ಆ್ಯಪ್ನಗರ

Google: ಬಳಕೆದಾರರ ಮಾಹಿತಿ ಮಾರಾಟ ಮಾಡಲ್ಲ

​ಬೃಹತ್‌ ಸಾಮಾಜಿಕ ಜಾಲತಾಣಗಳು ತಮ್ಮ ಬಳಕೆದಾರರ ಮಾಹಿತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂಬ ಜಾಗತಿಕ ಆತಂಕ ಹೆಚ್ಚುತ್ತಿರುವಾಗಲೇ ಗೂಗಲ್‌ ಮುಖ್ಯಸ್ಥರ ಈ ಹೇಳಿಕೆ ಮಹತ್ವ ಪಡೆದುಕೊಂಡಿವೆ.

Agencies 13 May 2019, 2:19 pm
ತನ್ನ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಥರ್ಡ್‌ ಪಾರ್ಟಿಗೆ ಯಾವತ್ತೂ ಮಾರಾಟ ಮಾಡುವುದಿಲ್ಲ ಎಂದು ಗೂಗಲ್‌ ಸಿಇಒ ಸುಂದರ್‌ ಪಿಚ್ಬೆೃ ಹೇಳಿದ್ದಾರೆ.
Vijaya Karnataka Web Google


ಬೃಹತ್‌ ಸಾಮಾಜಿಕ ಜಾಲತಾಣಗಳು ತಮ್ಮ ಬಳಕೆದಾರರ ಮಾಹಿತಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂಬ ಜಾಗತಿಕ ಆತಂಕ ಹೆಚ್ಚುತ್ತಿರುವಾಗಲೇ ಗೂಗಲ್‌ ಮುಖ್ಯಸ್ಥರ ಈ ಹೇಳಿಕೆ ಹೆಚ್ಚು ಮಹತ್ವ ಪಡೆದುಕೊಂಡಿವೆ. ನ್ಯೂಯಾರ್ಕ್‌ ಟೈಮ್ಸ್‌ ಪತ್ರಿಕೆಯ ಜತೆ ಮಾತನಾಡಿರುವ ಅವರು, ''ಖಾಸಗಿ ಮಾಹಿತಿ ಎನ್ನುವುದು ನಮ್ಮ ಕಾಲದ ಅತ್ಯಂತ ಮಹತ್ವದ ಸಂಗತಿಯಾಗಿದೆ'' ಎಂದು ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ಮಾಹಿತಿಯನ್ನು ಹೇಗೆಲ್ಲ ಬಳಸಿಕೊಳ್ಳಲಾಗುತ್ತಿದೆ ಮತ್ತು ಹಂಚಿಕೊಳ್ಳಲಾಗುತ್ತಿದೆ ಎಂಬ ಬಗ್ಗೆ ಜನರು ಆತಂಕಗೊಳ್ಳುತ್ತಿರುವುದು ಸರಿಯಾಗಿಯೇ ಇದೆ. ಹೀಗಿದ್ದಾಗ್ಯೂ, ಯಾವುದೆಲ್ಲ ಖಾಸಗಿ ಮಾಹಿತಿ ಎಂಬುದನ್ನು ಅವರೇ ವ್ಯಾಖ್ಯಾನ ಮಾಡಿಕೊಳ್ಳಬೇಕಾಗಿದೆ ಎನ್ನುತ್ತಾರೆ ಅವರು.

ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಿಂದ ಬಳಕೆದಾರರ ಮಾಹಿತಿ ಮೂರನೇ ಪಾರ್ಟಿಗಳಿಗೆ ಸೋರಿಕೆಯಾಗಿ, ನಾನಾ ಅನಾಹುತಗಳಿಗೆ ಕಾರಣವಾಗುತ್ತಿವೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌