Please enable javascript.Revathi baby shower ceremony,ಅದ್ದೂರಿಯಾಗಿ ನಡೆದ ನಟ ನಿಖಿಲ್ ಕುಮಾರಸ್ವಾಮಿ ಪತ್ನಿಯ ಸೀಮಂತ ಕಾರ್ಯಕ್ರಮ; ಇಲ್ಲಿವೆ ಎಕ್ಸ್‌ಕ್ಲೂಸಿವ್ ಫೋಟೋಗಳು - rider movie actor nikhil kumaraswamys wife revathi baby shower ceremony photos - vijaykarnataka

ಅದ್ದೂರಿಯಾಗಿ ನಡೆದ ನಟ ನಿಖಿಲ್ ಕುಮಾರಸ್ವಾಮಿ ಪತ್ನಿಯ ಸೀಮಂತ ಕಾರ್ಯಕ್ರಮ; ಇಲ್ಲಿವೆ ಎಕ್ಸ್‌ಕ್ಲೂಸಿವ್ ಫೋಟೋಗಳು

Curated byಅವಿನಾಶ್ ಜಿ. ರಾಮ್ | Vijaya Karnataka Web 14 Sep 2021, 4:32 pm
  • ನಿಖಿಲ್ ಪತ್ನಿ ರೇವತಿ ಸೀಮಂತ ಕಾರ್ಯಕ್ರಮ

    ನಿಖಿಲ್ ಪತ್ನಿ ರೇವತಿ ಸೀಮಂತ ಕಾರ್ಯಕ್ರಮ

    ಸ್ಯಾಂಡಲ್‌ವುಡ್‌ 'ಯುವರಾಜ' ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ದಂಪತಿಗಳು ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸದ್ಯ ರೇವತಿ ಅವರು ಈಗ 8 ತಿಂಗಳ ತುಂಬು ಗರ್ಭಿಣಿ. ಆ ಹಿನ್ನೆಲೆಯಲ್ಲಿ ಸೋಮವಾರ (ಸೆ.13) ಸೀಮಂತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಾಜಿ ಪ್ರಧಾನಿ ದೇವೇಗೌಡ ಅವರ ಕುಟುಂಬ ಸದಸ್ಯರು, ಆಪ್ತರು, ಹಿತೈಷಿಗಳು ಆಗಮಿಸಿದ್ದರು. ಎಚ್ಎಸ್ಆರ್ ಲೇಔಟ್ನಲ್ಲಿ ಇರುವ ಮಾನ್ವಿ ಕನ್ವೆನ್ಷನ್ ಹಾಲ್ನಲ್ಲಿ ಈ ಅದ್ದೂರಿ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕೊರೊನಾ ಮಾರ್ಗಸೂಚಿಯ ಕಾರಣದಿಂದ ಜಾಸ್ತಿ ಜನರನ್ನು ಆಹ್ವಾನಿಸಲಾಗಿರಲಿಲ್ಲ. ಸದ್ಯ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಲು ಕುಟುಂಬ ಸದಸ್ಯರು ಕಾತರದಿಂದ ಕಾದಿದ್ದಾರೆ. ಅಂದಹಾಗೆ, 2020ರ ಏಪ್ರಿಲ್‌ನಲ್ಲಿ ಬಿಡದಿ ಬಳಿ ಇರುವ ಕುಮಾರಸ್ವಾಮಿ ಅವರ ಫಾರ್ಮ್ಹೌಸ್ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸೀಮಂತ ಸಮಾರಂಭದ ಎಕ್ಸ್‌ಕ್ಲೂಸಿವ್ ಫೋಟೋಗಳು ಇಲ್ಲಿವೆ.

  • ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಟುಂಬ

    ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಟುಂಬ

  • ಅದ್ದೂರಿಯಾಗಿ ನಡೆದ ಸೀಮಂತ ಕಾರ್ಯಕ್ರಮ

    ಅದ್ದೂರಿಯಾಗಿ ನಡೆದ ಸೀಮಂತ ಕಾರ್ಯಕ್ರಮ

  • ಎಚ್​ಎಸ್​ಆರ್​ ಲೇಔಟ್​ನ ಮಾನ್ವಿ ಕನ್ವೆನ್ಷನ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮ

    ಎಚ್​ಎಸ್​ಆರ್​ ಲೇಔಟ್​ನ ಮಾನ್ವಿ ಕನ್ವೆನ್ಷನ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮ

  • ಸೀಮಂತ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬದ ಆಪ್ತರು ಭಾಗಿ

    ಸೀಮಂತ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬದ ಆಪ್ತರು ಭಾಗಿ

  • ಕಾರ್ಯಕ್ರಮದಲ್ಲಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ

    ಕಾರ್ಯಕ್ರಮದಲ್ಲಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ

  • ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ನಿಖಿಲ್​ ಸಕ್ರಿಯರಾಗಿದ್ದಾರೆ

    ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ನಿಖಿಲ್​ ಸಕ್ರಿಯರಾಗಿದ್ದಾರೆ

  • ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ

    ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ

  • ಪತ್ನಿ ರೇವತಿ ಜೊತೆ ನಿಖಿಲ್ ಕುಮಾರಸ್ವಾಮಿ

    ಪತ್ನಿ ರೇವತಿ ಜೊತೆ ನಿಖಿಲ್ ಕುಮಾರಸ್ವಾಮಿ