ಆ್ಯಪ್ನಗರ

Ind vs Aus Test Series: ವೃತ್ತಿಜೀವನದ ಅತಿದೊಡ್ಡ ಸಾಧನೆ ಎಂದ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ 2-1 ಅಂತರದ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ, ಈ ಸರಣಿ ಅತ್ಯಂತ ಸ್ಮರಣೀಯ ಕ್ಷಣಗಳನ್ನು ನೀಡಿದೆ. ನಾವಿಂದು ಸಾಧಿಸಿ ತೋರಿಸಿದ್ದೇವೆ ಎಂದಿದ್ದಾರೆ.

Vijaya Karnataka Web 7 Jan 2019, 1:02 pm
ಸಿಡ್ನಿ: 71 ವರ್ಷಗಳ ಬಳಿಕ ಮೊದಲ ಬಾರಿಗೆ ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಜಯಿಸಿದ ಭಾರತ ತಂಡದ ಸಾಧನೆಯ ಕುರಿತು ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಕಾಂಗಾರೂ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಿರುವುದು ಕ್ರಿಕೆಟ್‌ ಜೀವನದ ಸ್ಮರಣೀಯ ಕ್ಷಣ ಮತ್ತು ನನ್ನ ಪಾಲಿನ ದೊಡ್ಡ ಸಾಧನೆ ಎಂದು ಭಾರತ ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹೇಳಿದ್ದಾರೆ.
Vijaya Karnataka Web virat-kohli-aus-trophy-reuters


ಆಸ್ಟ್ರೇಲಿಯಾ ನೆಲದಲ್ಲಿ ಭಾರತಕ್ಕೆ ಚೊಚ್ಚಲ-ಐತಿಹಾಸಿಕ ಟೆಸ್ಟ್ ಸರಣಿ ಗೆಲುವು

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ 2-1 ಅಂತರದ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ಕಿಂಗ್ ಕೊಹ್ಲಿ, ಈ ಸರಣಿ ಅತ್ಯಂತ ಸ್ಮರಣೀಯ ಕ್ಷಣಗಳನ್ನು ನೀಡಿದೆ. ನಾವಿಂದು ಸಾಧಿಸಿ ತೋರಿಸಿದ್ದೇವೆ. ಇದಕ್ಕೆ ತಂಡದ ಶ್ರಮವೇ ಕಾರಣವಾಗಿದೆ. ಆಸ್ಟ್ರೇಲಿಯಾದಲ್ಲಿ ಮೊದಲ ಟೆಸ್ಟ್‌ ಸರಣಿ ಗೆದ್ದ ಸಂದರ್ಭದಲ್ಲಿ ಕ್ಯಾಪ್ಟನ್ ಆಗಿರುವುದು ನನ್ನ ಸಂತಸವನ್ನು ಇಮ್ಮಡಿಗೊಳಿಸಿದೆ ಎಂದು ಹೇಳಿದ್ದಾರೆ.

ಆಸೀಸ್‌ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಭಾರತದ ಪ್ರಪ್ರಥಮ ನಾಯಕ

ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಪ್ರಶಸ್ತಿ ಸಾಧನೆ ಭಾರತದ ಪಾಲಿಗೆ ಐತಿಹಾಸಿಕವಾಗಿದ್ದು, ಚೇತೇಶ್ವರ ಪೂಜಾರ, ಜಸ್ಪ್ರೀತ್ ಬೂಮ್ರಾ, ಮಾಯಂಕ್ ಅಗರ್‌ವಾಲ್, ರಿಷಭ್ ಪಂತ್ ಅವರ ಸಾಧನೆಯನ್ನು ವಿರಾಟ್ ಕೊಹ್ಲಿ ಸ್ಮರಿಸಿಕೊಂಡರು.

ಟೀಮ್‌ ಇಂಡಿಯಾ ಐತಿಹಾಸಿಕ ಗೆಲುವಿನ ರೂವಾರಿಗಳಿವರು

ಕಾಂಗರೂಗಳ ನಾಡಿನಲ್ಲಿ ಸರಣಿ ಗೆಲುವಿನ ಹೆಜ್ಜೆಯೂರಿದ ಹುಲಿಗಳು!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌