ಆ್ಯಪ್ನಗರ

ಕ್ವಾರ್ಟರ್ ಫೈನಲ್‌ನಲ್ಲಿ ಮುಗ್ಗರಿಸಿದ ಸೈನಾ

ಚೀನಾದ ನಾಂಜಿಂಗ್‌ನಲ್ಲಿ ಸಾಗುತ್ತಿರುವ ಬಿಡ್ಲ್ಯುಎಫ್ ಚಾಂಪಿಯನ್‌ಶಿಪ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಭಾರತದ ಹಿರಿಯ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಕ್ವಾರ್ಟರ್ ಫೈನಲ್‌ನಲ್ಲಿ ಸೋಲಿನ ಕಹಿ ಅನುಭವಿಸಿ ಕೂಟದಿಂದಲೇ ನಿರ್ಗಮಿಸಿದ್ದಾರೆ.

TOI.in 3 Aug 2018, 3:37 pm
ಹೊಸದಿಲ್ಲಿ: ಚೀನಾದ ನಾಂಜಿಂಗ್‌ನಲ್ಲಿ ಸಾಗುತ್ತಿರುವ ಬಿಡ್ಲ್ಯುಎಫ್ ಚಾಂಪಿಯನ್‌ಶಿಪ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಭಾರತದ ಹಿರಿಯ ಅನುಭವಿ ಆಟಗಾರ್ತಿ ಸೈನಾ ನೆಹ್ವಾಲ್ ಕ್ವಾರ್ಟರ್ ಫೈನಲ್‌ನಲ್ಲಿ ಸೋಲಿನ ಕಹಿ ಅನುಭವಿಸಿ ಕೂಟದಿಂದಲೇ ನಿರ್ಗಮಿಸಿದ್ದಾರೆ.
Vijaya Karnataka Web saina-nehwal-07


ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಸತತ ಎಂಟನೇ ಬಾರಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ದಾಖಲೆ ಮಾಡಿರುವ ಸೈನಾ, ಮತ್ತೆ ಪ್ರಭಾವಿ ಎನಿಸಿಕೊಳ್ಳುವಲ್ಲಿ ವಿಫಲವಾದರು.

ಪ್ರಿ ಕ್ವಾರ್ಟರ್‌ಫೈನಲ್‌ನಲ್ಲಿ ಬಲಿಷ್ಠ ಎದುರಾಳಿ ಇಂತನಾನ್‌ ಸವಾಲು ಮೆಟ್ಟಿ ನಿಂತ 10ನೇ ಶ್ರೇಯಾಂಕದ ಸೈನಾ ನೆಹ್ವಾಲ್‌ ಅವರಿಗೆ ಕ್ವಾರ್ಟರ್‌ಫೈನಲ್‌ನಲ್ಲಿ ಸ್ಪೇನ್‌ನ 7ನೇ ಶ್ರೇಯಾಂಕದ ಕ್ಯಾರೊಲಿನಾ ಮರಿನ್‌ ಸವಾಲು ಎದುರಾಗಿತ್ತು. 6-21, 11-21ರ ಸುಲಭ ಹೋರಾಟದಲ್ಲಿ ಸೋಲನುಭವಿಸುವ ಮೂಲಕ ನಿರಾಸೆ ಅನುಭವಿಸಿದರು.

ಏಳನೇ ಶ್ರೇಯಾಂಕಿತರಾಗಿರುವ ಮರಿನ್ ಕೇವಲ 31 ನಿಮಿಷಗಳಲ್ಲಿ ಸೈನಾ ಸವಾಲನ್ನು ಹಿಮ್ಮೆಟ್ಟಿಸಿದರು. ಈ ಮೂಲಕ ಸೈನಾ ಜತೆಗಿನ ಸ್ಪರ್ಧೆಯಲ್ಲಿ 5-5ರ ಅಂತರದ ಸಮಬಲ ಸಾಧಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌