ಆ್ಯಪ್ನಗರ

ಕಿಂಗ್ಸ್ ಇಲೆವೆನ್ ಪಂಜಾಬ್ ಬೌಲಿಂಗ್ ಕೋಚ್ ಸ್ಥಾನಕ್ಕೆ ವೆಂಕೆಟೇಶ್ ಪ್ರಸಾದ್ ನೇಮಕ

ಭಾರತದ ಮಾಜಿ ಬಲಗೈ ವೇಗಿ ಕರ್ನಾಟಕದ ವೆಂಕಟೇಶ್ ಪ್ರಸಾದ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ.

TIMESOFINDIA.COM 4 Mar 2018, 3:15 pm
ಮೊಹಾಲಿ: ಭಾರತದ ಮಾಜಿ ಬಲಗೈ ವೇಗಿ ಕರ್ನಾಟಕದ ವೆಂಕಟೇಶ್ ಪ್ರಸಾದ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ.
Vijaya Karnataka Web venkatesh prasad appointed bowling coach at kxip
ಕಿಂಗ್ಸ್ ಇಲೆವೆನ್ ಪಂಜಾಬ್ ಬೌಲಿಂಗ್ ಕೋಚ್ ಸ್ಥಾನಕ್ಕೆ ವೆಂಕೆಟೇಶ್ ಪ್ರಸಾದ್ ನೇಮಕ


ವೈಯಕ್ತಿಕ ಹಿತಾಸಕ್ತಿಯ ಸಂಘರ್ಷದ ಹಿನ್ನಲೆಯಲ್ಲಿ ಇದೀಗಷ್ಟೇ ಭಾರತದ 19 ವರ್ಷದೊಳಗಿನವರ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥನ ಸ್ಥಾನಕ್ಕೆ ಪ್ರಸಾದ್ ರಾಜೀನಾಮೆ ನೀಡಿದ್ದರು.

ಮುಂಬರುವ ಮೂರು ಆವೃತ್ತಿಗಳಿಗೆ ಆಸ್ಟ್ರೇಲಿಯಾದ ಮಾಜಿ ಆಟಗಾರ ಬ್ರಾಡ್ ಹಾಡ್ಜ್ ಅವರನ್ನು ಮುಖ್ಯ ತರಬೇತುದಾರನಾಗಿ ನೇಮಕಗೊಳಿಸಲಾಗಿದೆ.

ಅದೇ ಹೊತ್ತಿಗೆ ಟೀಮ್ ಇಂಡಿಯಾದ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಮಾರ್ಗದರ್ಶಕರಾಗಿ ಮುಂದುವರಿಯಲಿದ್ದಾರೆ.

ಐಪಿಎಲ್ 2018ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ತಂಡವನ್ನು ರವಿಚಂದ್ರನ್ ಅಶ್ವಿನ್ ಮುನ್ನಡೆಸಲಿದ್ದಾರೆ. ತಂಡದಲ್ಲಿ ಅನುಭವಿ ಆಲ್‌ರೌಂಡರ್ ಯುವರಾಜ್ ಸಿಂಗ್ ಜತೆಗೆ ಕನ್ನಡಿಗರಾದ ಮಯಾಂಕ್ ಅಗರ್ವಾಲ್, ಕರುಣ್ ನಾಯರ್ ಹಾಗೂ ಕೆಎಲ್ ಲಾಹುಲ್ ಕಾಣಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌