ಆ್ಯಪ್ನಗರ

ಇಶಾನ್ ಕಿಶಾನ್ ಬಿರುಸಿನ ಫಿಫ್ಟಿ; ದ.ಆಫ್ರಿಕಾ ಎ ವಿರುದ್ಧ ಭಾರತ ಎ ತಂಡಕ್ಕೆ 2 ವಿಕೆಟ್ ಅಂತರದ ರೋಚಕ ಗೆಲುವು

ಇಶಾನ್ ಕಿಶಾನ್ ಬಾರಿಸಿದ ಬಿರುಸಿನ ಅರ್ಧಶತಕದ ನೆರವಿನಿಂದ ಭಾರತ ಎ ತಂಡವು ಮಳೆ ಬಾಧಿತ ದ್ವಿತೀಯ ಅನಧಿಕೃತ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎ ವಿರುದ್ಧ ಎರಡು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.

Vijaya Karnataka Web 31 Aug 2019, 5:47 pm
ತಿರುವನಂತಪುರ: ಇಶಾನ್ ಕಿಶಾನ್ ಬಿರುಸಿನ ಅರ್ಧಶತಕದ ನೆರವಿನಿಂದ ಭಾರತ ಎ ತಂಡವು ಇಲ್ಲಿ ದಕ್ಷಿಣ ಆಫ್ರಿಕಾ ಎ ತಂಡದ ವಿರುದ್ಧ ನಡೆದ ದ್ವಿತೀಯ ಅನಧಿಕೃತ ಏಕದಿನ ಪಂದ್ಯದಲ್ಲಿ ಎರಡು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ.
Vijaya Karnataka Web ind-a


ಈ ಮೂಲಕ ಐದು ಪಂದ್ಯಗಳ ಅನಧಿಕೃತ ಏಕದಿನ ಸರಣಿಯಲ್ಲಿ 2-0 ಅಂತರದ ಮುನ್ನಡೆ ದಾಖಲಿಸಿದೆ.

ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯವು ಮಳೆಯಿಂದಾಗಿ 21 ಓವರ್‌ಗಳಿಗೆ ಇಳಿಕೆಗೊಳಿಸಲಾಗಿತ್ತು. ಇದರಂತೆ ಮೂದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಎ ತಂಡವು 21 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 162 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತ್ತು.

ಜಾರ್ಜ್ ಲಿಂಡೆ ಕೇವಲ 25 ಎಸೆತಗಳಲ್ಲಿ ಬೌಂಡರಿ ಹಾಗೂ ಐದು ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ 52 ರನ್ ಗಳಿಸಿದರು. ಇದಕ್ಕೂ ಮೊದಲು ನಾಯಕ ತೆಂಬಾ ಬಾವುಮಾ 33 ಎಸೆತಗಳಲ್ಲಿ ಆರು ಬೌಂಡರಿಗಳಿಂದ 40 ರನ್ ಗಳಿಸಿದ್ದರು.

ಬಳಿಕ ಗುರಿ ಬೆನ್ನಟ್ಟಿದ ಭಾರತಕ್ಕೆ ಬಿರುಸಿನ ಅರ್ಧಶತಕ ಬಾರಿಸಿದ ಇಶಾನ್ ಕಿಶಾನ್ ಗೆಲುವಿನ ರೂವಾರಿ ಎನಿಸಿಕೊಂಡರು. ಕೇವಲ 24 ಎಸೆತಗಳನ್ನು ಎದುರಿಸಿದ ಕಿಶಾನ್ ಐದು ಬೌಂಡರಿ ಹಾಗೂ ನಾಲ್ಕು ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 55 ರನ್ ಗಳಿಸಿದರು.

ಕೊನೆಯ ಹಂತದಲ್ಲಿ ಸತತವಾಗಿ ವಿಕೆಟುಗಳನ್ನು ಕಳೆದುಕೊಂಡಿರುವುದು ಹಿನ್ನಡೆಗೆ ಕಾರಣವಾದರೂ 23 ರನ್‌ಗಳ ಅಜೇಯ ಇನ್ನಿಂಗ್ಸ್ ಕಟ್ಟಿದ ಕೃುಣಾಲ್ ಪಾಂಡ್ಯ ತಂಡದ ಗೆಲುವನ್ನು ಖಾತ್ರಿಪಡಿಸಿದರು. ಈ ಮೂಲಕ 20 ಓವರ್‌ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌