ಆ್ಯಪ್ನಗರ

ಜನವರಿಯಲ್ಲಿ ಕೊಹ್ಲಿ ಪಡೆ ನ್ಯೂಜಿಲೆಂಡ್‌ ಪ್ರವಾಸ

ಭಾರತ ತಂಡ ಮುಂದಿನ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್‌ ಪ್ರವಾಸ ಕೈಗೊಳ್ಳಲಿದ್ದು, ಆತಿಥೇಯ ತಂಡದ ವಿರುದ್ಧ 5 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ.

Vijaya Karnataka 1 Aug 2018, 11:19 am
ವೆಲ್ಲಿಂಗ್ಟನ್‌: ಭಾರತ ತಂಡ ಮುಂದಿನ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್‌ ಪ್ರವಾಸ ಕೈಗೊಳ್ಳಲಿದ್ದು, ಆತಿಥೇಯ ತಂಡದ ವಿರುದ್ಧ 5 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ20 ಸರಣಿಯಲ್ಲಿ ಪಾಲ್ಗೊಳ್ಳಲಿದೆ.
Vijaya Karnataka Web kohli dhoni


ಏಕದಿನ ಸರಣಿ ಜನವರಿ 23ರಂದು ನೇಪಿಯರ್‌ನಲ್ಲಿ ಆರಂಭಗೊಂಡು ಫೆಬ್ರವರಿ 3ರಂದು ವೆಲ್ಲಿಂಗ್ಟನ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ನಂತರ, ಫೆಬ್ರವರಿ 6ರಂದು ವೆಲ್ಲಿಂಗ್ಟನ್‌ನಲ್ಲಿ 3 ಪಂದ್ಯಗಳ ಟಿ20 ಸರಣಿಗೆ ಚಾಲನೆ ದೊರೆಯಲಿದೆ. ಫೆಬ್ರವರಿ 10ರಂದು ಹ್ಯಾಮಿಲ್ಟನ್‌ನಲ್ಲಿ ಕೊನೆಯ ಟಿ20 ಪಂದ್ಯದೊಂದಿಗೆ ಟೀಂ ಇಂಡಿಯಾದ ಪ್ರವಾಸ ಸರಣಿಗೆ ತೆರೆ ಬೀಳಲಿದೆ.

ಐಸಿಸಿ ಮಹಿಳಾ ಚಾಂಪಿಯನ್‌ಷಿಪ್‌

ಆತಿಥೇಯ ನ್ಯೂಜಿಲೆಂಡ್‌ ತಂಡದ ವಿರುದ್ಧ ಕೊಹ್ಲಿ ಪಡೆಯ ಟಿ20 ಸರಣಿ ನಡುವೆಯೇ ಫೆಬ್ರವರಿ ಆರಂಭದಲ್ಲಿ ಭಾರತದ ಮಹಿಳಾ ತಂಡ ಹಾಗೂ ಆತಿಥೇಯ ಮಹಿಳಾ ತಂಡಗಳ ನಡುವಣ 3 ಪಂದ್ಯಗಳ ಟಿ20 ಸರಣಿ ಆರಂಭಗೊಳ್ಳುತ್ತದೆ. ಉಭಯ ದೇಶಗಳ ಮಹಿಳಾ ತಂಡಗಳು 3 ಪಂದ್ಯಗಳ ಐಸಿಸಿ ಮಹಿಳಾ ಚಾಂಪಿಯನ್‌ಷಿಪ್‌ನಲ್ಲಿ ಸೆಣಸಾಡಲಿವೆ. 2021ರಲ್ಲಿ ನ್ಯೂಜಿಲೆಂಡ್‌ನಲ್ಲೇ ನಡೆಯಲಿರುವ ಮಹಿಳಾ ವಿಶ್ವಕಪ್‌ಗೆ ನೇರ ಅರ್ಹತೆ ಗಿಟ್ಟಿಸುವ 7 ತಂಡಗಳನ್ನು (ಆತಿಥೇಯ ತಂಡವನ್ನು ಹೊರತುಪಡಿಸಿ) ಆಯ್ಕೆ ಮಾಡಿಕೊಳ್ಳಲು ಈ ಚಾಂಪಿಯನ್‌ಷಿಪ್‌ ನೆರವಿಗೆ ಬರಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌