ಆ್ಯಪ್ನಗರ

ಮುಂಬೈ ಫೀಲ್ಡಿಂಗ್ ಕೋಚ್ ಸ್ಥಾನಕ್ಕೆ ಜಾಂಟಿ ವಿದಾಯ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಮೂರು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಕೋಚ್ ಸ್ಥಾನಕ್ಕೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್ ವಿದಾಯ ಹೇಳಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 8 Dec 2017, 9:33 am
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಮೂರು ಬಾರಿಯ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಕೋಚ್ ಸ್ಥಾನಕ್ಕೆ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್ ವಿದಾಯ ಹೇಳಿದ್ದಾರೆ.
Vijaya Karnataka Web mumbai indians part ways with jonty rhodes for ipl 2018
ಮುಂಬೈ ಫೀಲ್ಡಿಂಗ್ ಕೋಚ್ ಸ್ಥಾನಕ್ಕೆ ಜಾಂಟಿ ವಿದಾಯ


ತಮ್ಮ ಆಡುವ ಕಾಲಘಟ್ಟದಲ್ಲಿ ಫೀಲ್ಡಿಂಗ್‌ನಿಂದಲೇ ಹೆಸರುವಾಸಿಯಾಗಿದ್ದ ಜಾಂಟಿ, ವೃತ್ತಿ ಜೀವನದ ಬಳಿಕ ಫೀಲ್ಡಿಂಗ್ ತರಬೇತುದಾರನ ಹುದ್ದೆ ವಹಿಸಿಕೊಂಡಿದ್ದರು.

ಜಾಂಟಿ ಅವರ ವೈಯಕ್ತಿಕ ವಾಣಿಜ್ಯ ಕಾರಣಗಳಿಂದಾಗಿ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಂಬೈ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಂಟಿ ಸೇವೆಯನ್ನು ಸ್ಮರಿಸಿಕೊಂಡಿರುವ ಮುಂಬೈ ತಂಡದ ಮಾಲಿಕ ಅಕಾಶ್ ಅಂಬಾನಿ, ಅಮೂಲ್ಯವಾದುದು ಮತ್ತು ಪದಗಳಲ್ಲಿ ವಿವರಿಸಲು ಅಸಾಧ್ಯ. ಆದರೂ ನಾವು ಅವರ ನಿರ್ಧಾರವನ್ನು ಗೌರವಿಸುತ್ತೇವೆ ಎಂದಿದ್ದಾರೆ.

ಇದೀಗ ರೋಡ್ಸ್ ಸ್ಥಾನಕ್ಕೆ ನ್ಯೂಜಿಲೆಂಡ್‌ನ ಜೇಮ್ಸ್ ಪಾಮ್ಮೆಂಟ್ ಅವರನ್ನು ನೇಮಕಗೊಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌