ಸಿಕ್ಸರ್ ಕಿಂಗ್ ಯುವಿ @38; ಮರೆಯಲಾಗದ ಆರು ಬಾಲ್ಗೆ ಆರು ಸಿಕ್ಸರ್!
ಹೊಸದಿಲ್ಲಿ: ವಿಶ್ವಕಪ್ ವಿಜೇತ ಹೀರೊ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ 38ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ಚಾಂಪಿಯನ್ ಆಟಗಾರನಿಗೆ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಸಲ್ಲಿಸಿರುವ ಯುವರಾಜ್ ಸಿಂಗ್, ಇದೀಗ ಆಯ್ದ ಅಂತಾರಾಷ್ಟ್ರೀಯ ಟಿ20 ಟೂರ್ನಿಗಳಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ.
Vijaya Karnataka Web12 Dec 2019, 2:34 pm
ಹೊಸದಿಲ್ಲಿ: ವಿಶ್ವಕಪ್ ವಿಜೇತ ಹೀರೊ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ 38ನೇ ವರ್ಷಕ್ಕೆ ಕಾಲಿರಿಸಿದ್ದಾರೆ. ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ಚಾಂಪಿಯನ್ ಆಟಗಾರನಿಗೆ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಸಲ್ಲಿಸಿರುವ ಯುವರಾಜ್ ಸಿಂಗ್, ಇದೀಗ ಆಯ್ದ ಅಂತಾರಾಷ್ಟ್ರೀಯ ಟಿ20 ಟೂರ್ನಿಗಳಲ್ಲಿ ಮಾತ್ರ ಭಾಗವಹಿಸುತ್ತಿದ್ದಾರೆ.
ವಿಶ್ವಕಪ್ ಹೀರೊ
2007 ಟ್ವೆಂಟಿ-20 ಹಾಗೂ 2011 ಏಕದಿನ ವಿಶ್ವಕಪ್ ಗೆಲುವಿನಲ್ಲಿ ಯುವರಾಜ್ ಸಿಂಗ್ ಮಹತ್ತರ ಪಾತ್ರ ವಹಿಸಿದರು. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಯುವಿಗಾಗಿ ವಿಶೇಷ ವೀಡಿಯೋವೊಂದನ್ನು ಅರ್ಪಿಸಿದೆ. ಟ್ವೆಂಟಿ-20 ವಿಶ್ವಕಪ್ನಲ್ಲಿ ಇಂಗ್ಲೆಂಡ್ನ ಸ್ಟುವರ್ಟ್ ಬಾರ್ಡ್ ದಾಳಿಯಲ್ಲಿ ಎಲ್ಲ ಆರು ಎಸೆತಗಳಲ್ಲಿ ಸಿಕ್ಸರ್ ಬಾರಿಸಿದ್ದರು.
ಭಾರತದ ಯಶಸ್ವಿ ಆಲ್ರೌಂಡರ್
ಕ್ಯಾನ್ಸರ್ ಪೀಡೆಯ ಮಧ್ಯೆಯೂ 2011ರಲ್ಲಿ ಭಾರತಕ್ಕೆ 28 ವರ್ಷಗಳ ಬಳಿಕ ವಿಶ್ವಕಪ್ ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾದರು. 400ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 10000ಕ್ಕೂ ಹೆಚ್ಚು ರನ್ ಗಳಿಸಿದ ಹಿರಿಮೆಗೆ ಯುವಿ ಭಾಜನವಾಗಿದ್ದಾರೆ.
ಯುವ'ರಾಜ'
ಯುವರಾಜ್ ಸಿಂಗ್ ಭಾರತ ತಂಡವನ್ನು 40 ಟೆಸ್ಟ್, 304 ಏಕದಿನ ಹಾಗೂ 58 ಟ್ವೆಂಟಿ-20 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. ಹಾಗೆಯೇ ಅನುಕ್ರಮವಾಗಿ 1900, 8701 ಹಾಗೂ 1177 ರನ್ ಗಳಿಸಿದ್ದಾರೆ. ಇನ್ನು ಟೆಸ್ಟ್, ಏಕದಿನ ಹಾಗೂ ಟ್ವೆಂಟಿ-20 ಪ್ರಕಾರದಲ್ಲಿ ಅನುಕ್ರಮವಾಗಿ 9, 111 ಹಾಗೂ 28 ವಿಕೆಟುಗಳನ್ನು ಕಬಳಿಸಿದ್ದಾರೆ. ಅಂತೆಯೇ 132 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ.
Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ರಿಪೋರ್ಟ್ ಕಳಿಸಿ
We use cookies and other tracking technologies to provide services in line with the preferences you reveal while browsing the Website to show personalize content and targeted ads, analyze site traffic, and understand where our audience is coming from in order to improve your browsing experience on our Website. By continuing to browse this Website, you consent to the use of these cookies. If you wish to object such processing, please read the instructions described in our privacy policy/cookie policy.