ಆ್ಯಪ್ನಗರ

100W ಫಾಸ್ಟ್ ಚಾರ್ಜ್, 108MP ಕ್ಯಾಮೆರಾ: ಹಾನರ್ ನಿಂದ ಬರೋಬ್ಬರಿ 3 ಫೋನ್ ರಿಲೀಸ್

ಹಾನರ್‌ ಸಂಸ್ಥೆಯು ಸದ್ಯಕ್ಕೆ ಹಾನರ್ 50 ಪ್ರೊ, ಹಾನರ್ 50 ಮತ್ತು ಹಾನರ್ 50 SE ಫೋನುಗಳನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು 108 ಮೆಗಾ ಪಿಕ್ಸಲ್ ಕ್ಯಾಮೆರಾ ಒಳಗೊಂಡಿರುವುದು ಹೈಲೈಟ್.

Vijaya Karnataka Web 17 Jun 2021, 5:12 pm
ಜಾಗತಿಕ ಮಾರುಕಟ್ಟೆಗೆ ಇಂದು ಮತ್ತೊಂದು ಸ್ಮಾರ್ಟ್ ಫೋನ್ ಪರಿಚಯವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯವನ್ನು ಹೊಂದಿರುವ ಹುವಯೀ ಕಂಪನಿಯಸಬ್ ಬ್ರ್ಯಾಂಡ್ ಹಾನರ್ ನಿಂದಲೇ ಹೊಸ ಫೋನ್ ಮಾರುಕಟ್ಟೆಗೆ ಬಿಡುಗಡೆಯಾಗಿರುವುದು. ಇದು ಹಾನರ್‌ 50 ಸ್ಮಾರ್ಟ್‌ಫೋನ್‌ ಸರಣಿ ಆಗಿದೆ. ಇದರಲ್ಲಿ ಹಾನರ್ 50 ಪ್ರೊ, ಹಾನರ್ 50 ಮತ್ತು ಹಾನರ್ 50 SE ಸ್ಮಾರ್ಟ್‌ಫೋನ್‌ ಮಾಡೆಲ್‌ಗಳನ್ನು ಒಳಗೊಂಡಿದೆ.
Vijaya Karnataka Web honor 50 series with 108mp camera launched here is the price specs
100W ಫಾಸ್ಟ್ ಚಾರ್ಜ್, 108MP ಕ್ಯಾಮೆರಾ: ಹಾನರ್ ನಿಂದ ಬರೋಬ್ಬರಿ 3 ಫೋನ್ ರಿಲೀಸ್


ಹಾನರ್‌ ಸಂಸ್ಥೆಯು ಸದ್ಯಕ್ಕೆ ಈ ಫೋನುಗಳನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು 120Hz ಸ್ಕ್ರೀನ್‌ ರೀಫ್ರೇಶ್ ರೇಟ್ ಹಾಗೂ 108 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಅನ್ನು ಒಳಗೊಂಡಿರುವುದು ಪ್ರಮುಖ ಹೈಲೈಟ್ ಆಗಿದೆ. ಇನ್ನುಳಿದಂತೆ ಈ ಫೋನಿನ ವಿಶೇಷತೆ ಏನು ಎಂಬುದನ್ನು ನೋಡುವುದಾದರೆ…

ಹಾನರ್ 50:

ಹಾನರ್ 50 ಪ್ರೊ ಸ್ಮಾರ್ಟ್‌ಫೋನ್ 2,340x1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡ 6.57 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದರ ಡಿಸ್‌ಪ್ಲೇ ರೀಫ್ರೇಶ್ ರೇಟ್ 120Hz ಆಗಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್‌ ನಿಂದ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಈ ಫೋನ್ ಬರೋಬ್ಬರಿ ನಾಲ್ಕು ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಆಗಿದೆ. ಇದರೊಂದಿಗೆ 4,300mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, 66W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ.

Instagram ತೆರೆಯದೆ ಇನ್‌ಸ್ಟಾಗ್ರಾಮ್‌ ಸ್ಟೋರಿ ಪೋಸ್ಟ್ ಮಾಡುವ ಟ್ರಿಕ್ ನಿಮಗೆ ಗೊತ್ತೇ?

ಹಾನರ್ 50 ಪ್ರೊ:

ಹಾನರ್ 50 ಪ್ರೊ ಸ್ಮಾರ್ಟ್‌ಫೋನ್ 2,676x1,236 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡ 6.72 ಇಂಚಿನ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್ ರೇಟ್ 120Hz ಆಗಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಈ ಫೋನ್ ನಾಲ್ಕು ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಆಗಿದೆ. ಇದರೊಂದಿಗೆ 4,000mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದು 100W ಸಾಮರ್ಥ್ಯದ ಸೂಪರ್ ಫಾಸ್ಟ್ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದೆ.

ಬಜೆಟ್ ಬೆಲೆಯ Realme Narzo 30 ಮತ್ತು Narzo 30 5G ಫೋನ್ ಬಿಡುಗಡೆಗೆ ದಿನಾಂಕ ಫಿಕ್ಸ್

ಹಾನರ್ 50 SE:

ಹಾನರ್ 50 SE ಸ್ಮಾರ್ಟ್‌ಫೋನ್ 2,388x1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡ 6.78 ಇಂಚಿನ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್ ರೇಟ್ 120Hz ಆಗಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಈ ಫೋನ್ ನಾಲ್ಕು ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಆಗಿದೆ. ಇದರೊಂದಿಗೆ 4,000mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, 66W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ.

ಅತಿ ವೇಗದ ಚಾರ್ಜಿಂಗ್ನೊಂದಿಗೆ ಬರಲಿದೆ Galaxy S21 FE: ಮತ್ತಷ್ಟು ಮಾಹಿತಿ ಬಹಿರಂಗ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌