ಆ್ಯಪ್ನಗರ

ನ್ಯೂಜಿಲೆಂಡ್ ಸರಣಿಯಿಂದ ಹಾರ್ದಿಕ್ ಪಾಂಡ್ಯರನ್ನು ಕೈಬಿಡಲು ಕಾರಣ ಏನು?

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಬೆನ್ನು ನೋವಿನ ಶಸ್ತ್ರಚಿಕಿತ್ಸೆಗೊಳಗಾಗಿರುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಇನ್ನಷ್ಟೇ ಸಂಪೂರ್ಣವಾಗಿ ಚೇತರಿಕೆಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಆಯ್ಕೆಗೆ ಪರಿಗಣಿಸಲಾಗಿಲ್ಲ.

Vijaya Karnataka Web 22 Jan 2020, 10:06 am
ಹೊಸದಿಲ್ಲಿ: ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟಿ20 ಹಾಗೂ ಏಕದಿನ ಸರಣಿಯಿಂದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆಗೆ ಪರಿಗಣಿಸಿರಲಿಲ್ಲ. ಇದು ಅನೇಕರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಹಾರ್ದಿಕ್ ಪಾಂಡ್ಯ ಇನ್ನಷ್ಟೇ ಸಂಪೂರ್ಣವಾಗಿ ಚೇತರಿಸಿಕೊಳ್ಳಬೇಕಿದೆ. ಹಾಗಾಗಿ ನ್ಯೂಜಿಲೆಂಡ್ ಸರಣಿಗೆ ಅನ್‌ಫಿಟ್ ಎನಿಸಿಕೊಂಡಿದ್ದು, ಆಯ್ಕೆಗೆ ಪರಿಗಣಿಸಿರಲಿಲ್ಲ.
Vijaya Karnataka Web ಹಾರ್ದಿಕ್ ಪಾಂಡ್ಯ


ಇತ್ತೀಚೆಗಷ್ಟೇ ನಡೆದ ಫಿಟ್ನೆಸ್ ಪರೀಕ್ಷೆಯಲ್ಲೂ ಹಾರ್ದಿಕ್ ಪಾಂಡ್ಯ ವೈಫಲ್ಯಗೊಂಡಿದ್ದರು. ಇದರಿಂದಾಗಿ ಭಾರತ 'ಎ' ತಂಡದ ನ್ಯೂಜಿಲೆಂಡ್ ಪ್ರವಾಸದಿಂದಲೂ ಹೊರಗುಳಿಯುವಂತಾಯಿತು.

ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಟ್ವೆಂಟಿ-20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗವಹಿಸಲಿದೆ. ತದಾ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿಯು ನಡೆಯಲಿದೆ. ಆದರೆ ಟೆಸ್ಟ್ ತಂಡದಲ್ಲೂ ಹಾರ್ದಿಕ್ ಸ್ಥಾನ ಪಡೆಯುವ ಸಾಧ್ಯತೆ ವಿರಳವಾಗಿದೆ.

ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಟೀಮ್‌ ಇಂಡಿಯಾ ಪ್ರಕಟ, ಟಿ20 ತಂಡದಲ್ಲೂ ಬದಲಾವಣೆ!

ನ್ಯೂಜಿಲೆಂಡ್ ಪ್ರವಾಸದ ಬಳಿಕ ಮಾರ್ಚ್ ತಿಂಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ತವರು ನೆಲದಲ್ಲಿ ಏಕದಿನ ಸರಣಿಯಲ್ಲಿ ಭಾಗವಹಿಸಲಿದೆ. ಈ ವೇಳೆಯಾಗುವಾಗ ಪಾಂಡ್ಯ ತಂಡಕ್ಕೆ ಮರಳುವ ನಿರೀಕ್ಷೆಯಿದೆ.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಹಾರ್ದಿಕ್ ಪಾಂಡ್ಯ ಬೆನ್ನು ನೋವಿಗೆ ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಅಲ್ಲಿಂದ ಬಳಿಕ ತಮ್ಮ ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವದಕ್ಕೆ ತರಬೇತಿಯನ್ನು ಆರಂಭಿಸಿದ್ದರು. ಅಲ್ಲದೆ 26ರ ಹರೆಯದ ಪಾಂಡ್ಯ ನ್ಯೂಜಿಲೆಂಡ್ ಪ್ರವಾಸದ ವೇಳೆಗೆ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿತ್ತು.

ಕಳೆದ ಅನೇಕ ವರ್ಷಗಳಿಂದ ಪಾಂಡ್ಯಗೆ ಪದೇ ಪದೇ ಬೆನ್ನು ನೋವಿನ ಸಮಸ್ಯೆ ಕಾಡಲಾರಂಭಿಸಿತ್ತು. 2018ರಲ್ಲಿ ನಡೆದ ಏಷ್ಯಾ ಕಪ್‌ನಿಂದಲೂ ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದರು. ಈ ನಡುವೆ 2019 ಐಪಿಎಲ್‌ನಲ್ಲಿ ಕಮ್‌ಬ್ಯಾಕ್ ಮಾಡಿದ್ದರು.

ಕಿವೀಸ್‌ ಪ್ರವಾಸದಲ್ಲಿ 'ಹಿಟ್‌ಮ್ಯಾನ್‌' ರೋಹಿತ್‌ಗೆ ಎದುರಾಗಬಲ್ಲ ಸವಾಲುಗಳನ್ನು ವಿವರಿಸಿದ ಸಚಿನ್!

ತಾನು ಫಿಟ್ ಆಗಿದ್ದೇನೆ ಎಂಬುದನ್ನು ಹಾರ್ದಿಕ್ ಪಾಂಡ್ಯ ನಂಬಿಕೊಂಡಿದ್ದರು. ಆದರೆ ಫಿಟ್ನೆಸ್ ಟೆಸ್ಟ್‌ನಲ್ಲಿ ವಿಫಲವಾಗಿದ್ದರು. ಇದು ಯೊ ಯೊ ಟೆಸ್ಟ್ ವಿಚಾರವಲ್ಲ. ಸಾಧಾರಣ ಬೌಲಿಂಗ್ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾದರು. ಕೆಲಸದೊತ್ತಡ ಪರೀಕ್ಷೆ ನಡೆಸಲು ನಡೆಸಿದ ಪರೀಕ್ಷೆ ಇದಾಗಿತ್ತು ಎಂದು ಬಿಸಿಸಿಐ ಮೂಲಗಳು ತಿಳಿಸಿದ್ದಾರೆ.

ಮುಂಬರುವ ಟಿ20 ವಿಶ್ವಕಪ್ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ಪರಿಪೂರ್ಣವಾಗಿ ಫಿಟ್ನೆಸ್ ಕಾಯ್ದುಕೊಳ್ಳುವುದು ಅತಿ ಮುಖ್ಯವೆನಿಸುತ್ತದೆ. ಈ ನಿಟ್ಟಿನಟ್ಟಿ ಸಾಕಷ್ಟು ಕಾಲವಕಾಶವನ್ನು ನೀಡಲಾಗುತ್ತಿದೆ. ಮುಂಬರುವ ಐಪಿಎಲ್ ಕೂಡಾ ಹಾರ್ದಿಕ್ ಪಾಂಡ್ಯ ಪಾಲಿಗೆ ನಿರ್ಣಾಯಕವೆನಿಸಲಿದೆ.

ಭಾರತಕ್ಕೆ ಮತ್ತೊಂದು ಗಾಯದ ಬರೆ, ಕಿವೀಸ್‌ ಪ್ರವಾಸದಿಂದ ಸಂಪೂರ್ಣವಾಗಿ ಹೊರಬಿದ್ದ ಇಶಾಂತ್‌!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌