ಆ್ಯಪ್ನಗರ

ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ದಾಖಲೆ ಮುರಿದ ಸ್ಟೀವ್ ಸ್ಮಿತ್

ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಮಾಜಿ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಆ್ಯಶಸ್ ಟೆಸ್ಟ್ ಸರಣಿಯನ್ನು ಸ್ಮರಣೀಯವಾಗಿಸಿದ್ದಾರೆ.

Vijaya Karnataka Web 6 Sep 2019, 10:41 am
ಮ್ಯಾಂಚೆಸ್ಟರ್‌: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಆಶ್ಯಸ್ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಾಧನೆ ಮಾಡಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಭಾರತದ ಮಾಜಿ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.
Vijaya Karnataka Web steven-smith-02


ಆಸ್ಪ್ರೇಲಿಯಾ ತಂಡದ ಮಾಜಿ ನಾಯಕ ಸ್ಟೀವನ್‌ ಸ್ಮಿತ್‌ ಆತಿಥೇಯ ಇಂಗ್ಲೆಂಡ್‌ ವಿರುದ್ಧದ ನಾಲ್ಕನೇ ಆ್ಯಶಸ್‌ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 26ನೇ ಟೆಸ್ಟ್‌ ಶತಕ ದಾಖಲಿಸಿದ್ದರು.

ಇದೇ ವೇಳೆ, 30 ವರ್ಷದ ಬ್ಯಾಟ್ಸ್‌ಮನ್‌ ದಾಖಲೆಯೊಂದಕ್ಕೆ ಭಾಜನರಾದರು. 121 ಇನಿಂಗ್ಸ್‌ಗಳಲ್ಲಿ 26ನೇ ಟೆಸ್ಟ್‌ ಶತಕ ಬಾರಿಸಿದ ಸ್ಮಿತ್‌, 136 ಇನಿಂಗ್ಸ್‌ಗಳಲ್ಲಿ 26 ಶತಕ ದಾಖಲಿಸಿದ್ದ ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆ ಮುರಿದು 2ನೇ ಸ್ಥಾನ ಆಕ್ರಮಿಸಿಕೊಂಡರು.

ಈ ಪಟ್ಟಿಯಲ್ಲಿ ಕ್ರಿಕೆಟ್‌ ದಂತಕತೆ ಆಸ್ಪ್ರೇಲಿಯಾದ ಬ್ರಾಡ್‌ಮನ್‌ಗೆ ಮೊದಲ ಸ್ಥಾನ. ಬ್ರಾಡ್ಮನ್‌ ಕೇವಲ 69 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಹಾಗೆಯೇ ಅತಿ ಹೆಚ್ಚು ಶತಕಗಳ ಸಾಲಿನಲ್ಲಿ ವಿರಾಟ್ ಕೊಹ್ಲಿ (25) ದಾಖಲೆಯನ್ನು ಮುರಿದಿದ್ದಾರೆ. ಸ್ಮಿತ್ ಎಲ್ಲ ಮೂರು ದ್ವಿಶತಕಗಳು ಆಸ್ಟ್ರೇಲಿಯಾ ವಿರುದ್ಧವೇ ದಾಖಲಾಗಿರುವುದು ಗಮನಾರ್ಹ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌