ಆ್ಯಪ್ನಗರ

CWG 2018: ಮಣಿಕಾ-ಮೌಮಾ ಜೋಡಿಗೆ ಬೆಳ್ಳಿ ಪದಕ

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಸಾಗುತ್ತಿರುವ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಣಿಕಾ ಬಾತ್ರಾ ಹಾಗೂ ಮೌಮಾ ದಾಸ್ ಬೆಳ್ಳಿ ಪದಕ ಗೆದ್ದಿದ್ದಾರೆ.

Vijaya Karnataka Web 13 Apr 2018, 4:45 pm
ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್‌ನಲ್ಲಿ ಸಾಗುತ್ತಿರುವ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಣಿಕಾ ಬಾತ್ರಾ ಹಾಗೂ ಮೌಮಾ ದಾಸ್ ಬೆಳ್ಳಿ ಪದಕ ಗೆದ್ದಿದ್ದಾರೆ.
Vijaya Karnataka Web manika-mouma


ಇದರೊಂದಿಗೆ ಭಾರತದ ಪದಕಗಳ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಶುಕ್ರವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಡಬಲ್ಸ್ ವಿಭಾಗದಲ್ಲಿ ಮಣಿಕಾ ಹಾಗೂ ಮೌಮಾ ಜೋಡಿಯು ಸಿಂಗಾಪುರದ ಫೆಂಗ್ ಟಿಯಾನ್ವೀ ಹಾಗೂ ಯೂ ಮೆಂಗ್ಯು ಜೋಡಿ ವಿರುದ್ಧ 0-3ರ ಅಂತರದಲ್ಲಿ ಸೋಲನುಭವಿಸಿದರು.

ಎಲ್ಲ ಮೂರು ಗೇಮ್‌ಗಳಲ್ಲೂ ಸಿಂಗಾಪುರ ಜೋಡಿಯು 11-5, 11-4 ಹಾಗೂ 11-5ರ ಅಂತರದಲ್ಲಿ ಪ್ರಾಬಲ್ಯ ಸಾಧಿಸುವ ಮೂಲಕ ಪಂದ್ಯ ವಶಪಡಿಸಿಕೊಂಡಿತ್ತು.

ಕೆಲವು ದಿನಗಳ ಹಿಂದೆಯಷ್ಟೇ ಟೇಬಲ್ ಟೆನಿಸ್ ಮಹಿಳಾ ತಂಡ ವಿಭಾಗದಲ್ಲಿ ಭಾರತಕ್ಕೆ ಚಿನ್ನ ಪದಕ ಗೆಲ್ಲಿಸಿಕೊಡುವಲ್ಲಿ ಮಣಿಕಾ ಹಾಗೂ ಮೌಮಾ ನಿರ್ಣಾಯಕ ಪಾತ್ರ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌