ಆ್ಯಪ್ನಗರ

ಏಕದಿನ ಸರಣಿಯಿಂದಲೂ ಬುಮ್ರಾ ಔಟ್; ಶಾರ್ದೂಲ್‌ಗೆ ಬುಲಾವ್

ಗಾಯದ ಸಮಸ್ಯೆಗೆ ಒಳಗಾಗಿರುವ ಭಾರತದ ಬಲಗೈ ಮಧ್ಯಮ ಗತಿಯ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದಲೂ ಹೊರಗುಳಿಯಲಿದ್ದಾರೆ.

TOI.in 6 Jul 2018, 4:28 pm
ಹೊಸದಿಲ್ಲಿ: ಗಾಯದ ಸಮಸ್ಯೆಗೆ ಒಳಗಾಗಿರುವ ಭಾರತದ ಬಲಗೈ ಮಧ್ಯಮ ಗತಿಯ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಮುಂಬರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದಲೂ ಹೊರಗುಳಿಯಲಿದ್ದಾರೆ.
Vijaya Karnataka Web jasprit-bumrah-10


ಐರ್ಲೆಂಡ್ ವಿರುದ್ಧದ ಸರಣಿಯ ವೇಳೆ ಎಡಗೈ ಬೆರಳಿಗೆ ಗಾಯ ಮಾಡಿಕೊಂಡಿರುವ ಬುಮ್ರಾ, ಇಂಗ್ಲೆಂಡ್ ವಿರುದ್ಧದ ಟ್ವೆಂಟಿ-20 ಸರಣಿಗೆ ಅಲಭ್ಯವಾಗಿದ್ದರು. ಇದೀಗ ಏಕದಿನ ಸರಣಿಗೂ ಬುಮ್ರಾ ಸೇವೆಯಿಂದ ಟೀಮ್ ಇಂಡಿಯಾ ವಂಚಿತವಾಗಿದೆ.

ಕಳೆದ ವಾರ ಸರ್ಜರಿಗೊಳಗಾಗಿರುವ 24ರ ಹರೆಯದ ಬುಮ್ರಾ ಇದೀಗ ತವರಿಗೆ ಮರಳಿದ್ದು, ಬಿಸಿಸಿಐ ವೈದ್ಯಕೀಯ ತಂಡದ ಮೇಲ್ನೋಟದಲ್ಲಿ ಪುನಶ್ಚೇತನ ಹಾದಿಯಲ್ಲಿದ್ದಾರೆ. ಅಂತೆಯೇ ಇಂಗ್ಲಿಂಷ್ ವಿರುದ್ಧದ ಮಹತ್ವದ ಟೆಸ್ಟ್ ಸರಣಿಯ ವೇಳೆಗೆ ತಂಡವನ್ನು ಸೇರಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ.

ಈ ನಡುವೆ ಬುಮ್ರಾ ಬದಲಿ ಆಟಗಾರನನ್ನು ಘೋಷಿಸಲಾಗಿದ್ದು, ಏಕದಿನ ಸರಣಿಯಲ್ಲಿ ಶಾರ್ದೂಲ್ ಠಾಕೂರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಪ್ರಸ್ತುತ ಟಿ-20 ಸರಣಿಯಲ್ಲಿ ಬುಮ್ರಾ ಸ್ಥಾನವನ್ನು ದೀಪಕ್ ಚಹರ್ ತುಂಬಿಕೊಂಡಿದ್ದಾರೆ.

ಟೀಮ್ ಇಂಡಿಯಾ ಏಕದಿನ ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಸುರೇಶ್ ರೈನಾ, ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಯುಜ್ವೇಂದ್ರ ಚಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್, ಹಾರ್ದಿಕ್ ಪಾಂಡ್ಯ, ಸಿದ್ದಾರ್ಥ್ ಕೌಲ್ ಮತ್ತು ಉಮೇಶ್ ಯಾದವ್.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌