ಆ್ಯಪ್ನಗರ

ಕೊನೆಗೂ ಧವನ್ ಕೈಬಿಟ್ಟ ಕೊಹ್ಲಿ; ರಾಹುಲ್ ಓಪನರ್

ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಿಂದ ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಎಡಗೈ ಆರಂಭಿಕ ಶಿಖರ್ ಧವನ್ ಅವರನ್ನು ಕೈಬಿಡಲಾಗಿದೆ. ಈ ಮೂಲಕ ಕೊನೆಗೂ ಧವನ್‌ಗೆ ಕೊಕ್ ನೀಡಲು ನಾಯಕ ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ.

Vijaya Karnataka Web 10 Aug 2018, 3:40 pm
ಲಂಡನ್: ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಿಂದ ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಎಡಗೈ ಆರಂಭಿಕ ಶಿಖರ್ ಧವನ್ ಅವರನ್ನು ಕೈಬಿಡಲಾಗಿದೆ. ಈ ಮೂಲಕ ಕೊನೆಗೂ ಧವನ್‌ಗೆ ಕೊಕ್ ನೀಡಲು ನಾಯಕ ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ.
Vijaya Karnataka Web kl-rahul-03


ಇದರೊಂದಿಗೆ ಓಪನರ್ ಆಗಿ ಕಣಕ್ಕಿಳಿಯಲಿರುವ ಕನ್ನಡಿಗ ಕೆಎಲ್ ರಾಹುಲ್ ಮತ್ತೆ ಅವಕಾಶ ಬಾಚಿಕೊಳ್ಳುವ ಇರಾದೆಯಲ್ಲಿದ್ದಾರೆ. ಅತ್ತ ಮೊದಲ ಪಂದ್ಯದಲ್ಲಿ ಅವಕಾಶ ವಂಚಿರಾಗಿರುವ ಚೇತೇಶ್ವರ ಪೂಜಾರ ತಂಡವನ್ನು ಸೇರಿಕೊಂಡಿದ್ದಾರೆ.

ಕಳೆದ ಕೆಲವು ಸರಣಿಗಳಲ್ಲಿ ಧವನ್ ಕಳಪೆ ಪ್ರದರ್ಶನ ನೀಡುತ್ತಲೇ ಇದ್ದಾರೆ. ಆದರೂ ನಾಯಕ ಕೊಹ್ಲಿ ಬೆಂಬಲ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿದ್ದರು. ಇದರಿಂದಾಗಿ ರಾಹುಲ್ ಅವಕಾಶ ವಂಚಿತರಾಗಿದ್ದರು. ಇದೀಗ ಮತ್ತೆ ಓಪನರ್ ಆಗಿ ಇನ್ನಿಂಗ್ಸ್ ಆರಂಭಿಸುವ ಅವಕಾಶ ಪಡೆದಿದ್ದಾರೆ.

ಟೀಮ್ ಇಂಡಿಯಾದಲ್ಲಿ ಮಾಡಿರುವ ಮಗದೊಂದು ಪ್ರಮುಖ ಬದಲಾವಣೆ ಉಮೇಶ್ ಯಾದವ್ ಸ್ಥಾನಕ್ಕೆ ಕುಲ್‌ದೀಪ್ ಯಾದವ್ ಆಯ್ಕೆ ಮಾಡಲಾಗಿದೆ. ಟ್ವೆಂಟಿ-10 ಹಾಗೂ ಏಕದಿನ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿರುವ ಚೈನಾಮನ್ ಖ್ಯಾತಿಯ ಕುಲ್‌ದೀಪ್ ಯಾದವ್ ಇದೀಗ ಟೆಸ್ಟ್ ತಂಡಕ್ಕೂ ರಿ ಎಂಟ್ರಿ ನೀಡಿದ್ದಾರೆ.

ಇದಕ್ಕೆ ಕಾರಣ ನೀಡಿರುವ ನಾಯಕ ಕೊಹ್ಲಿ, ಇಲ್ಲಿನ ಪಿಚ್ ಪರಿಗಣಿಸಿ ಕುಲ್‌ದೀಪ್ ಆಯ್ಕೆ ಮಾಡಲಾಗಿದೆ. ಇಬ್ಬರು ಆಕ್ರಮಣಕಾರಿ ಸ್ಪಿನ್ನರ್‌ಗಳಿಂದ (ಅಶ್ವಿನ್ ಹಾಗೂ ಕುಲ್‌ದೀಪ್) ಉತ್ತಮ ಸಮತೋಲನ ಕಾಪಾಡಿಕೊಳ್ಳಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌