ಆ್ಯಪ್ನಗರ

ಏಕದಿನ ಕ್ರಿಕೆಟ್‌ನಲ್ಲಿ ನೂತನ ವಿಶ್ವ ದಾಖಲೆ ಸ್ಥಾಪಿಸಿದ ಮಿಥಾಲಿ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕ ಮಿಥಾಲಿ ರಾಜ್, ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಗಳಿಸಿದ ದಾಖಲೆಗೆ ಪಾತ್ರವಾಗಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 12 Jul 2017, 7:00 pm
ಹೊಸದಿಲ್ಲಿ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕ ಮಿಥಾಲಿ ರಾಜ್, ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಗಳಿಸಿದ ದಾಖಲೆಗೆ ಪಾತ್ರವಾಗಿದ್ದಾರೆ.
Vijaya Karnataka Web indias mithali raj becomes all time leading run getter in womens odis
ಏಕದಿನ ಕ್ರಿಕೆಟ್‌ನಲ್ಲಿ ನೂತನ ವಿಶ್ವ ದಾಖಲೆ ಸ್ಥಾಪಿಸಿದ ಮಿಥಾಲಿ


ಇಂಗ್ಲೆಂಡ್‌ನಲ್ಲಿ ಸಾಗುತ್ತಿರುವ ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿರುವ ಮಿಥಾಲಿ, ಇದುವರೆಗೆ ಚಾರ್ಲೆಟ್ ಎಡ್ವರ್ಡ್ಸ್ ಹೆಸರಲ್ಲಿದ್ದ 5992 ರನ್‌ಗಳ ದಾಖಲೆಯನ್ನು ಮುರಿದಿದ್ದಾರೆ.

34 ರನ್ ಗಳಿಸಿದ ಮಿಥಾಲಿ ಅವರು ಏಕದಿನ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ (5993) ದಾಖಲಿಸಿದ ವಿಶ್ವ ದಾಖಲೆಯನ್ನು ಸ್ಥಾಪಿಸಿದರು.

ಇಲ್ಲಿಗೂ ಕೊನೆಗೊಳ್ಳದ ಮಿಥಾಲಿ ಅರ್ಭಟ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 6000 ಮೈಲುಗಲ್ಲು ತಲುಪಿದ ಮೊದಲ ಮಹಿಳಾ ಬ್ಯಾಟ್ಸ್‌ಮನ್‌ನೆಂಬ ಗೌರವಕ್ಕೂ ಪಾತ್ರವಾದರು.

34 ಹರೆಯದ ಮಿಥಾಲಿ ತಮ್ಮ 183ನೇ ಪಂದ್ಯದಲ್ಲಿ (164 ಇನ್ನಿಂಗ್ಸ್) ದಾಖಲೆ ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ. ಅಂದರೆ ಚಾರ್ಲೆಟ್‌ಗಿಂತಲೂ 16 ಇನ್ನಿಂಗ್ಸ್ ಕಡಿಮೆಯಾಗಿದೆ.

ಆಸೀಸ್ ವಿರುದ್ಧದ ಪಂದ್ಯದಲ್ಲಿ 114 ಎಸೆತಗಳನ್ನು ಎದುರಿಸಿದ್ದ ಮಿಥಾಲಿ ನಾಲ್ಕು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 69 ರನ್ ಗಳಿಸಿದ್ದರು. ಹಾಗೆಯೇ ಏಕದಿನದಲ್ಲಿ 49 ಅರ್ಧಶತಕ ಹಾಗೂ ಐದು ಶತಕವೂ ಅವರ ಹೆಸರಲ್ಲಿದೆ.

1999 ಜೂನ್ ತಿಂಗಳಲ್ಲಿ ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆಗೈದಿರುವ ಮಿಥಾಲಿ 50ಕ್ಕೂ ಹೆಚ್ಚು ಬ್ಯಾಟಿಂಗ್ ಸರಾಸರಿ ಕಾಯ್ದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸತತ ಏಳು ಅರ್ಧಶತಕಗಳನ್ನು ಬಾರಿಸಿದ ಗೌರವಕ್ಕೆ ಪಾತ್ರವಾಗಿದ್ದರು.

ಮಿಥಾಲಿಗೆ ಕೋಹ್ಲಿ ಅಭಿನಂದನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌