ಆ್ಯಪ್ನಗರ

MS Dhoni: ಹೃದಯ ಗೆದ್ದ ಧೋನಿ; ವಾಟರ್ ಬಾಯ್ ಆಗುವ ಮೂಲಕ ಯುವ ಕ್ರಿಕೆಟಿಗರಿಗೆ ಮಾದರಿ

ಐರ್ಲೆಂಡ್ ವಿರುದ್ಧ ಎರಡನೇ ಟ್ವೆಂಟಿ-20 ಪಂದ್ಯದಲ್ಲೂ 143 ರನ್ ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಎರಡು ಪಂದ್ಯಗಳ ಟಿ-20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿತ್ತು.

Times Now 30 Jun 2018, 2:47 pm
ಡುಬ್ಲಿನ್: ಐರ್ಲೆಂಡ್ ವಿರುದ್ಧ ಎರಡನೇ ಟ್ವೆಂಟಿ-20 ಪಂದ್ಯದಲ್ಲೂ 143 ರನ್ ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ ಎರಡು ಪಂದ್ಯಗಳ ಟಿ-20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿತ್ತು.
Vijaya Karnataka Web dhoni-water-boy


ಇದು ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ದಾಖಲಿಸಿದ ಅತಿ ದೊಡ್ಡ ಗೆಲುವು ಕೂಡಾ ಹೌದು. ಆದರೆ ಬಹಳ ಕಾಲದ ಬಳಿಕ ಟೀಮ್ ಇಂಡಿಯಾ ಖಾಯಂ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅವರಿಗೆ ವಿಶ್ರಾಂತಿ ಸೂಚಿಸಲಾಗಿತ್ತು.

ಭಾರತ ತಂಡಕ್ಕೆ ಟ್ವೆಂಟಿ-20 ಹಾಗೂ ಏಕದಿನ ವಿಶ್ವಕಪ್ ದೊರಕಿಸಿಕೊಟ್ಟಿರುವ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಅವಿಭಾಜ್ಯ ಅಂಗವಾಗಿದ್ದಾರೆ.

ಆದರೆ ಅಮೋಘ ಫಾರ್ಮ್‌ನಲ್ಲಿರುವ ದಿನೇಶ್ ಕಾರ್ತಿಕ್ ಅವರಿಗೆ ಜಾಗ ಬಿಟ್ಟು ಕೊಡುವ ನಿಟ್ಟಿನಲ್ಲಿ ಆಡುವ ಬಳಗದಿಂದ ಹೊರಗುಳಿಯಲು ನಿರ್ಧರಿಸಿದ್ದರು.

ತಂಡದ ವ್ಯವಸ್ಥಾಪಕ ಮಂಡಳಿಯ ನಿರ್ಧಾರಕ್ಕೆ ತಲೆ ಬಾಗಿದ ಧೋನಿ ಪೆವಿಲಿಯನ್‌ನಲ್ಲಿ ಸುಮ್ಮನೆ ಕೂರಲಿಲ್ಲ. ಪಂದ್ಯದ ವಿರಾಮದ ವೇಳೆಯಲ್ಲಿ ಓರ್ವ ಮೀಸಲು ಆಟಗಾರನ ಕರ್ತವ್ಯವನ್ನು ನಿಭಾಯಿಸುವ ಮೂಲಕ ಯುವ ಕ್ರಿಕೆಟಿಗರಿಗೆ ಮಾದರಿಯಾಗಿದ್ದಾರೆ.

ಭಾರತ ಇನ್ನಿಂಗ್ಸ್ ವೇಳೆ ಸಂಪೂರ್ಣ ಕಿಟ್ ಹೊಂದಿರುವ ಬ್ಯಾಗ್ ಹೊತ್ತುಕೊಂಡು ಮೈದಾನಕ್ಕಿಳಿದ ಧೋನಿ, ಕ್ರೀಸಿನಲ್ಲಿದ್ದ ಸುರೇಶ್ ರೈನಾ ಹಾಗೂ ಮನೀಷ್ ಪಾಂಡೆ ಅವರಿಗೆ ಡ್ರಿಂಕ್ಸ್ ಕೊಡಿಸುತ್ತಿದ್ದರು. ಈ ಮೂಲಕ ಓರ್ವ ವಾಟರ್ ಬಾಯ್ ಆಗಿಯೂ ಟೀಮ್ ಇಂಡಿಯಾಕ್ಕೆ ಸೇವೆ ಸಲ್ಲಿಸುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ.

ಪ್ರಸ್ತುತ ಧೋನಿ ನಡೆಯು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗೆ ಪಾತ್ರವಾಗುತ್ತಿದ್ದು, ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌