ಆ್ಯಪ್ನಗರ

Kings XI Punjab: ಪಂಜಾಬ್‌ನಿಂದ ಔಟ್ - ರಣಜಿ ಮೇಲೆ ಯುವಿ ಗಮನ

2019ರ ವಿಶ್ವಕಪ್ ತಂಡಕ್ಕೆ ಯುವಿ ಪುನರಾಗಮನ ಸಾಧ್ಯವೇ?

Vijaya Karnataka Web 28 Nov 2018, 12:07 pm
ಹೊಸದಿಲ್ಲಿ: ಮುಂದಿನ ವರ್ಷ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಕಿಂಗ್ ಇಲೆವೆನ್ ಪಂಜಾಬ್ ತಂಡದಿಂದ ನಿರ್ಗಮಿಸಿರುವ ಭಾರತದ ಹಿರಿಯ ಆಲ್‌ರೌಂಡರ್ ಯುವರಾಜ್ ಸಿಂಗ್, ಈಗಲೂ ಟೀಮ್ ಇಂಡಿಯಾ ಕಮ್‌ಬ್ಯಾಕ್ ಎದುರು ನೋಡುತ್ತಿದ್ದಾರೆ.
Vijaya Karnataka Web yuvraj-singh


ಇದರಂತೆ 2018-19 ರಣಜಿ ಟ್ರೋಫಿ ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಿದ್ದಾರೆ. ದೇಶೀಯ ಟೂರ್ನಿಯಲ್ಲಿ ಪಂಜಾಬ್ ತಂಡಕ್ಕೆ ನೆರವಾಗುವುದು ಯುವಿ ಗುರಿಯಾಗಿದೆ.

2017 ಜೂನ್ ತಿಂಗಳಲ್ಲಿ 36ರ ಹರೆಯದ ಯುವಿ ಕೊನೆಯದಾಗಿ ದೇಶವನ್ನು ಪ್ರತಿನಿಧಿಸಿದ್ದರು. ಹಾಗೆಯೇ ಹಿಮಾಚಲ ಪ್ರದೇಶ ಹಾಗೂ ತಮಿಳು ನಾಡು ವಿರುದ್ಧ ನಡೆಯಲಿರುವ ಮುಂದಿನ ಎರಡು ಪಂದ್ಯಗಳಿಗೆ ಲಭ್ಯವಾಗಲಿದ್ದಾರೆ.

2007ರ ಚೊಚ್ಚಲ ಟ್ವೆಂಟಿ-20 ಹಾಗೂ 2011 ಏಕದಿನ ವಿಶ್ವಕಪ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಯುವಿಗೆ 2019ರ ವಿಶ್ವಕಪ್ ಹಿನ್ನಲೆಯಲ್ಲಿ ಮಗದೊಮ್ಮೆ ಕಮ್‌ಬ್ಯಾಕ್ ಮಾಡಲು ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನೊಂದೆಡೆ ಕಿಂಗ್ಸ್ ಇಲೆವೆನ್ ತಂಡವು ಕೈಬಿಟ್ಟಿರುವುದರಿಂದ ಯುವಿ ಅವರನ್ನು ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಖರೀದಿಸಬೇಕು ಎಂದು ಅಭಿಮಾನಿಗಳು ಕರೆ ನೀಡಿದ್ದಾರೆ. ಮಗದೊಮ್ಮೆ ಮೈದಾನದಲ್ಲಿ ಯುವಿ-ಧೋನಿ ಜುಗಲ್‌ಬಂಧಿ ಸಾಧ್ಯವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌