ಆ್ಯಪ್ನಗರ

Roger Federer: ವಿಂಬಲ್ಡನ್; 3ನೇ ಸುತ್ತಿಗೆ ಫೆಡರರ್ ಲಗ್ಗೆ

ಪ್ರತಿಷ್ಠಿತ ವಿಂಬಲ್ಡನ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಮೆಂಟ್‌ನಲ್ಲಿ ಹಾಲಿ ಚಾಂಪಿಯನ್ ಸ್ವಿಜರ್ಲೆಂಡ್‌ನ ರೋಜರ್ ಫೆಡರರ್ ಮೂರನೇ ಸುತ್ತಿಗೆ ಲಗ್ಗೆಯಿಟ್ಟಿದ್ದಾರೆ.

TOI.in 5 Jul 2018, 12:29 pm
ಲಂಡನ್: ಪ್ರತಿಷ್ಠಿತ ವಿಂಬಲ್ಡನ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಮೆಂಟ್‌ನಲ್ಲಿ ಹಾಲಿ ಚಾಂಪಿಯನ್ ಸ್ವಿಜರ್ಲೆಂಡ್‌ನ ರೋಜರ್ ಫೆಡರರ್ ಮೂರನೇ ಸುತ್ತಿಗೆ ಲಗ್ಗೆಯಿಟ್ಟಿದ್ದಾರೆ.
Vijaya Karnataka Web roger-federer-12


ಬುಧವಾರ ನಡೆದ ಎರಡನೇ ಸುತ್ತಿನ ಹೋರಾಟದಲ್ಲಿ ಲೂಕಾಸ್ ಲ್ಯಾಕೋ ವಿರುದ್ಧ ಫೆಡರರ್ 6-4, 6-4, 6-1ರ ಅಂತರದ ಸುಲಭ ಗೆಲುವು ದಾಖಲಿಸಿದರು.

ಫೆಡರರ್ ಇದೀಗ ಮೂರನೇ ಸುತ್ತಿನ ಹೋರಾಟದಲ್ಲಿ ಜರ್ಮನಿಯ ಜ್ಯಾನ್ ಲೆನಾರ್ಡ್ ಸ್ಟ್ರಫ್ ಸವಾಲನ್ನು ಎದುರಿಸಲಿದ್ದಾರೆ.

ದಾಖಲೆಯ 20 ಬಾರಿಯ ಗ್ರ್ಯಾನ್ ಸ್ಲಾಮ್ ಚಾಂಪಿಯನ್ ಫೆಡರರ್, ಈಗಾಗಲೇ ಎಂಟು ಬಾರಿ ವಿಂಬಲ್ಡನ್ ಗ್ರ್ಯಾನ್ ಸ್ಲಾಮ್ ಟ್ರೋಫಿಯನ್ನು ಬಗಲಿಗೇರಿಸಿದ್ದಾರೆ.

ಪ್ರಸ್ತುತ ಕಳೆದ ವರ್ಷದ ಅದೇ ಸಾಧನೆ ಪುನರಾವರ್ತಿಸುವ ಇರಾದೆಯಲ್ಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌