ಆ್ಯಪ್ನಗರ

Instagram: ಸುಳ್ಳು ಸುದ್ದಿ ತಡೆಯಲು ಕ್ರಮ

ನಕಲಿ ಖಾತೆ ಮತ್ತು ಸುಳ್ಳುಸುದ್ದಿಗಳನ್ನು ತಡೆಯಲು ಫೇಸ್‌ಬುಕ್‌ ಒಡೆತನದ ಇನ್‌ಸ್ಟಾಗ್ರಾಂ ಮುಂದಾಗಿದೆ.

Gadgets Now 16 Aug 2019, 12:53 pm
ಸಾಮಾಜಿಕ ತಾಣಗಳಲ್ಲಿ ನಕಲಿ ಖಾತೆ ಮತ್ತು ಸುಳ್ಳುಸುದ್ದಿಗಳನ್ನು ತಡೆಯಲು ವಿವಿಧ ಕ್ರಮ ಕೈಗೊಳ್ಳುತ್ತಿದ್ದರೂ, ಯಾವುದೇ ಪ್ರಯೋಜನವಾಗುತ್ತಿಲ್ಲ.
Vijaya Karnataka Web Insta


ದಿನವೂ ನೂರಾರು ಸಂಖ್ಯೆಯ ಸುಳ್ಳುಸುದ್ದಿಗಳು ಸಾಮಾಜಿಕ ತಾಣಗಳ ವಿವಿಧ ಫ್ಲ್ಯಾಟ್‌ಫಾರ್ಮ್‌ಗಳಲ್ಲಿ ಹರಿದಾಡುತ್ತಿವೆ. ಅದಕ್ಕೆ ಕಡಿವಾಣ ಹಾಕಲು ಫೇಸ್‌ಬುಕ್ ಒಡೆತನದ ಇನ್‌ಸ್ಟಾಗ್ರಾಂ ಮುಂದಾಗಿದ್ದು, ಬಳಕೆದಾರರು ಸುಳ್ಳುಸುದ್ದಿ ಪತ್ತೆಹಚ್ಚಿದರೆ, ಅಲ್ಲಿ ಮಾರ್ಕ್ ಮಾಡಲು ಅವಕಾಶ ಕಲ್ಪಿಸಿದೆ.

ಯಾವುದೇ ಇನ್‌ಸ್ಟಾಗ್ರಾಂ ಪೋಸ್ಟ್ ಸುಳ್ಳು ಸುದ್ದಿ, ನಕಲಿ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದಲ್ಲಿ, ಅದನ್ನು ಬಳಕೆದಾರರು ರಿಪೋರ್ಟ್ ಮಾಡಬಹುದಾಗಿದ್ದು, ಇನ್‌ಸ್ಟಾಗ್ರಾಂ ಟೀಂ ಅಂತಹ ಪೋಸ್ಟ್ ಅನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ.

ಜನರು ಮತ್ತು ಸಮಾಜಕ್ಕೆ ತಪ್ಪು ಮಾಹಿತಿ ಹೋಗುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಫೇಸ್‌ಬುಕ್ ಹೇಳಿದೆ. ಆರಂಭದಲ್ಲಿ ಅಮೆರಿಕದಲ್ಲಿ ಈ ಆಯ್ಕೆ ಲಭ್ಯವಾಗಲಿದ್ದು, ನಂತರ ಇತರ ಕಡೆಗಳಲ್ಲಿ ದೊರೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌