ಆ್ಯಪ್ನಗರ

IND vs SL: 'ಏಕದಿನ ತಂಡದಲ್ಲಿ ಸಂಜು ಸ್ಯಾಮ್ಸನ್‌ ಇಲ್ಲ'-ಬಿಸಿಸಿಐ ವಿರುದ್ಧ ಫ್ಯಾನ್ಸ್ ಕಿಡಿ!

India's ODI Squad: 2023ರ ವರ್ಷದ ಆರಂಭದಲ್ಲೇ ಭಾರತ ತಂಡವು ಶ್ರೀಲಂಕಾ ವಿರುದ್ಧ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿ ಆಡಲಿದೆ. ಅದಕ್ಕಾಗಿ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾ ಮ್ಯಾನೇಜ್ ಮೆಂಟ್, ಶ್ರೀಲಂಕಾ ವಿರುದ್ಧದ ಸರಣಿ ಮೂಲಕವೇ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ತಂಡದ ಸಂಯೋಜನೆಗೂ ಮುಂದಾಗಿದೆ. ಇದರ ನಡುವೆ ಟಿ20 ತಂಡದಲ್ಲಿ ಸಂಜು ಸ್ಯಾಮ್ಸನ್‌ಗೆ ಸ್ಥಾನ ಕಲ್ಪಿಸಿ, ಏಕದಿನ ತಂಡದಿಂದ ಹೊರಗಿಟ್ಟಿರುವುದಕ್ಕೆ ಅಭಿಮಾನಿಗಳು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited byರಮೇಶ ಕೋಟೆ | Vijaya Karnataka Web 28 Dec 2022, 10:46 am

ಹೈಲೈಟ್ಸ್‌:

  • 2023ರ ವರ್ಷದ ಆರಂಭದಲ್ಲೇ ಪ್ರವಾಸಿ ಶ್ರೀಲಂಕಾ ವಿರುದ್ಧ ಏಕದಿನ, ಟಿ20 ಸರಣಿಗಳನ್ನು ಆಡಲಿರುವ ಭಾರತ ತಂಡ.
  • ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಸ್ಥಾನ ಪಡೆದು, ಏಕದಿನ ಸರಣಿಯಲ್ಲಿ ಸ್ಥಾನ ಕಳೆದುಕೊಂಡ ಸಂಜು ಸ್ಯಾಮ್ಸನ್‌.
  • ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್‌ಗೆ ಚಾನ್ಸ್‌ ನೀಡದ ಬಗ್ಗೆ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Sanju samson
ಸಂಜು ಸ್ಯಾಮ್ಸನ್‌ (ಚಿತ್ರ: ಟಿಒಐ)
ಬರಹ: ವೈಷ್ಣವಿ ಪ್ರಕಾಶ್
ಹೊಸದಿಲ್ಲಿ: ಶ್ರೀಲಂಕಾ ವಿರುದ್ಧ ಮುಂಬರುವ ಸೀಮಿತ ಓವರ್‌ಗಳ ಸರಣಿಗಳಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಆದರೆ, ಕೆಲವು ಅನುಭವಿ ಆಟಗಾರರನ್ನು ಏಕದಿನ ತಂಡದಿಂದ ಕೈ ಬಿಡುವ ಮೂಲಕ ಬಿಸಿಸಿಐ ಆಯ್ಕೆ ಸಮಿತಿ ಅಚ್ಚರಿ ಮೂಡಿಸಿದೆ.

ಶ್ರೀಲಂಕಾ ವಿರುದ್ಧ ನಡೆಯುವ 3 ಪಂದ್ಯಗಳ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದಾರೆ. ಆದರೆ, ಏಕದಿನ ಸ್ವರೂಪದಲ್ಲಿ ಉತ್ತಮ ದಾಖಲೆ ಹೊಂದಿದ್ದರೂ ಸಂಜು ಸ್ಯಾಮ್ಸನ್‌ ಅವರನ್ನು ಒಡಿಐ ತಂಡದಿಂದ ಕೈ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ವಿರುದ್ಧ ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಏಕದಿನ ಸ್ವರೂಪದಲ್ಲಿ ಸಂಜು ಸ್ಯಾಮ್ಸನ್ 70ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಸ್ಫೋಟಕ ಬ್ಯಾಟಿಂಗ್ ನಡೆಸಿ ತಂಡಕ್ಕೆ ಉಪಯುಕ್ತ ರನ್ ಗಳಿಸಿಕೊಟ್ಟರೂ, ಏಕದಿನ ತಂಡದಿಂದ ಸಂಜು ಸ್ಯಾಮ್ಸನ್ ರನ್ನು ಹೊರಗಿಟ್ಟು, ಮೂರು ಸ್ವರೂಪದಲ್ಲಿ ಬ್ಯಾಟಿಂಗ್ ಲಯ ಕಳೆದುಕೊಂಡಿರುವ ಕೆ.ಎಲ್.ರಾಹುಲ್ ಗೆ ಮಣೆ ಹಾಕುವುದು ಸರಿಯೇ? ಸಂಜು ಸ್ಯಾಮ್ಸನ್ ಮಾಡಿದ ತಪ್ಪಾದರೂ ಏನು?" ಎಂದು ಅಭಿಮಾನಿಯೊಬ್ಬರು ಬಿಸಿಸಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
IND vs SL: ಹಾರ್ದಿಕ್‌ ಪಾಂಡ್ಯ ಟಿ20 ಕ್ಯಾಪ್ಟನ್‌, ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ತಂಡ ಹೀಗಿದೆ!
"ಏಕದಿನ ಸ್ವರೂಪದಲ್ಲಿ ಕಳೆದ ಕೆಲವು ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್, ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ ಶ್ರೀಲಂಕಾ ಪ್ರವಾಸ ಸಲುವಾಗಿ ಬಿಸಿಸಿಐ ಪ್ರಕಟಿಸಿರುವ ಏಕದಿನ ತಂಡದಲ್ಲಿ ಸಂಜು ಸ್ಯಾಮ್ಸನ್ ಅವರಿಗೆ ಸ್ಥಾನ ಕಲ್ಪಿಸದಿರುವುದು ಸರಿಯಾದ ಕ್ರಮವಲ್ಲ," ಎಂದು ಅಭಿಮಾನಿ ಟ್ವೀಟ್ ಮಾಡಿದ್ದಾರೆ.
IND vs SL: ಶ್ರೀಲಂಕಾ ವಿರುದ್ಧದ ಒಡಿಐ ಸರಣಿಗೆ ಭಾರತ ತಂಡ ಪ್ರಕಟ, ಶಿಖರ್‌ ಧವನ್‌ ಔಟ್‌!
"ಸಂಜು ಸ್ಯಾಮ್ಸನ್ ವಿರುದ್ಧ ಬಿಸಿಸಿಐ ವೈಯಕ್ತಿಕ ದ್ವೇಷ ಸಾಧಿಸುವಂತೆ ಗೋಚರಿಸುತ್ತಿದೆ. ಈ ವರ್ಷ ಸಿಕ್ಕ ಅಲ್ಪ ಅವಕಾಶದಲ್ಲೇ ಉತ್ತಮ ಪ್ರದರ್ಶನ ನೀಡಿ ಸಂಜು ಸ್ಯಾಮ್ಸನ್ ಗಮನ ಸೆಳೆದಿದ್ದಾರೆ. ತಮ್ಮ ಬ್ಯಾಟ್‌ನಿಂದ ಸ್ಥಿರ ಪ್ರದರ್ಶನ ತೋರಿದರೂ ಸಂಜು ಸ್ಯಾಮ್ಸನ್‌ ಅವರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಬ್ಯಾಟಿಂಗ್ ಲಯ ಕಳೆದುಕೊಂಡಿರುವ ಕೆಲವು ಆಟಗಾರರಿಗೆ ತಂಡದಲ್ಲಿ ಅವಕಾಶ ಕಲ್ಪಿಸಿ, ಪ್ರತಿಭಾವಂತ ಆಟಗಾರ ಸಂಜು ಸ್ಯಾಮ್ಸನ್ ಗೆ ಸ್ಥಾನ ನೀಡದೆ ಬಿಸಿಸಿಐ ಅನ್ಯಾಯ ಮಾಡುತ್ತಿದೆ," ಎಂದು ಅಭಿಮಾನಿಯೊಬ್ಬರು ಆರೋಪ ಮಾಡಿದ್ದಾರೆ.

"ಟಿ20 ವಿಶ್ವಕಪ್ ಟೂರ್ನಿಯ ಸಮಯದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಏಕದಿನ ಸ್ವರೂಪದಲ್ಲಿ ಕಣಕ್ಕಿಳಿಸಲಾಗಿತ್ತು. ಆ ಮೂಲಕ ಚುಟುಕು ವಿಶ್ವಕಪ್ ಟೂರ್ನಿಗೆ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡದೆ ಬಿಸಿಸಿಐ ಕಡೆಗಣಿಸಿತ್ತು. ಈಗ ಟೀಮ್ ಇಂಡಿಯಾ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಸಜ್ಜಾಗುತ್ತಿದೆ. ಈ ಸಮಯದಲ್ಲಿ ಸಂಜು ಸ್ಯಾಮ್ಸನ್ ರನ್ನು ಟಿ20 ಸ್ವರೂಪಕ್ಕೆ ಸೀಮಿತಗೊಳಿಸಿ, ಏಕದಿನ ಸ್ವರೂಪದಿಂದ ಹೊರಗಿಡುವ ಬಿಸಿಸಿಐ ಕ್ರಮ ಸರಿಯಲ್ಲ," ಎಂದು ಅಭಿಮಾನಿಯೊಬ್ಬ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಭಾರತ ತಂಡದ ಉಪನಾಯಕ ಕೆ.ಎಲ್.ರಾಹುಲ್ ಬ್ಯಾಟಿಂಗ್ ಲಯ ಕಳೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ತಂಡದಿಂದ ಹೊರಗಿಟ್ಟು, ಸಂಜು ಸ್ಯಾಮ್ಸನ್‌ಗೆ ಸ್ಥಾನ ಕಲ್ಪಿಸಿ ಅವರ ಸಾಮರ್ಥ್ಯ ಪರೀಕ್ಷೆ ನಡೆಸಲು ಬಿಸಿಸಿಐ ಮುಂದಾಗಬೇಕು," ಎಂದು ಮತ್ತೊಬ್ಬ ಅಭಿಮಾನಿ ಟ್ವೀಟ್‌ ಮಾಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ನಡೆದಿದ್ದ ವೈಟ್ ಬಾಲ್ ಸರಣಿಗಳ ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದರು. 3 ಪಂದ್ಯಗಳ ಚುಟುಕು ಸರಣಿಯಲ್ಲಿ ಸಂಜು ಸ್ಯಾಮ್ಸನ್ ಬೆಂಚ್ ಕಾದಿದ್ದರು. ನಂತರ ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ 36 ರನ್ ಗಳಿಸಿ ಗಮನ ಸೆಳೆದಿದ್ದರು. ನಂತರ ಅವರಿಗೆ ಅವಕಾಶ ಸಿಕ್ಕಿರಲಿಲ್ಲ.

ಬಾಂಗ್ಲಾದೇಶ ವಿರುದ್ಧ 3 ಪಂದ್ಯಗಳ ಏಕದಿನ ಹಾಗೂ ಅಷ್ಟೇ ಪಂದ್ಯಗಳ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್‌ಗೆ ಸ್ಥಾನ ಕಲ್ಪಿಸಿರಲಿಲ್ಲ. ಈಗ ಶ್ರೀಲಂಕಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಆಯ್ಕೆ ಮಾಡಲಾಗಿದ್ದು, ಏಕದಿನ ಸರಣಿಯಿಂದ ಕೈ ಬಿಡಲಾಗಿದೆ.
ಲೇಖಕರ ಬಗ್ಗೆ
ರಮೇಶ ಕೋಟೆ
ವಿಜಯ ಕರ್ನಾಟಕ ಡಿಜಿಟಲ್‌ನಲ್ಲಿ 2020ರ ಮಾರ್ಚ್‌ನಿಂದ ಕ್ರೀಡಾ ಪತ್ರಕರ್ತರಾಗಿ ಇವರು ಕೆಲಸ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿಶ್ವವಾಣಿ ದಿನ ಪತ್ರಿಕೆ, ಯುನೈಟೆಡ್‌ ನ್ಯೂಸ್‌ ಆಫ್‌ ಇಂಡಿಯಾ ಸುದ್ದಿ ಸಂಸ್ಥೆ, ಸಂಜೆ ವಾಣಿ ಹಾಗೂ ಈ ಸಂಜೆ ಪತ್ರಿಕೆಗಳಲ್ಲಿ ಕೆಲಸ ಮಾಡಿರುವ ಅನುಭವವನ್ನು ಇವರು ಹೊಂದಿದ್ದಾರೆ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ ಹಾಗೂ ಅಂಕಣಗಳನ್ನು ಬರೆಯುವುದು ಇವರ ಆಸಕ್ತದಾಯಕ ವಿಷಯಗಳು. ಕನ್ನಡ ಸಾಹಿತ್ಯ ಓದುವುದು, ಕ್ರಿಕೆಟ್‌ ಆಡುವುದು, ಟ್ರೆಕ್ಕಿಂಗ್‌, ಬೈಕ್‌ ರೈಡಿಂಗ್‌, ಫೋಟೋಗ್ರಫಿ ಇವು ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌