ಆ್ಯಪ್ನಗರ

ಲಂಕಾ ವಿರುದ್ಧ ಭಾರತ ಮಹಿಳಾ ತಂಡಕ್ಕೆ 13 ರನ್ ಅಂತರದ ಗೆಲುವು

ಶ್ರೀಲಂಕಾ ವಿರುದ್ಧ ಸಾಗುತ್ತಿರುವ ಐದು ಪಂದ್ಯಗಳ ಟ್ವೆಂಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು 13 ರನ್ ಅಂತರದ ಗೆಲುವು ದಾಖಲಿಸಿದೆ.

TOI.in 19 Sep 2018, 6:03 pm
ಕಟುನಾಯಕೆ: ಶ್ರೀಲಂಕಾ ವಿರುದ್ಧ ಸಾಗುತ್ತಿರುವ ಐದು ಪಂದ್ಯಗಳ ಟ್ವೆಂಟಿ-20 ಸರಣಿಯ ಮೊದಲ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡವು 13 ರನ್ ಅಂತರದ ಗೆಲುವು ದಾಖಲಿಸಿದೆ.
Vijaya Karnataka Web Jemimah-Rodrigues-01


ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮಹತ್ವದ ಮುನ್ನಡೆ ದಾಖಲಿಸಿದೆ.

ಮೊದಲು ಬ್ಯಾಟಿಂಗ್ ನಡೆಸಿದ ಭಾರತ ವಿಕೆಟ್ ಕೀಪರ್ ಬ್ಯಾಟ್ಸ್‌ವುಮನ್ ತನಿಯ ಭಾಟಿಯಾ (46), ಜೆಮಿ ರೊಡ್ರಿಗಸ್ (36) ಹಾಗೂ ಅನುಜ ಪಾಟೀಲ್ (36) ಉಪಯುಕ್ತ ಇನ್ನಿಂಗ್ಸ್‌ಗಳ ನೆರವಿನಿಂದ ಎಂಟು ವಿಕೆಟ್ ನಷ್ಟಕ್ಕೆ 168 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. ಈ ಪೈಕಿ ಕೇವಲ 15 ಎಸೆತಗಳನ್ನು ಎದುರಿಸಿದ ರೊಡ್ರಿಗಸ್ ತಲಾ ಮೂರು ಬೌಂಡರಿ ಹಾಗೂ ಸಿಕ್ಸರ್ ನೆರವಿನಿಂದ 36 ರನ್ ಸಿಡಿಸಿದ್ದರು.

ಬಳಿಕ ಗುರಿ ಬೆನ್ನತ್ತಿದ್ದ ಲಂಕಾ ಮಹಿಳಾ ತಂಡವು ಇಶಾನಿ ಲೋಕುಸೂರಿಯಗೆ (45) ಹಾಗೂ ಯಸೋದಾ ಮೆಂಡಿಸ್ (32) ಹೊರತಾಗಿಯೂ 155 ರನ್‌ಗಳಿಗೆ ತನ್ನೆಲ್ಲ ವಿಕೆಟುಗಳನ್ನು ಕಳೆದುಕೊಂಡಿತು. ಭಾರತದ ಪರ ನಿಖರ ದಾಳಿ ಸಂಘಟಿಸಿದ ಪೂನಂ ಯಾದವ್ ನಾಲ್ಕು ವಿಕೆಟುಗಳನ್ನು ಪಡೆದು ಮಿಂಚಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌