ಆ್ಯಪ್ನಗರ

ಇಂಜುರಿ ಸೆಟ್‌ಬ್ಯಾಕ್‌ನಿಂದ ಮತ್ತಷ್ಟು ಪ್ರಬಲವಾಗಿ ಹಿಂತಿರುಗುವ ವಿಶ್ವಾಸದಲ್ಲಿ ಜಸ್ಪ್ರೀತ್ ಬುಮ್ರಾ

ಗಾಯದ ಸಮಸ್ಯೆಯಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಅಲಭ್ಯವಾಗಿರುವ ಭಾರತದ ಬಲಗೈ ವೇಗಿ ಜಸ್ಪ್ರೀತ್ ಬುಮ್ರಾ, ಮತ್ತಷ್ಟು ಪ್ರಬಲವಾಗಿ ಹಿಂತಿರುಗುವ ಭರವಸೆ ವ್ಯಕ್ತಪಡಿಸಿದ್ದಾರೆ.

Vijaya Karnataka Web 25 Sep 2019, 2:01 pm
ಹೊಸದಿಲ್ಲಿ: ಅನಿರೀಕ್ಷಿತ ಗಾಯದ ಸಮಸ್ಯೆಗೆ ತುತ್ತಾಗಿರುವ ಭಾರತದ ಬೌಲಿಂಗ್ ಸ್ಪೆಷಲಿಸ್ಟ್ ಜಸ್ಪ್ರೀತ್ ಬುಮ್ರಾ, ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಅಲಭ್ಯವಾಗಿದ್ದಾರೆ.
Vijaya Karnataka Web jasprit-bumrah-hat-trick-02


ವೆಸ್ಟ್‌ಇಂಡೀಸ್ ಪ್ರವಾಸದಲ್ಲಿ ಎರಡು ಪಂದ್ಯಗಳಲ್ಲಿ ತಲಾ ಐದು ವಿಕೆಟ್ ಸಾಧನೆ ಮಾಡಿರುವ ಜಸ್ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟ್ವೆಂಟಿ-20 ಸರಣಿಯಿಂದ ವಿಶ್ರಾಂತಿ ತೆಗೆದುಕೊಂಡಿದ್ದರು.

'ಅಯ್ಯೋ ನಿನ್ನ ಹಣೆಬರಹವೇ'; ಕೆಎಲ್ ರಾಹುಲ್‌ಗೆ ನೆಟ್ಟಿಗರ ಪಾಠ

ಇದರಂತೆ ಟೆಸ್ಟ್ ಸರಣಿಗೆ ಸಿದ್ಧತೆ ನಡೆಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಏಕಾಏಕಿ ಸೊಂಟದ ಭಾಗದಲ್ಲಿ ಸೆಳೆತಕ್ಕೊಳಗಾಗಿದ್ದರಿಂದ ಮಹತ್ವದ ಸರಣಿಯನ್ನು ಕಳೆದುಕೊಳ್ಳುವಂತಾಗಿದೆ.

ಪ್ರಸ್ತುತ ಬುಮ್ರಾ ಮತ್ತಷ್ಟು ಪ್ರಬಲವಾಗಿ ಹಿಂತುರುಗಿ ಬರುವ ಭರವಸೆ ವ್ಯಕ್ತಪಡಿಸಿದ್ದಾರೆ. "ಗಾಯವು ಕ್ರೀಡೆಯ ಭಾಗವಾಗಿದೆ. ಆದಷ್ಟು ಬೇಗನೇ ಗುಣಮುಖರಾಗಲು ಹಾರೈಸಿದ ಎಲ್ಲರಿಗೂ ಧನ್ಯವಾದಗಳು. ನಾನು ತಲೆಯೆತ್ತಿ ನಿಂತಿದ್ದು, ಸೆಟ್‌ಬ್ಯಾಕ್‌ನಿಂದ ಮತ್ತಷ್ಟು ಪ್ರಬಲವಾಗಿ ಹಿಂತಿರುಗುವ ಗುರಿ ಹೊಂದಿದ್ದೇನೆ" ಎಂದರು.

ಜಸ್ಪ್ರೀತ್ ಬುಮ್ರಾ ಇದೀಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಬುಮ್ರಾ ಸ್ಥಾನವನ್ನು ಅನುಭವಿ ವೇಗಿ ಉಮೇಶ್ ಯಾದವ್ ತುಂಬಿಕೊಂಡಿದ್ದಾರೆ.

ಹೀರೊ ಸಚಿನ್ ತರಹನೇ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾದ 15ರ ಹರೆಯದ ಶಫಾಲಿ ವರ್ಮ!

2018ನೇ ಸಾಲಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅವರದ್ದೇ ನೆಲದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಕಾಲಿರಿಸಿರುವ ಬುಮ್ರಾ, ಕಳೆದೊಂದು ಸಾಲಿನಲ್ಲೇ ಭಾರತದ ಪ್ರಮುಖ ವೇಗಿ ರೂಪದಲ್ಲಿ ಹೊರಹೊಮ್ಮಿದ್ದಾರೆ. ಅಲ್ಲದೆ ಇದುವರೆಗೆ ಆಡಿರುವ 12 ಟೆಸ್ಟ್ ಪಂದ್ಯಗಳಲ್ಲಿ 62 ವಿಕೆಟುಗಳನ್ನು ಕಬಳಿಸಿದ್ದಾರೆ.

ಈ ಪೈಕಿ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ಆಸ್ಟ್ರೇಲಿಯಾ ಹಾಗೂ ವೆಸ್ಟ್‌ಇಂಡೀಸ್ ನೆಲದಲ್ಲಿ ಐದು ವಿಕೆಟ್ ಸಾಧನೆ ಮಾಡಿದ್ದರು. ವಿಂಡೀಸ್ ಸರಣಿಯಲ್ಲಂತೂ ಹ್ಯಾಟ್ರಿಕ್ ಸೇರಿದಂತೆ 13 ವಿಕೆಟ್‌ಗಳನ್ನು ಪಡೆದಿದ್ದರು.

ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ವೆಸ್ಟ್‌ಇಂಡೀಸ್ ಸರಣಿಯಲ್ಲಿ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧವೂ ಗೆಲುವಿನ ಓಟ ಮುಂದುವರಿಸುವ ಇರಾದೆಯಲ್ಲಿದೆ. ಈ ನಡುವೆ ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆಯು ತಂಡಕ್ಕೆ ಮುಳುವಾಗಿ ಪರಿಣಮಿಸಿದೆ. ಇನ್ನೊಂದೆಡೆ ಭಾರತ ಸರಣಿ ಮೂಲಕ ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಪಾದಾರ್ಪಣೆಗೆೈದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌