ಆ್ಯಪ್ನಗರ

ಗ್ರೇಟ್ ಕಮ್‌ಬ್ಯಾಕ್; ಮಾಲಿಂಗ ಲಂಕಾ ತಂಡದ ಕಪ್ತಾನ

ಶ್ರೀಲಂಕಾ ತಂಡದ ಏಕದಿನ ಹಾಗೂ ಟ್ವೆಂಟಿ-20 ನಾಯಕನಾಗಿ ಬಲಗೈ ಅನುಭವಿ ವೇಗಿ ಲಸಿತ್ ಮಾಲಿಂಗ ಆಯ್ಕೆಯಾಗಿದ್ದಾರೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಮಾಲಿಂಗ ತಂಡವನ್ನು ಮುನ್ನಡೆಸಲಿದ್ದಾರೆ.

TOI.in 15 Dec 2018, 9:42 am
ಕೊಲಂಬೊ: ದೀರ್ಘ ಸಮಯದ ಬಳಿಕ ಶ್ರೀಲಂಕಾದ ಅನುಭವಿ ವೇಗಿ ಲಸಿತ್ ಮಾಲಿಂಗ ಭರ್ಜರಿ ಕಮ್‌ಬ್ಯಾಕ್ ಮಾಡಿಕೊಂಡಿದ್ದಾರೆ.
Vijaya Karnataka Web lasith-malinga-07


ಶ್ರೀಲಂಕಾ ಕ್ರಿಕೆಟ್ ಮಂಡಳಿ ಗುರುವಾರ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಸೀಮಿತ ಓವರ್‌ಗಳ ಸರಣಿಗಾಗಿ ತಂಡವನ್ನು ಪ್ರಕಟಿಸಿದ್ದು, ಲಸಿತ್ ಮಾಲಿಂಗ ಅವರನ್ನು ನಾಯಕನಾಗಿ ಘೋಷಿಸಿದೆ.

17 ಸದಸ್ಯ ಬಳಗದ ತಂಡವನ್ನು 35ರ ಹರೆಯದ ಮಾಲಿಂಗ ಮುನ್ನಡೆಸಲಿದ್ದಾರೆ.

ಕಿವೀಸ್ ವಿರುದ್ಧ ಲಂಕಾ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಏಕೈಕ ಟ್ವೆಂಟಿ-20 ಪಂದ್ಯಗಳಲ್ಲಿ ಭಾಗವಹಿಸಲಿದೆ.

ಕಳೆದೆರಡು ವರ್ಷಗಳಿಂದ ಲಂಕಾ ತೀರಾ ಕೆಟ್ಟ ಪ್ರದರ್ಶನ ನೀಡುತ್ತದ್ದು, ಅನೇಕ ಬಾರಿ ನಾಯಕತ್ವದ ಬದಲಾವಣೆ ಕಂಡುಬಂದಿದೆ. ಈ ಹಿಂದೆ 2014ರ ಟ್ವೆಂಟಿ-20 ವಿಶ್ವಕಪ್‌ನಲ್ಲೂ ಲಂಕಾ ತಂಡವನ್ನು ಮುನ್ನಡೆಸಿದ್ದರು.

ಆದರೆ ಸತತ ಗಾಯದ ಸಮಸ್ಯೆಯಿಂದಾಗಿ ತಂಡದಿಂದಿಂದ ಹೊರಗುಳಿಯಬೇಕಾಯಿತು. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಭಾರತ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಮಾಲಿಂಗ ಕೊನೆಯದಾಗಿ ಲಂಕಾ ತಂಡವನ್ನು ಮುನ್ನಡೆಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌