ಆ್ಯಪ್ನಗರ

ಕರ್ನಾಟಕಕ್ಕೆ ಇನ್ನಿಂಗ್ಸ್ ಮತ್ತು 136 ರನ್‌ಗಳ ಗೆಲುವು

ರಣಜಿ ಟ್ರೋಫಿ ಎ ಗುಂಪಿನ ಮೂರನೇ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಇನ್ನಿಂಗ್ಸ್ ಮತ್ತು 136 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.

Vijaya Karnataka Web 4 Nov 2017, 3:29 pm
ಪುಣೆ: ರಣಜಿ ಟ್ರೋಫಿ ಎ ಗುಂಪಿನ ಮೂರನೇ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಇನ್ನಿಂಗ್ಸ್ ಮತ್ತು 136 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
Vijaya Karnataka Web karnataka beats maharashtra by an innings and 136 runs
ಕರ್ನಾಟಕಕ್ಕೆ ಇನ್ನಿಂಗ್ಸ್ ಮತ್ತು 136 ರನ್‌ಗಳ ಗೆಲುವು


ಈ ಮೂಲಕ ಆಡಿರುವ ಎಲ್ಲ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಕರ್ನಾಟಕ 20 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಅಂತಿಮ ದಿನದಾಟದಲ್ಲಿ 135/4 ಎಂಬಲ್ಲಿದ್ದ ದ್ವಿತೀಯ ಇನ್ನಿಂಗ್ಸ್ ಮುಂದುವರಿಸಿದ ಮಹಾರಾಷ್ಟ್ರ 247 ರನ್‌ಗಳಿಗೆ ಸರ್ವಪತನವನ್ನು ಕಂಡಿತ್ತು. ಕರ್ನಾಟಕ ಪರ 57 ರನ್ ತೆತ್ತು ಐದು ವಿಕೆಟುಗಳನ್ನು ಕಬಳಿಸಿದ ಅಭಿಮನ್ಯು ಮಿಥುನ್ ಗೆಲುವನ್ನು ಸುಲಭಗೊಳಿಸಿದರು.

ಇದಕ್ಕೂ ಮೊದಲು ವಿನಯ್ ಕುಮಾರ್ (59/6) ದಾಳಿಗೆ ಸಿಲುಕಿದ್ದ ಮಹಾರಾಷ್ಟ್ರ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಸರ್ವಪತನವನ್ನು ಕಂಡಿತ್ತು.

ಇದಕ್ಕುತ್ತರವಾಗಿ ಕರ್ನಾಟಕ ತನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಮಾಯಾಂಕ್ ಅಗ್ರವಾಲ್ ಚೊಚ್ಚಲ ತ್ರಿಶತಕ (304*) ಮತ್ತು ರವಿಕುಮಾರ್ ಸಮರ್ಥ್ (129) ಹಾಗೂ ಕರುಣ್ ನಾಯರ್ (116) ಶತಕಗಳ ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 628 ರನ್‌ಗಳ ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಘೋಷಿಸಿತ್ತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ 383 ರನ್‌ಗಳ ಬೃಹತ್ ಮುನ್ನಡೆ ದಾಖಲಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌