ಆ್ಯಪ್ನಗರ

ಭಾರತಕ್ಕೆ ಆಗಮಿಸಿದ ಕಿವೀಸ್ ಪಡೆ

ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆಲುವಿನ ಬಳಿಕ ಟ್ವೆಂಟಿ-20 ಸರಣಿಯಲ್ಲಿ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ತವರಿನಲ್ಲಿ ಮಗದೊಂದು ಸರಣಿ ಆಡಲು ಸಿದ್ಧವಾಗುತ್ತಿದೆ.

ಟೈಮ್ಸ್ ಆಫ್ ಇಂಡಿಯಾ 14 Oct 2017, 2:48 pm
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆಲುವಿನ ಬಳಿಕ ಟ್ವೆಂಟಿ-20 ಸರಣಿಯಲ್ಲಿ ಸಮಬಲ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ತವರಿನಲ್ಲಿ ಮಗದೊಂದು ಸರಣಿ ಆಡಲು ಸಿದ್ಧವಾಗುತ್ತಿದೆ.
Vijaya Karnataka Web new zealand players arrive in india for limited overs series
ಭಾರತಕ್ಕೆ ಆಗಮಿಸಿದ ಕಿವೀಸ್ ಪಡೆ


ಭಾರತ ತಂಡವೀಗ ನ್ಯೂಜಿಲೆಂಡ್ ವಿರುದ್ಧ ಏಕದಿನ ಹಾಗೂ ಟ್ವೆಂಟಿ-20 ಸರಣಿಗಳಲ್ಲಿ ಭಾಗವಹಿಸಲಿದೆ. ಇದರಂತೆ ಕಿವೀಸ್ ಪಡೆ ಭಾರತಕ್ಕೆ ಆಗಮಿಸಿದೆ.

ನ್ಯೂಜಿಲೆಂಡ್ ಹಿರಿಯ ಬ್ಯಾಟ್ಸ್‌ಮನ್ ರೋಸ್ ಟೇಲರ್ ತಮ್ಮ ಆಗಮನವನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಭಾರತಕ್ಕೆ ಆಗಮಿಸಲು ಖುಷಿಯಾಗುತ್ತಿದೆ ಎಂದಿದ್ದಾರೆ.

Nice to be back in India. #jetlagged 🙈😂 @ Trident Hotel https://t.co/dDBpZ9gCFx — Ross Taylor (@RossLTaylor) October 13, 2017 ಭಾರತ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಯು ಅಕ್ಟೋಬರ್ 22ರಿಂದ ಆರಂಭವಾಗಲಿದೆ. ಒಂಬತ್ತು ಆಟಗಾರರು ಭಾರತಕ್ಕೆ ಪಯಣಿಸಿದ್ದಾರೆ. ಉಳಿದ ಆರು ಆಟಗಾರರು ಆಗಲೇ ಕಿವೀಸ್ ಎ ತಂಡದ ಸರಣಿಗಾಗಿ ಭಾರತಕ್ಕೆ ಆಗಮಿಸಿದ್ದರು.

ಭಾರತ ವಿರುದ್ಧ ತಲಾ ಮೂರು ಏಕದಿನ ಮತ್ತು ಟ್ವೆಂಟಿ-20 ಸರಣಿಗಳಲ್ಲಿ ನ್ಯೂಜಿಲೆಂಡ್ ಭಾಗವಹಿಸಲಿದೆ. ಇದಕ್ಕೂ ಮೊದಲು ಅಕ್ಟೋಬರ್ 17 ಮತ್ತು 19ರಂದು ಅಧ್ಯಕ್ಷರ ಇಲೆವೆನ್ ವಿರುದ್ಧ ಎರಡು ಅಭ್ಯಾಸ ಪಂದ್ಯಗಳಲ್ಲಿ ಭಾಗವಹಿಸಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌