿ ಪಾಲ್ಗೊಂಡಿದ್ದ ಮಿಥಾಲಿ ರಾಜ್‌ ನೇತೃತ್ವದ 15 ಸದಸ್ಯರ ಬಳಗವನ್ನೇ ಇದೇ 22ರಂದು ಆರಂಭವಾಗಲಿರುವ ಸರಣಿಗೆ ಉಳಿಸಿಕೊಳ್ಳಲಾಗಿದೆ. ''ಇಂಗ್ಲೆಂಡ್‌ ಮಹಿಳಾ ತಂಡದ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಅಖಿಲ ಭಾರತ ಮಹಿಳಾ ಕ್ರಿಕೆಟ್‌ ಆಯ್ಕೆ ಸಮಿತಿ ಭಾರತ ತಂಡವನ್ನು ಆಯ್ಕೆ ಮಾಡಿದೆ,'' ಎಂದು ಶನಿವಾರ ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಐಸಿಸಿ ಮಹಿಳಾ ಚಾಂಪಿಯನ್‌ಷಿಪ್‌ ಅಂಗವಾಗಿ ಮೂರು ಪಂದ್ಯಗಳ ಏಕದಿನ ಸರಣಿ ಆಯೋಜಿಸಲಾಗಿದೆ.

ಸದ್ಯ ನ್ಯೂಜಿಲೆಂಡ್‌ ಪ್ರವಾಸದಲ್ಲಿರುವ ವನಿತೆಯರ ತಂಡ, 3 ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಿಂದ ಗೆದ್ದುಕೊಂಡಿತ್ತು. ಇದೇ ವೇಳೆ ಫೆ.18ರಂದು ನಡೆಯಲಿರುವ ಅಭ್ಯಾಸ ಪಂದ್ಯಕ್ಕೆ ಅಧ್ಯಕ್ಷ ರ ಇಲೆವೆನ್‌ ತಂಡವನ್ನು ಪ್ರಕಟಿಸಲಾಗಿದೆ.

ಭಾರತ ತಂಡ: ಮಿಥಾಲಿ ರಾಜ್‌(ನಾಯಕಿ), ಜೂಲನ್‌ ಗೋಸ್ವಾಮಿ, ಸ್ಮೃತಿ ಮಂಧಾನಾ, ಜೆಮಿಮಾ ರೋಡ್ರಿಗಸ್‌, ಹರ್ಮನ್‌ಪ್ರೀತ್‌ ಕೌರ್‌, ದೀಪ್ತಿ ಶರ್ಮಾ, ತಾನಿಯಾ ಭಾಟಿಯಾ (ವಿಕೆಟ್‌ಕೀಪರ್‌), ಆರ್‌.ಕಲ್ಪನಾ, ಮೋನಾ ಮೆಶ್ರಮ್‌, ಏಕ್ತಾ ಬಿಶ್ಟ್‌, ರಾಜೇಶ್ವರಿ ಗಾಯಕ್ವಾಡ್‌, ಪೂನಮ್‌ ಯಾದವ್‌, ಶಿಖಾ ಪಾಂಡೆ, ಮಾನ್ಸಿ ಜೋಶಿ, ಪೂನಮ್‌ ರಾವತ್‌.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌