ಆ್ಯಪ್ನಗರ

ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಶಶಾಂಕ್ ರಾಜೀನಾಮೆ

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ತಾನು ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದರು.

ಟೈಮ್ಸ್ ಆಫ್ ಇಂಡಿಯಾ 15 Mar 2017, 4:48 pm
ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ತಾನು ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದರು.
Vijaya Karnataka Web shashank manohar steps down as icc chairman
ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಶಶಾಂಕ್ ರಾಜೀನಾಮೆ


2016 ಮೇ ತಿಂಗಳಲ್ಲಿ ಐಸಿಸಿ ಸ್ವತಂತ್ರ ಮುಖ್ಯಸ್ಥರಾಗಿ ಶಶಾಂಕ್ ನೇಮಕಗೊಂಡಿದ್ದರು. ಈಗ ಐಸಿಸಿ ಸಿಇಒ ಡೇವಿಡ್ ರಿಚರ್ಡ್‌ಸನ್‌ಗೆ ಸಲ್ಲಿಸಿದ ಪತ್ರದಲ್ಲಿ ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆಯೇ ರಾಜೀನಾಮೆ ಘೋಷಿಸಿದ್ದಾರೆ.

ಮಂಡಳಿಯ ಕಾರ್ಯನಿರ್ವಹಣೆ ಹಾಗೂ ನಿರ್ಧಾರಗಳಲ್ಲಿ ಪಾರದರ್ಶಕತೆಗಾಗಿ ನಾನು ನನ್ನ ಶ್ರೇಷ್ಠ ಪ್ರಯತ್ನವನ್ನು ಮಾಡಿದ್ದೇನೆ ಎಂದು ಎಂಟು ತಿಂಗಳುಗಳ ಅಧಿಕಾರವಾಧಿಯಲ್ಲೇ ರಾಜೀನಾಮೆ ನೀಡಿರುವ ಶಶಾಂಕ್ ತಿಳಿಸಿದ್ದಾರೆ.

ಹಾಗಿದ್ದರೂ ವೈಯಕ್ತಿಕ ಕಾರಣಗಳಿಂದಾಗಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ಈ ಸಂದರ್ಭದಲ್ಲಿ ಎಲ್ಲ ನಿರ್ದೇಶಕ, ಮ್ಯಾನೇಜ್‌ಮೆಂಟ್ ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಧನ್ಯವಾದವನ್ನು ಸಮರ್ಪಿಸಿದ್ದಾರೆ.

ಮನೋಹರ್ ಕಾಲಾವಧಿಯಲ್ಲಿ ಐಸಿಸಿ ತೆರಿಗೆ ಹಂಚಿಕೆ ಬಗ್ಗೆ ಪ್ರಸ್ತಾಪವನ್ನು ಬೆಂಬಲಿಸಿದ್ದರು. ಇದಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ (ಬಿಸಿಸಿಐ) ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌