ಆ್ಯಪ್ನಗರ

ಮಹೇಂದ್ರ ಸಿಂಗ್ ಧೋನಿಯನ್ನು ಟಿ20 ತಂಡಕ್ಕೆ ಆಯ್ಕೆ ಮಾಡದಿರಲು ಕಾರಣ ಏನು ಗೊತ್ತಾ?

ದಕ್ಷಿಣ ಆಫ್ರಿಕಾದ ವಿರುದ್ಧದ ಟ್ವೆಂಟಿ-20 ಸರಣಿಯ ಆಯ್ಕೆಗೆ ಮಹೇಂದ್ರ ಸಿಂಗ್ ಧೋನಿ ಲಭ್ಯವಿರಲಿಲ್ಲ ಎಂದು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಸ್ಪಷ್ಟನೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

Vijaya Karnataka Web 30 Aug 2019, 2:57 pm
ಮುಂಬಯಿ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಗಾಗಿನ ಟೀಮ್ ಇಂಡಿಯಾ ಆಯ್ಕೆಗೆ ಮಹೇಂದ್ರ ಸಿಂಗ್ ಧೋನಿ ಅವರನ್ನು ಪರಿಗಣಿಸಿರಲಿಲ್ಲ.
Vijaya Karnataka Web ms-dhoni-11


ಇದು ಅಭಿಮಾನಿಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ವಿಕೆಟ್ ಕೀಪರ್ ಆಟಗಾರನಿಗೆ ಅವಕಾಶ ಏಕೆ ನೀಡಲಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ವಿವರಣೆಯನ್ನು ನೀಡಿದ್ದಾರೆ.

ಎಂಎಸ್ ಧೋನಿ ಆಯ್ಕೆಗೆ ಲಭ್ಯವಿರವಿಲ್ಲ ಎಂದಷ್ಟೇ ಎಂಎಸ್‌ಕೆ ಪ್ರಸಾದ್ ಉತ್ತರಿಸಿದ್ದಾರೆ. ಇದರಿಂದ ವಿವಾದಕ್ಕೆ ತೆರೆ ಎಳೆದಿದ್ದಾರ.ೆ

ಕಳೆದ ಏಕದಿನ ವಿಶ್ವಕಪ್ ಬಳಿಕ ಧೋನಿ ಎರಡು ತಿಂಗಳುಗಳ ಬಿಡುವು ಪಡೆದುಕೊಂಡು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು.

ಮಗದೊಂದು ಬಿಸಿಸಿಐ ಮೂಲದ ಪ್ರಕಾರ, ಮುಂಬರುವ ಟ್ವೆಂಟಿ-20 ವಿಶ್ವಕಪ್‌ಗಾಗಿ ಆಯ್ಕೆ ಸಮಿತಿಯು ಸ್ಪಷ್ಟ ಮಾರ್ಗ ಸೂಚಿಯನ್ನು ತಯಾರಿಸಿದ್ದು, ಯುವ ಆಟಗಾರರಿಗೆ ಹೆಚ್ಚಿನ ಅವಕಾಶವನ್ನು ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ಎಲ್ಲ ಪ್ರಕಾರದಲ್ಲೂ ವಿಕೆಟ್ ಕೀಪರ್ ಸ್ಥಾನಕ್ಕೆ ರಿಷಬ್ ಪಂತ್ ಮೊದಲ ಆಯ್ಕೆಯಾಗಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿವೃತ್ತಿ ಸಂಬಂಧ ಧೋನಿ ಮೇಲೆ ಯಾವುದೇ ಒತ್ತಡವನ್ನು ಹೇರಲು ಸಾಧ್ಯವಿಲ್ಲ. ಇದನ್ನು ಸ್ವತ: ಧೋನಿ ಅವರೇ ನಿರ್ಧರಿಸಲಿದ್ದಾರೆ. ಹಾಗಾಗಿ ಧೋನಿ ಮುಂದಿನ ನಡೆ ಏನಾಗಲಿದೆ ಎಂಬುದು ಕುತೂಹಲಕ್ಕೀಡು ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌