ಆ್ಯಪ್ನಗರ

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಡುವಂತೆ ದಿಗ್ಗಜರ ಸಲಹೆ

ಏಜೆನ್ಸೀಸ್‌ ಮುಂಬಯಿ ಹಾಲಿ ಚಾಂಪಿಯನ್‌ ಭಾರತ ತಂಡ ಪ್ರಸಕ್ತ ಸಾಲಿನ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಡಬೇಕೆಂದು ದಿಗ್ಗಜ ಕ್ರಿಕೆಟಿಗರಾದ ಸಚಿನ್‌ ತೆಂಡೂಲ್ಕರ್‌ ಮತ್ತು ...

ಏಜೆನ್ಸೀಸ್ 5 May 2017, 4:00 am

ಮುಂಬಯಿ: ಹಾಲಿ ಚಾಂಪಿಯನ್‌ ಭಾರತ ತಂಡ ಪ್ರಸಕ್ತ ಸಾಲಿನ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಡಬೇಕೆಂದು ದಿಗ್ಗಜ ಕ್ರಿಕೆಟಿಗರಾದ ಸಚಿನ್‌ ತೆಂಡೂಲ್ಕರ್‌ ಮತ್ತು ರಾಹುಲ್‌ ದ್ರಾವಿಡ್‌ ಅಭಿಪ್ರಾಯ ಪಟ್ಟಿರುವುದಾಗಿ ಎಎಸ್‌ಪಿಎನ್‌ ಕ್ರಿಕ್‌ಇನ್ಫೊ ವರದಿ ಮಾಡಿದೆ.

ಭಾರತ ತಂಡ ಮಿನಿ ವಿಶ್ವಕಪ್‌ನಲ್ಲಿ ಪ್ರಶಸ್ತಿ ಉಳಿಸಿಕೊಳ್ಳುವ ಅವಕಾಶವನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು ಎಂದು ಸಚಿನ್‌, ದ್ರಾವಿಡ್‌ ಸಹಿತ ಹಲವಾರು ಮಾಜಿ ಕ್ರಿಕೆಟಿಗರು ಹೇಳಿದ್ದಾರೆ. ಈ ಬಗ್ಗೆ ತಮ್ಮನ್ನು ಸಂಪರ್ಕಿಸಿದ ಎಎಸ್‌ಪಿಎನ್‌ ಕ್ರಿಕ್‌ಇನ್ಫೊಗೆ ಮಾಜಿ ಕ್ರಿಕೆಟಿಗರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಸಚಿನ್‌ ತೆಂಡೂಲ್ಕರ್‌, ರಾಹುಲ್‌ ದ್ರಾವಿಡ್‌ ಸಹಿತ ಜಿ.ಆರ್‌ ವಿಶ್ವನಾಥ್‌, ಜಹೀರ್‌ ಖಾನ್‌, ಸಂದೀಪ್‌ ಪಾಟೀಲ್‌, ಸಂಜಯ್‌ ಮಾಂಜ್ರೇಕರ್‌, ಆಕಾಶ್‌ ಚೋಪ್ರಾ, ಅಜಿತ್‌ ಅಗರ್ಕರ್‌, ವೆಂಕಟೇಶ್‌ ಪ್ರಸಾದ್‌, ಸಾಬಾ ಕರೀಂ, ಮುರಳಿ ಕಾರ್ತಿಕ್‌ ಮತ್ತು ದೀಪ್‌ದಾಸ್‌ ಗುಪ್ತಾ ಭಾರತ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಆಡಬೇಕೆಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌